ಗಾಯಕಿಯಾದ ಗೋಲ್ಡನ್ ಸ್ಟಾರ್ ಗಣೇಶ್ ಶ್ರೀಮತಿ ಶಿಲ್ಪಾ ಗಣೇಶ್
ಗೋಲ್ಡನ್ ಸ್ಟಾರ್ ಗಣೇಶ್ ಈಗ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದಾರೆ. 'ಕೃಷ್ಣಂ ಪ್ರಣಯ ಸಖಿ' ಸಿನಿಮಾ ಬಾಕ್ಸಾಫೀಸ್‌ನಲ್ಲಿ ಗೆಲ್ಲುತ್ತಿದ್ದಂತೆ ಗಣೇಶ್ ಒಂದರ ಹಿಂದೊಂದು ಸಿನಿಮಾ ಮಾಡುತ್ತಿದ್ದಾರೆ. ಇತ್ತ ಅವರ ಪತ್ನಿ ಕೂಡ ಸಿನಿಮಾ ಪ್ರೊಡಕ್ಷನ್‌ನಲ್ಲಿ ಆಕ್ಟಿವ್ ಆಗಿದ್ದಾರೆ. ತುಳು ಸಿನಿಮಾವನ್ನು ನಿರ್ಮಾಣ ಮಾಡಿದ್ದು, ಅದನ್ನು ತೆರೆಮೇಲೆ ತರುವುದಕ್ಕೆ ತಯಾರಿಗಳನ್ನು ಮಾಡಿಕೊಳ್ಳುತ್ತಿದ್ದಾರೆ.
ಹೌದು, ಗೋಲ್ಟನ್ ಸ್ಟಾರ್ ಗಣೇಶ್ ಅವರ ಗೋಲ್ಡನ್ ಮೂವೀಸ್ ಸಂಸ್ಥೆಯಿಂದ ಈಗಾಗಲೇ ಹಲವು ಸಿನಿಮಾಗಳನ್ನು ನಿರ್ಮಿಸಿದ್ದಾರೆ. ಗಣೇಶ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದರೆ, ಇತ್ತ ಶಿಲ್ಪಾ ಗಣೇಶ್ ಸಿನಿಮಾ ನಿರ್ಮಾಣದಲ್ಲಿ ತೊಡಗಿಸಿಕೊಂಡಿದ್ದಾರೆ. ಸದ್ಯಕ್ಕೆ ಶಿಲ್ಪಾ ಗಣೇಶ್ ಕನ್ನಡ ಹಾಗೂ ತುಳು ಭಾಷೆಯಲ್ಲಿ 'ಪಿಚ್ಚರ್' ಅನ್ನೋ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ.

'ಪಿಚ್ಚರ್' ಸಿನಿಮಾವನ್ನು ಸಂದೀಪ್ ಬೆದ್ರ ನಿರ್ದೇಶನ ಮಾಡಿದ್ದಾರೆ. ನಿತ್ಯ ಪ್ರಕಾಶ್ ಬಂಟ್ವಾಳ್ ಈ ಸಿನಿಮಾಗೆ ನಾಯಕರಾಗಿ ಕಾಣಿಸಿಕೊಂಡಿದ್ದಾರೆ. ಇಷ್ಟು ದಿನ ನಿರ್ಮಾಪಕಿಯಾಗಿ ಗುರುತಿಸಿಕೊಂಡಿದ್ದ ಶಿಲ್ಪಾ ಗಣೇಶ್ ಈ ಸಿನಿಮಾ ಮೂಲಕ ಗಾಯಕಿಯಾಗಿಯೂ ಹೊರ ಹೊಮ್ಮಿದ್ದಾರೆ. ಹಾಗಿದ್ದರೆ, ಆ ಹಾಡು ಯಾವುದು? ಸಂಗೀತ ನೀಡಿದ್ದು ಯಾರು? ಇವರೊಂದಿಗೆ ಮತ್ತೆ ಯಾರೆಲ್ಲ ಹಾಡಿದ್ದಾರೆ? ಅನ್ನೋದನ್ನು ತಿಳಿಯುವುದಕ್ಕೆ ಮುಂದೆ ಓದಿ.
ಶಿಲ್ಪಾ ಗಣೇಶ್ ತಮ್ಮದೇ 'ಪಿಕ್ಚರ್' ಸಿನಿಮಾದಲ್ಲಿ "ಗೋಕುಲದ ರಾಧೆ" ಎಂಬ ಹಾಡನ್ನು ಹಾಡಿದ್ದಾರೆ. ಕನ್ನಡ ಹಾಗೂ ತುಳು ಎರಡೂ ಭಾಷೆಯಲ್ಲಿಯೂ ಶಿಲ್ಪಾ ಗಣೇಶ್ ಹಾಡಿರೋದು ವಿಶೇಷ. ಈ ಮೂಲಕ ನಿರ್ಮಾಪಕಿಯಾಗಿದ್ದ ಶಿಲ್ಪಾ ಗಣೇಶ್ ಅವರು ಈಗ ಗಾಯಕಿಯಾಗಿ ಚಿತ್ರರಂಗದಲ್ಲಿ ಹೊಸ ಅಧ್ಯಾಯ ಶುರು ಮಾಡಿದ್ದಾರೆ. "ಗೋಕುಲದ ರಾಧೆ" ಎಂಬ ಹಾಡನ್ನು ಶಿಲ್ಪಾ ಗಣೇಶ್ ಹಾಗೂ ಜಸ್ಕರಣ್ ಸಿಂಗ್ ಇಬ್ಬರೂ ಹಾಡಿದ್ದಾರೆ. ಹೀಗಾಗಿ 'ಕೃಷ್ಣಂ ಪ್ರಣಯ ಸಖಿ' ಹಾಡುಗಳು ಇಷ್ಟ ಆದಂತೆ ಇದು ಕೂಡ ಆಗಬಹುದು ಎಂಬ ನಿರೀಕ್ಷೆಯಿದೆ.
"ಗೋಕುಲದ ರಾಧೆ" ಹಾಡನ್ನು ಕನ್ನಡದಲ್ಲಿ ಅರಸು ಅಂತಾರೆ ಬರೆದಿದ್ದಾರೆ. ಅದೇ ತುಳು ಭಾಷೆಯಲ್ಲಿ ಕೀರ್ತನ್ ಭಂಡಾರಿ ಸಾಹಿತ್ಯ ರಚಿಸಿದ್ದಾರೆ. 'ಪಿಕ್ಚರ್'ಗೆ ಸ್ಯಾಮ್ಯುಯೆಲ್ ಅಭಿ ಸಂಗೀತ ನೀಡಿದ್ದಾರೆ. "ಗೋಕುಲದ ರಾಧೆ" ಹಾಡನ್ನು ಕಾಶ್ಮೀರದಲ್ಲಿ ಶೂಟಿಂಗ್ ಮಾಡಲಾಗಿದೆ. ಈ ಹಾಡಿ ಈಗಾಗಲೇ ಆನಂದ್ ಆಡಿಯೋ ಯೂಟ್ಯೂಬ್ ಚಾನಲ್‌ನಲ್ಲಿ ಬಿಡುಗಡೆಯಾಗಿದೆ. ಹಾಡಿಗೆ ಅಪಾರ ಮೆಚ್ಚುಗೆ ವ್ಯಕ್ತವಾಗಿದ್ದು, ಹಾಡಿಗೆ ವೀವ್ಸ್ ಕೂಡ ಹೆಚ್ಚಾಗಿದೆ.
ಅಂದ್ಹಾಗೆ 'ಪಿಕ್ಚರ್' ಫ್ಯಾಮಿಲಿ ಕಮ್ ಕಾಮಿಡಿ ಸ್ಟೋರಿ ಇರುವ ಸಿನಿಮಾ. ಅಲ್ಲದೆ ಇದು ಔಟ್ ಅಂಡ್ ಔಟ್ ಎಂಟರ್‌ಟೈನಿಂಗ್ ಸಿನಿಮಾ. ನಿರ್ದೇಶಕ ಸಂದೀಪ್ ಬೆದ್ರ ಅವರೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಸಂತೋಷ್ ರೈ ಪಾತಾಜೆ ಹಾಗೂ ಚಂದ್ರಶೇಖರ್ ಕೆ.ಎಸ್ ಅವರ ಕ್ಯಾಮರಾ ವರ್ಕ್ ಇದೆ. ರಾಜು ಆರ್ಯನ್ ಸಂಕಲನ, ಧನಂಜಯ್.ಬಿ - ಶ್ರೀರಾಜು ನೃತ್ಯ ನಿರ್ದೇಶನ, ರಾಧೇಶ್ - ಸಂತೋಷ್ ಪೂಜಾರಿ ಕಲಾ ನಿರ್ದೇಶನ ಹಾಗೂ ಥ್ರಿಲ್ಲರ್ ಮಂಜು ಅವರ ಸಾಹಸ ನಿರ್ದೇಶನವಿರುವ ಈ ಸಿನಿಮಾಗೆ ಮೋಹನ್ ಭಟ್ಕಳ್ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ.
ನಿತ್ಯಪ್ರಕಾಶ್ ಬಂಟ್ವಾಳ್ 'ಪಿಚ್ಚರ್' ಸಿನಿಮಾದಲ್ಲಿ ನಾಯಕನಾಗಿದ್ದು, ಅಮೃತ ಸುದು ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಇವರೊಂದಿಗೆ ದೇವದಾಸ್ ಕಾಪಿಕಾಡ್, ನವೀನ್ ಡಿ ಪಡೀಲ್, ಅರವಿಂದ್ ಬೋಳಾರ್, ಭೋಜರಾಜ್ ವಾಮಂಜೂರ್, ಸಾಯಿಕೃಷ್ಣ, ವಜ್ರಧೀರ್ ಜೈನ್, ಸದಾಶಿವ ಅಮಿನ್, ಪ್ರಸನ್ನ ಶೆಟ್ಟಿ ಬೈಲೂರ್, ಸಂದೀಪ್ ಶೆಟ್ಟಿ ಮಾಣಿ, ಉಮೇಶ್ ಮಿಜಾರ್, ಜಯಶೀಲ ಮರೊಲಿ, ರೂಪ ವರ್ಕಾಡಿ, ರವಿ ರಾಮಕುಂಜ, ಪುಷ್ಪರಾಜ್ ಬೊಳಾರ್, ಅನಿಲ್ ಉಪ್ಪಳ ಸೇರಿದಂತೆ ಹಲವು ಮಂದಿ ನಟಿಸಿದ್ದಾರೆ.


Click it and Unblock the Notifications
