For Quick Alerts
  ALLOW NOTIFICATIONS  
  For Daily Alerts

  ಡಾ ರಾಜ್ ಹುಟ್ಟುಹಬ್ಬಕ್ಕೂ ಒಂದು ದಿನ ಮುಂಚೆಯೇ ಶುಭಕೋರಿದ ಸಿಎಂ

  |
  ಏಪ್ರಿಲ್ 24 ಡಾ ರಾಜ್ ಕುಮಾರ್ ಹುಟ್ಟುಹಬ್ಬ | ಶುಭ ಕೋರಿದ ಎಚ್ ಡಿ ಕೆ | FILMIBEAT KANNADA

  ಏಪ್ರಿಲ್ 24 ರಂದು ಡಾ ರಾಜ್ ಕುಮಾರ್ ಹುಟ್ಟುಹಬ್ಬ. ಅಣ್ಣಾವ್ರ ಜನುಮದಿನ ಆಚರಿಸಲು ರಾಜ್ ಭಕ್ತರು ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಇನ್ನು ಸರ್ಕಾರದ ವತಿಯಿಂದ ವರನಟ ಹುಟ್ಟುಹಬ್ಬ ಕಾರ್ಯಕ್ರಮ ಮಾಡಲು ಸರ್ಕಾರವೂ ಸಜ್ಜಾಗಿದೆ.

  ರಾಜ್ಯದಲ್ಲಿ ಲೋಕಸಭೆ ಚುನಾವಣೆ ನಡೆಯುತ್ತಿದ್ದು, ನೀತಿ ಸಂಹಿತೆ ಜಾರಿಯಲ್ಲಿದೆ. ಹೀಗಾಗಿ, ಸರ್ಕಾರಿ ವತಿಯಿಂದ ಯಾವುದೇ ಕಾರ್ಯಕ್ರಮವನ್ನ ಮಾಡುವಂತಿಲ್ಲ. ಇಂದು ಕರ್ನಾಟಕದಲ್ಲಿ ಎಲೆಕ್ಷನ್ ಮುಗಿಯಲಿದ್ದು, ನಾಳೆ ಅಣ್ಣಾವ್ರ ಹುಟ್ಟುಹಬ್ಬ ಆಚರಿಸಬಹುದಾಗಿದೆ.

  ಡಾ.ರಾಜ್ ನಿಧನದ ದಿನ ಸುದ್ದಿ ಪತ್ರಿಕೆಗಳಲ್ಲಿ ಕಂಡು ಬಂದ ಶೀರ್ಷಿಕೆಗಳು

  ಈ ಬಗ್ಗೆ ಸ್ವತಃ ಮುಖ್ಯಮಂತ್ರಿ ಅವರೇ ಖಚಿತ ಪಡಿಸಿದ್ದು, ಒಂದು ದಿನ ಮುಂಚೆಯೇ ರಾಜ್ ಹುಟ್ಟುಹಬ್ಬ ಶುಭಾಶಯವನ್ನ ಕೂಡ ಕೋರಿದ್ದಾರೆ. ಈ ಕುರಿತು ಟ್ವಿಟ್ಟರ್ ನಲ್ಲಿ ಸ್ಪಷ್ಟನೆ ನೀಡಿರುವ ಎಚ್ ಡಿ ಕುಮಾರ್ ಸ್ವಾಮಿ 'ರಾಜ್ಯ ಸರ್ಕಾರ ರಾಜ್ಯದೆಲ್ಲೆಡೆ ರಾಜಣ್ಣನ ಹುಟ್ಟುಹಬ್ಬ ಆಚರಿಸುತ್ತಿದೆ' ಎಂದಿದ್ದಾರೆ.

  ಡಾ.ರಾಜ್ ಬಗ್ಗೆ ಎಚ್.ಡಿ.ಕುಮಾರಸ್ವಾಮಿ ಏನಂದ್ರು ಗೊತ್ತಾ?

  'ಡಾ. ರಾಜ್ ಕುಮಾರ್ ಕನ್ನಡ ನಾಡಿನ ಸಾಂಸ್ಕೃತಿಕ ರಾಯಭಾರಿ. ತೆರೆಯ ಮೇಲಷ್ಟೇ ಅಲ್ಲ, ನಿಜ ಜೀವನದಲ್ಲಿಯೂ ಅವರ ಔದಾರ್ಯ, ಅಂತಃಕರಣ, ಜೀವನ ಮೌಲ್ಯಗಳು ಅನುಕರಣೀಯ. ನಾಳೆ ಅವರ ಹುಟ್ಟುಹಬ್ಬ. ರಾಜ್ಯ ಸರ್ಕಾರ ರಾಜ್ಯದೆಲ್ಲೆಡೆ ರಾಜಣ್ಣ ಅವರ ಹುಟ್ಟು ಹಬ್ಬ ಆಚರಿಸುತ್ತಿದೆ. ಎಲ್ಲರೂ ಭಾಗವಹಿಸಿ. ಡಾ ರಾಜ್ ಹುಟ್ಟುಹಬ್ಬದ ಶುಭಾಶಯಗಳು' ಎಂದು ಸಿಎಂ ತಮ್ಮ ಅಧಿಕೃತ ಟ್ವಿಟ್ಟರ್ ಮೂಲಕ ವಿಶ್ ಮಾಡಿದ್ದಾರೆ.

  ಎಂದಿನಂತೆ ಕಂಠೀರವ ಸ್ಟುಡಿಯೋದಲ್ಲಿರುವ ರಾಜ್ ಸಮಾಧಿ ಬಳಿ ಕುಟುಂಬಸ್ಥರು ಪೂಜೆ ಮಾಡಲಿದ್ದಾರೆ. ಪ್ರತಿವರ್ಷದಂತೆ ನೂರಾರು ಅಭಿಮಾನಿಗಳು ರಾಜ್ ಸ್ಮಾರಕಕ್ಕೆ ಭೇಟಿ ನೀಡಿ ನಮನ ಸಲ್ಲಿಸಲಿದ್ದಾರೆ.

  English summary
  Chief minister Hd Kumaraswamy announced, Government will be celebrating dr Rajkumar birthday on april 24th all over state.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X