ಡಾ.ರಾಜ್‌ಕುಮಾರ್‌ಗೆ ‘ಭಾರತರತ್ನ’ ನೀಡಿ-ಗಂಗರಾಜು
ಬೆಂಗಳೂರು : ವರನಟ ಡಾ.ರಾಜ್ ಕುಮಾರ್ ಅವರ ಸಾಧನೆಯನ್ನು ಪರಿಗಣಿಸಿ, ಭಾರತ ರತ್ನ ಪ್ರಶಸ್ತಿಯನ್ನು ನೀಡಬೇಕೆಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಒತ್ತಾಯಿಸಿ, ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ.
ಸಾಂಸ್ಕೃತಿಕ ರಾಯಭಾರಿಯಂತೆ ಸೇವೆ ಸಲ್ಲಿಸುತ್ತಿರುವ ಡಾ.ರಾಜ್ ಕುಮಾರ್ ಅವರನ್ನು ಪ್ರಶಸ್ತಿಗೆ ಪರಿಗಣಿಸಬೇಕು. ಗಣರಾಜೋತ್ಸವ ಸಮಾರಂಭದಲ್ಲಿ ಅವರನ್ನು ಗೌರವಿಸಬೇಕು ಎಂದು ಮಂಡಳಿಯ ಪರವಾಗಿ ಅಧ್ಯಕ್ಷ ಎಚ್.ಡಿ.ಗಂಗಾರಾಜು, ಕೇಂದ್ರ ಮಾನವ ಸಂಪನ್ಮೂಲ ಸಚಿವ ಅರ್ಜುನ್ ಸಿಂಗ್ ಅವರಿಗೆ ಪತ್ರ ಬರೆದು, ರಾಜ್‌ಕುಮಾರ್ ಬದುಕಿನ ಮೈಲಿಗಲ್ಲುಗಳನ್ನು ವಿವರಿಸಿದ್ದಾರೆ.
ತುಮಕೂರಿನ ಸಿದ್ಧಗಂಗಾ ಶ್ರೀಗಳಿಗೆ ಭಾರತರತ್ನ ಪ್ರಶಸ್ತಿಯನ್ನು ನೀಡಬೇಕೆಂಬ ಕೂಗು , ಪ್ರತಿವರ್ಷ ರಾಜ್ಯದಲ್ಲಿ ಕೇಳಿ ಬರುತ್ತಲೇ ಇದೆ. ಈ ಮಧ್ಯೆ ರಾಜ್‌ಕುಮಾರ್ ಅವರ ಹೆಸರು ಪ್ರಸ್ತಾಪಗೊಂಡಿದೆ.
(ಇನ್ಫೋ ವಾರ್ತೆ)


Click it and Unblock the Notifications











