Don't Miss!
- Sports
IND vs AUS: ಬಾರ್ಡರ್-ಗವಾಸ್ಕರ್ ಮೊದಲ ಟೆಸ್ಟ್ ಪಂದ್ಯಕ್ಕಾಗಿ ನಾಗ್ಪುರಕ್ಕೆ ಬಂದಿಳಿದ ಟೀಂ ಇಂಡಿಯಾ
- Lifestyle
ಮಗುವಿಗೆ ತುಂಬಾ ಜ್ವರ ಇದ್ದಾಗ ಏನು ಮಾಡಬೇಕು?
- News
ಇದೇ ಮಾರ್ಚ್ 31ರೊಳಗೆ ಗಡಿ ಅಭಿವೃದ್ಧಿ ಪ್ರಾಧಿಕಾರಕ್ಕೆ 100 ಕೋಟಿ ರೂ: ಬಸವರಾಜ ಬೊಮ್ಮಾಯಿ
- Finance
6 ತಿಂಗಳಲ್ಲಿ 2ನೇ ಬಾರಿಗೆ ಉದ್ಯೋಗಿಗಳನ್ನು ವಜಾಗೊಳಿಸಿದ Byju's: ಈ ಬಾರಿ ಎಷ್ಟು ನೌಕರರು?
- Automobiles
ಭಾರತದಲ್ಲಿ ಮಾರುತಿ ಜಿಮ್ನಿ ಎಸ್ಯುವಿಗೆ ಭಾರೀ ಡಿಮ್ಯಾಂಡ್: ಪ್ರತಿಸ್ಪರ್ಧಿಗಳಿಗೆ ಹೆಚ್ಚಿದ ಆತಂಕ
- Technology
ಮಾರುಕಟ್ಟೆಗೆ ಎಂಟ್ರಿ ಕೊಟ್ಟ ವಾಯರ್ಲೆಸ್ ಚಾರ್ಜಿಂಗ್ ಬೆಂಬಲಿಸುವ ಸ್ಮಾರ್ಟ್ವಾಚ್!
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
Haripriya-Vasishta Simha: ಸುದೀಪ್, ರವಿಚಂದ್ರನ್ ಸೇರಿದಂತೆ ಹಲವು ಸೆಲೆಬ್ರಿಟಿಗಳನ್ನು ಮದುವೆಗೆ ಆಹ್ವಾನಿಸಿದ 'ಸಿಂಹಪ್ರಿಯ'
ಪ್ರೀತಿ ವಿಚಾರವಾಗಿ ಕಳೆದ ವರ್ಷ ಅತಿಹೆಚ್ಚು ಸುದ್ದಿಗೀಡಾಗಿದ್ದ ಸೆಲೆಬ್ರಿಟಿ ಜೋಡಿ ಎಂದರೆ ಅದು ವಸಿಷ್ಠ ಸಿಂಹ ಹಾಗೂ ನಟಿ ಹರಿಪ್ರಿಯಾ. ಮೊದಲಿಗೆ ಇಬ್ಬರ ನಡುವೆ ಪ್ರೀತಿ ಇದೆ ಎಂಬ ಗುಸುಗುಸು ಮೂಲಕ ಆರಂಭವಾದ ಈ ಸುದ್ದಿ ನಂತರ ಅಧಿಕೃತವೂ ಆಯಿತು.
ಸಾಮಾಜಿಕ ಜಾಲತಾಣದಲ್ಲಿ ಇಬ್ಬರೂ ಪೋಸ್ಟ್ ಹಂಚಿಕೊಳ್ಳುವ ಮೂಲಕ ತಮ್ಮಿಬ್ಬರ ನಡುವಿನ ಪ್ರೀತಿ ವಿಷಯವನ್ನು ಬಹಿರಂಗಪಡಿಸಿದರು. ಬಳಿಕ ಈ ಜೋಡಿ ಕೆಲ ದಿನಗಳಲ್ಲೇ ನಿಶ್ಚಿತಾರ್ಥವನ್ನೂ ಸಹ ಮಾಡಿಕೊಂಡಿತು. ಇನ್ನು ಇತ್ತೀಚಿಗಷ್ಟೇ ಮದುವೆ ದಿನಾಂಕವನ್ನು ಪತ್ರಿಕಾಗೋಷ್ಠಿಯಲ್ಲಿ ಬಹಿರಂಗಪಡಿಸಿದ್ದ ಈ ಜೋಡಿ ಇದೀಗ ಚಂದನವನದ ತಾರೆಯರ ಮನೆ ಮನೆಗೆ ಭೇಟಿ ನೀಡಿ ಆಹ್ವಾನಿಸುತ್ತಿದೆ.
ಸದ್ಯ ನಟ ಕಿಚ್ಚ ಸುದೀಪ್, ಕ್ರೇಜಿ ಸ್ಟಾರ್ ರವಿಚಂದ್ರನ್, ನಟಿ ಶೃತಿ, ಮಾಲಾಶ್ರೀ ಹಾಗೂ ಸಂಗೀತ ನಿರ್ದೇಶಕ ಗುರು ಕಿರಣ್ ಮನೆಗಳಿಗೆ ಭೇಟಿ ನೀಡಿರುವ ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ವಿವಾಹ ಆಮಂತ್ರಣ ಪತ್ತಿಕೆ ನೀಡಿ ಕಲಾವಿದರನ್ನು ಆಹ್ವಾನಿಸುತ್ತಿರುವ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿವೆ.
ಇನ್ನು ಜನವರಿ 26ರಂದು ಮೈಸೂರಿನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಡಲಿರುವ ಈ ಜೋಡಿ ಜನವರಿ 28ರಂದು ಬೆಂಗಳೂರಿನಲ್ಲಿ ರಿಸೆಪ್ಷನ್ ಮಾಡಿಕೊಳ್ಳಲಿದೆ. ಇನ್ನು ಮೊನ್ನೆಯಷ್ಟೇ ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಡಾಲಿ ಧನಂಜಯ್ ಮನೆಗೆ ಭೇಟಿ ನೀಡಿ ವಿವಾಹ ಆಮಂತ್ರಣ ನೀಡಿತ್ತು. ಈ ವೇಳೆಯ ಫೋಟೊವನ್ನು ಹಂಚಿಕೊಂಡಿದ್ದ ಡಾಲಿ ಧನಂಜಯ್ ಇಷ್ಟು ದಿನಗಳು ಮನೆಗೆ ಒಬ್ಬನೇ ಬರ್ತಿದ್ದ, ಈಗ ಜೋಡಿಯಾಗಿ ಬಂದಿದ್ದಾನೆ, ಮುದ್ದಾದ ಜೋಡಿ ಎಂದು ಬರೆದುಕೊಂಡು ಇಬ್ಬರಿಗೂ ಶುಭಕೋರಿದ್ದರು.