For Quick Alerts
  ALLOW NOTIFICATIONS  
  For Daily Alerts

  'ಭಜರಂಗಿ' ಚಿತ್ರಕ್ಕೆ ಐವತ್ತು ಲಕ್ಷದ ಭರ್ಜರಿ ಸೆಟ್

  By Rajendra
  |
  ಸೆಂಚುರಿ ಸ್ಟಾರ್ ಶಿವರಾಜಕುಮಾರ್ ನಾಯಕರಾಗಿ ನಟಿಸುತ್ತಿರುವ 'ಭಜರಂಗಿ' ಚಿತ್ರಕ್ಕೆ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಏಪ್ರಿಲ್ ಮೂರರಿಂದ ಮೂರು ದಿನಗಳ ಕಾಲ ಮುತ್ತಿನ ನಗರಿ ಹೈದರಾಬಾದ್‍ನಲ್ಲಿ ಚಿತ್ರೀಕರಣ ನಡೆಯಲಿದೆ.

  ಅದಾದ ನಂತರ ಹೆಸರುಘಟ್ಟದ ಬಳಿ ಕಲಾ ನಿರ್ದೇಶಕ ರವಿ ಹಳ್ಳಿಯ ಹಿನ್ನಲೆಯ ಸೆಟ್ ನಿರ್ಮಿಸುತ್ತಿದ್ದಾರೆ. ಸುಮಾರು ಐವತ್ತು ಲಕ್ಷ ವೆಚ್ಚದಲ್ಲಿ ಈ ಸೆಟ್ ನಿರ್ಮಾಣವಾಗುತ್ತಿದೆ. ಈ ವಿಶೇಷ ಸೆಟ್ ನಲ್ಲಿ 'ಭಜರಂಗಿ'ಗೆ ಇಪ್ಪತ್ತೇಳು ದಿನಗಳ ಚಿತ್ರೀಕರಣ ನಡೆಯಲಿದೆ.

  ಎ.ಹರ್ಷ ಈ ಚಿತ್ರಕ್ಕೆ ಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ನಂದ, ಶಕ್ತಿ ಅವರೊಡನೆ ಚಿತ್ರಕಥೆ ಬರೆದಿರುವ ಹರ್ಷ ಈ ಚಿತ್ರದ ನೃತ್ಯ ನಿರ್ದೇಶಕರೂ ಹೌದು. ಫಿಲಂ ಎಂಟರ್ ಟೈನರ್ ಲಾಂಛನದಲ್ಲಿ ನಟರಾಜ್ ಗೌಡ ಹಾಗೂ ಮಂಜು(ಜಾಕ್) ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಜೈಆನಂದ್ ಛಾಯಾಗ್ರಾಹಕರಾಗಿರುವ ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಯೋಗಾನಂದ್ ಮುದ್ದಾನ್ ಸಂಭಾಷಣೆ ಬರೆದಿದ್ದಾರೆ.

  ದೀಪು.ಎಸ್.ಕುಮಾರ್ ಅವರ ಸಂಕಲನ, ರವಿವರ್ಮ ಸಾಹಸ ನಿರ್ದೇಶನ, ರಮೇಶ್ ಅವರ ನಿರ್ಮಾಣ ನಿರ್ವಹಣೆಯಿರುವ ಈ ಚಿತ್ರದ ತಾರಾಬಳಗದಲ್ಲಿ ಶಿವರಾಜಕುಮಾರ್, ಐಂದ್ರಿತಾ ರೇ, ಊರ್ವಶಿ, ಬುಲೆಟ್ ಪ್ರಕಾಶ್, ಸಾಧುಕೋಕಿಲಾ, ತಬಲನಾಣಿ, ಹೊನ್ನವಳ್ಳಿ ಕೃಷ್ಣ, ಶಿವರಾಂ, ಎಂ.ಎಸ್.ಉಮೇಶ್, ಬಿರಾದಾರ್, ಚಿಕ್ಕಣ್ಣ, ಎಂ.ಎನ್.ಲಕ್ಷ್ಮೀದೇವಿ, ಶೃತಿ, ಸಿಲ್ಲಿಲಲ್ಲಿ ಆನಂದ್ ಹಾಗೂ ರಂಗಭೂಮಿ ಕಲಾವಿದರಾದ ಲೋಕಿ, ರಾಜಕುಮಾರ್, ಮಧು, ಚೇತನ್ ಮುಂತಾದವರಿದ್ದಾರೆ. (ಒನ್ಇಂಡಿಯಾ ಕನ್ನಡ)

  English summary
  Grand set erected at Hesaraghatta for Hat Trick Hero Shivrajkumar upcoming film Bhajarangi. The set costed 50 lakhs for the producer is a house set. Hat Trick Hero Shivrajkumar is now getting six packs abs for 'Bhajarangi', directed by dance choreographer turned director Harsha. Six packs abs is for the first time in his career.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X