»   » 'ಬೆಳ್ಳಿ ಸಿನಿಮಾ ಬೆಳ್ಳಿ ಮಾತಿ'ನಲ್ಲಿ ಗೋಧಿ ಬಣ್ಣ ಸಾಧಾರಣ ಮೈಕಟ್ಟು

'ಬೆಳ್ಳಿ ಸಿನಿಮಾ ಬೆಳ್ಳಿ ಮಾತಿ'ನಲ್ಲಿ ಗೋಧಿ ಬಣ್ಣ ಸಾಧಾರಣ ಮೈಕಟ್ಟು

Posted By:
Subscribe to Filmibeat Kannada

ಕರ್ನಾಟಕ ಚಲನಚಿತ್ರ ಅಕಾಡೆಮಿ ಪ್ರತಿ ಶನಿವಾರ ನಡೆಸುವ 'ಬೆಳ್ಳಿ ಸಿನಿಮಾ-ಬೆಳ್ಳಿ ಮಾತು' ಕಾರ್ಯಕ್ರಮದಲ್ಲಿ ಈ ಶನಿವಾರ (ನವೆಂಬರ್-5) 'ಗೋಧಿ ಬಣ್ಣ ಸಾಧಾರಣ ಮೈಕಟ್ಟು' ಚಲನಚಿತ್ರ ಪ್ರದರ್ಶನಗೊಳ್ಳಲಿದ್ದು, ಚಿತ್ರದ ನಿರ್ದೇಶಕ ಸೇರಿದಂತೆ ಚಿತ್ರದ ಕಲಾವಿದರು 'ಬೆಳ್ಳಿಮಾತು' ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ.

ಕನ್ನಡ ಪ್ರಶಸ್ತಿ ಪುರಸ್ಕೃತ ಹಾಗೂ ಸದಭಿರುಚಿಯ ಕನ್ನಡ ಚಿತ್ರಗಳನ್ನು ವಾರಕ್ಕೊಮ್ಮೆ, ಪ್ರತಿ ಶನಿವಾರ ಪ್ರದರ್ಶಿಸಿ ಆ ಚಿತ್ರಕ್ಕೆ ಸಂಬಂಧಿಸಿದ ನಿರ್ದೇಶಕರು, ನಿರ್ಮಾಪಕರು, ಕಲಾವಿದರು ಹಾಗೂ ತಂತ್ರಜ್ಞರೊಡನೆ ಸಂವಾದ ನಡೆಸಲು ಅವಕಾಶ ಕಲ್ಪಿಸುವ ಕಾರ್ಯಕ್ರಮ ಇದಾಗಿದೆ. ಪ್ರತಿ ವಾರವು ಚಿತ್ರ ಪ್ರೇಮಿಗಳನ್ನು ಒಂದೆಡೆ ಕಲೆಹಾಕಿ ಪ್ರಬುದ್ಧ ಚಲನಚಿತ್ರ ಪ್ರೇಕ್ಷಕ ಹಾಗೂ ನಿರ್ಮಾಪಕರ ಹಂದರವನ್ನು ಕಟ್ಟುವುದು 'ಬೆಳ್ಳಿ ಸಿನಿಮಾ-ಬೆಳ್ಳಿ ಮಾತು' ಕಾರ್ಯಕ್ರಮದ ಉದ್ದೇಶವಾಗಿದೆ.

Godhi Banna Sadharna Mykattu Show in 'Belli Cinema Belli Mathu'

ಕಳೆದ ಜೂನ್ ತಿಂಗಳಲ್ಲಿ ಬಿಡುಗಡೆಯಾಗಿದ್ದ 'ಗೋಧಿ ಬಣ್ಣ ಸಾಧಾರಣ ಮೈಕಟ್ಟು' ಸ್ಯಾಂಡಲ್ ವುಡ್ ನ ಯಶಸ್ವೀ ಚಿತ್ರಗಳಲ್ಲಿ ಒಂದು. ಒಳ್ಳೆ ಸಧಬಿರುಚಿಯ ಕಥೆ ಹೊಂದಿದ್ದ 'ಗೋಧಿ ಬಣ್ಣ ಸಾಧಾರಣ ಮೈಕಟ್ಟು' ಚಿತ್ರಕ್ಕೆ ಪ್ರೇಕ್ಷಕರ ಹಾಗೂ ವಿಮರ್ಶಕರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿತ್ತು.[ಅನಂತ್ ನಾಗ್ ಜೊತೆ ಕಳೆದು ಹೋದ ವಿಮರ್ಶಕರು]

Godhi Banna Sadharna Mykattu Show in 'Belli Cinema Belli Mathu'

ಯುವ ನಿರ್ದೇಶಕ ಹೇಮಂತ್ ರಾವ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ಅದ್ಬುತ ಚಿತ್ರಕಥೆ ಮಾಡಿದ್ದರು. ಅನಂತ್ ನಾಗ್, ರಕ್ಷಿತ್ ಶೆಟ್ಟಿ, ಶೃತಿ ಹರಿಹರನ್ ಹಾಗೂ ವಸಿಷ್ಠ ಸಿಂಹ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದರು.['ಗೋಧಿ ಬಣ್ಣ' ವಿಮರ್ಶೆ: ಅಪ್ಪ-ಮಗನ ಅ'ಸಾಧಾರಣ' ಭಾವ-ಬಂಧ]

Godhi Banna Sadharna Mykattu Show in 'Belli Cinema Belli Mathu'

ಚಿತ್ರದ ನಾಯಕ ಶಿವನಿಗೆ ಅಮೆರಿಕಾದಲ್ಲಿ ನೆಲೆಸುವ ಆಸೆ. ವೃತ್ತಿ ಜೀವನದಲ್ಲಿ ಎತ್ತರಕ್ಕೆ ಏರಬೇಕೆಂಬ ಬಯಕೆ. ಅಲ್ಜಮೈರ್ ಖಾಯಿಲೆಗೆ ತುತ್ತಾಗಿರುವ ತನ್ನ ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸುತ್ತಾನೆ. ಆತನ ತಂದೆ ಅಲ್ಲಿಂದ ಕಾಣೆಯಾಗುವುದರಿಂದ, ನಾಯಕನ ಬದುಕಿನ ದಿಕ್ಕೇ ಬದಲಾಗುವ ಕಥೆ ಹೊಂದಿದೆ ಚಿತ್ರ.

Godhi Banna Sadharna Mykattu Show in 'Belli Cinema Belli Mathu'

'ಬೆಳ್ಳಿ ಸಿನಿಮಾ-ಬೆಳ್ಳಿ ಮಾತು' ಈ ವಾರದ ಕಾರ್ಯಕ್ರಮ ಬೆಂಗಳೂರು ಮಿಲ್ಲರ್ಸ್ ರಸ್ತೆಯ ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ನವೆಂಬರ್ 5 ರಂದು ಸಂಜೆ 4 ಗಂಟೆಗೆ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಎಸ್.ವಿ.ರಾಜೇಂದ್ರ ಸಿಂಗ್ ಬಾಬು ಅವರು ವಹಿಸಿಕೊಳ್ಳಲಿದ್ದಾರೆ.

English summary
'Godhi Banna Sadharna Mykattu' Movie, Shows and Discussions in 'Belli Cinema Belli Maathu' Programme for This Weeek. Karnataka Chalanachitra Academy is Organised in Chamundeshwari Theater, Millers Road, Bengaluru on November 5, Saturday.

Kannada Photos

Go to : More Photos

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada

X