twitter
    For Quick Alerts
    ALLOW NOTIFICATIONS  
    For Daily Alerts

    ಹೆಸರುಘಟ್ಟದಲ್ಲಿ ಫಿಲಂಸಿಟಿ ಸ್ಥಾಪನೆಗೆ ಗ್ರೀನ್ ಸಿಗ್ನಲ್

    By Rajendra
    |

    Govt to Set Up
    ಬೆಂಗಳೂರಿನ ಹೊರಹೊಲಯದಲ್ಲಿರುವ ಹೆಸರುಘಟ್ಟದಲ್ಲಿ 300 ಎಕರೆ ವಿಸ್ತೀರ್ಣದಲ್ಲಿ ಫಿಲಂಸಿಟಿ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸದಾನಂದ ಗೌಡ ಅವರು ಶುಕ್ರವಾರ (ಜೂ.15) ತಿಳಿಸಿದರು. ಅವರು ಕಂಠೀರವ ಸ್ಟುಡಿಯೋದಲ್ಲಿ ರು.2 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಮಂಜುಷಾ ಫ್ಲೋರನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

    ಇನ್ನೊಂದೆರಡು ತಿಂಗಳಲ್ಲಿ ಚಿತ್ರನಗರಿ ನಿರ್ಮಾಣಕ್ಕೆ ವಿಸ್ತೃತ ಯೋಜನಾ ವರದಿ ಸಿದ್ಧವಾಗಲಿದೆ ಎಂದು ಹೇಳಿದರು. ಈ ಚಿತ್ರನಗರಿಯನ್ನು ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಿಸಲಾಗುತ್ತದೆ. ಶೀಘ್ರದಲ್ಲೇ ಕಾಮಗಾರಿಯನ್ನು ಆರಂಭಿಸಲಾಗುತ್ತದೆ ಎಂದು ಅವರು ವಿವರ ನೀಡಿದರು.

    ನಷ್ಟದಲ್ಲಿ ಕಂಠೀರವ ಸ್ಟುಡಿಯೋಗೆ ಕಾಯಕಲ್ಪ ಕಲ್ಪಿಸುವಲ್ಲಿ ಇಲ್ಲಿಯವರೆಗೆ ಯಾವ ಸರ್ಕಾರಗಳೂ ಮುಂದಾಗಿರಲಿಲ್ಲ. ಆದರೆ ಬಿಜೆಪಿ ಸರ್ಕಾರ ಸ್ಟುಡಿಯೋಗೆ ಪುನಶ್ಚೇತನ ನೀಡಿ ಲಾಭದತ್ತ ತಂದಿದ್ದೇವೆ ಎಂದರು. ಸಾಹಿತ್ಯ, ಸಂಸ್ಕೃತಿ, ಕಲೆಯ ಅವಿಭಾಜ್ಯ ಅಂಗವಾಗಿರುವ ಕನ್ನಡ ಚಿತ್ರರಂಗದ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತದೆ ಎಂಬ ಭರವಸೆ ನೀಡಿದರು.

    ಇದೇ ಸಂದರ್ಭದಲ್ಲಿ ಅವರು ಡಾ.ರಾಜ್ ಕುಮಾರ್ ಹಾಗೂ ಡಾ.ವಿಷ್ಣುವರ್ಧನ್ ಸ್ಮಾರಕದ ನಿರ್ಮಾಣ ಕಾರ್ಯಗಳನ್ನು ಆದಷ್ಟು ಪೂರ್ಣಗೊಳಿಸಲಾಗುತ್ತದೆ ಎಂದರು. ಗೃಹಸಚಿವ ಆರ್ ಅಶೋಕ್ ಮಾತನಾಡುತ್ತಾ, ಕಂಠೀರವ ಸ್ಟುಡಿಯೋವನ್ನು ಕನ್ನಡ ಚಿತ್ರರಂಗದ ಚಟುವಟಿಕೆಗಳಿಗಷ್ಟೇ ಬಳಸಿಕೊಳ್ಳಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.

    ಕನ್ನಡ ಚಿತ್ರರಂಗದ ಬಹುತೇಕ ಸಮಸ್ಯೆಗಳನ್ನು ಈಡೇರಿಸಲಾಗಿದೆ. 75 ಚಿತ್ರಗಳಿಗೆ ನೀಡುತ್ತಿದ್ದ ಸಹಾಯಧನವನ್ನು 100 ಚಿತ್ರಗಳಿಗೆ ವಿಸ್ತರಿಸಲಾಗಿದೆ ಎಂದರು. ಕಾರ್ಯಕ್ರಮದಲ್ಲಿ ಹಿರಿಯ ತಾರೆ ಭಾರತಿ ವಿಷ್ಣುವರ್ಧನ್ ಸೇರಿದಂತೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಸುಧಾರಾಣಿ, ಚಲನಚಿತ್ರ ಅಕಾಡೆಮಿ ಅಧ್ಯಕ್ಷೆ ತಾರಾ, ಸಚಿವರಾದ ವಿ ಸೋಮಣ್ಣ, ರೇಣುಕಾಚಾರ್ಯ, ಶಾಸಕ ಬೇಳೂರು ಗೋಪಾಲಕೃಷ್ಣ ಹಾಗೂ ಸ್ಟುಡಿಯೋ ಅಧ್ಯಕ್ಷ ರುದ್ರೇಶ್ ಉಪಸ್ಥಿತರಿದ್ದರು. (ಒನ್‌ಇಂಡಿಯಾ ಕನ್ನಡ)

    English summary
    Karnataka govt to set up film city at Hesaraghatta. About 300 acres has been earmarked for a film city said the chief minister Sadananda Gowda in the inauguration function of Kanteerava Studio New Floor.
    Friday, June 15, 2012, 17:31
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X