ಹತ್ರಾಸ್ ಅತ್ಯಾಚಾರ: ಅಕ್ಷಯ್ ಕುಮಾರ್‌ ಟ್ವೀಟ್ ಪ್ರಶ್ನಿಸಿದ ನಟಿ ರಮ್ಯಾ

ಉತ್ತರ ಪ್ರದೇಶದ ಹತ್ರಾಸ್ ಎಂಬಲ್ಲಿ 19 ವರ್ಷದ ಹುಡುಗಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಆ ಯುವತಿ ಮೃತಪಟ್ಟಿದ್ದಾಳೆ. ಅತ್ಯಾಚಾರಿಗಳ ವಿರುದ್ಧ ಆಕ್ರೋಶ ಹೆಚ್ಚಾಗಿದೆ, ಕೂಡಲೇ ಅವರನ್ನು ಗಲ್ಲಿಗೇರಿಸಿ, ನಡುಬೀದಿಯಲ್ಲಿ ಗುಂಡಿಕ್ಕಿ ಕೊಲ್ಲಿ ಎಂಬ ಕೂಗು ಜೋರಾಗಿದೆ.

ಯುವತಿಯ ಅತ್ಯಾಚಾರವನ್ನು ಖಂಡಿಸಿರುವ ಬಾಲಿವುಡ್ ನಟ ಅಕ್ಷಯ್ ಕುಮಾರ್ ಆರೋಪಿಗಳಿಗೆ ಶಿಕ್ಷೆಯಾಗಲಿ, ಕಾನೂನು ಬಲಗೊಳ್ಳಬೇಕು ಎಂದು ಹೇಳಿದ್ದಾರೆ. ಅಕ್ಷಯ್ ಕುಮಾರ್ ಅವರ ಈ ಅಭಿಪ್ರಾಯಕ್ಕೆ ಕನ್ನಡ ನಟಿ-ರಾಜಕಾರಣಿ ರಮ್ಯಾ ಪ್ರತಿಕ್ರಿಯಿಸಿದ್ದು, ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ. ಮುಂದೆ ಓದಿ....

ಅಕ್ಷಯ್ ಕುಮಾರ್ ಟ್ವೀಟ್‌ನಲ್ಲಿ ಏನಿದೆ?

ಅಕ್ಷಯ್ ಕುಮಾರ್ ಟ್ವೀಟ್‌ನಲ್ಲಿ ಏನಿದೆ?

''ಕೋಪ ಮತ್ತು ಹತಾಶೆ! ಹತ್ರಾಸ್ ಗ್ಯಾಂಗ್‌ರೇಪ್‌ನಲ್ಲಿ ಇಂತಹ ಕ್ರೂರತೆ. ಇದು ಯಾವಾಗ ನಿಲ್ಲುತ್ತದೆ? ನಮ್ಮ ಕಾನೂನುಗಳು ಮತ್ತು ಅವುಗಳ ಜಾರಿಗೊಳಿಸುವಿಕೆಯು ತುಂಬಾ ಕಟ್ಟುನಿಟ್ಟಾಗಿರಬೇಕು. ಕೇವಲ ಶಿಕ್ಷೆಯ ಆಲೋಚನೆಯೇ ಅತ್ಯಾಚಾರಿಗಳನ್ನು ಭಯದಿಂದ ನಡುಗಿಸಬೇಕಾಗತ್ತದೆ. ಅಪರಾಧಿಗಳನ್ನು ಗಲ್ಲಿಗೇರಿಸಿ. ಹೆಣ್ಣುಮಕ್ಕಳನ್ನು ಮತ್ತು ಸಹೋದರಿಯರನ್ನು ರಕ್ಷಿಸಲು ನಿಮ್ಮ ಧ್ವನಿಯನ್ನು ಹೆಚ್ಚಿಸಿ-ಇದು ನಾವು ಮಾಡಬಹುದಾದ ಕನಿಷ್ಠ ಕರ್ತವ್ಯ'' ಎಂದು ಟ್ವೀಟ್ ಅಕ್ಷಯ್ ಕುಮಾರ್ ಟ್ವೀಟ್ ಮಾಡಿದ್ದಾರೆ.

ಅಕ್ಷಯ್ ಟ್ವೀಟ್‌ಗೆ ರಮ್ಯಾ ಪ್ರತಿಕ್ರಿಯೆ

ಅಕ್ಷಯ್ ಟ್ವೀಟ್‌ಗೆ ರಮ್ಯಾ ಪ್ರತಿಕ್ರಿಯೆ

''ನೀವು ನಿರಾಶೆಗೊಳ್ಳುವುದನ್ನು ಮುಂದುವರಿಸುತ್ತೀರಿ. ಇದು ಕೊನೆಯದಲ್ಲ. ಏಕೆ ಎಂದು ನಿಮಗೆ ತಿಳಿದಿದೆಯೇ? ಇದು ಕಾನೂನಿನ ವಿಚಾರವಲ್ಲ, ಇದು ದ್ವೇಷಪೂರಿತ ಮನಸ್ಥಿತಿಯಿಂದ ಆಗುವುದು. ಇಂತಹ ಮನಸ್ಥಿತಿಯನ್ನು ಯಾರು ಪೋಷಿಸುತ್ತಿದ್ದಾರೆ? ಬಿಜೆಪಿ. ಪ್ರತಿದಿನ ಮಹಿಳೆಯರಿಗೆ ಅತ್ಯಾಚಾರದ ಬೆದರಿಕೆ ಹಾಕುವ ರಾಕ್ಷಸರನ್ನು ಪಿಎಂ ಮೋದಿ ಅನುಸರಿಸುತ್ತಾರೆ. ಬದಲಾವಣೆ ಮೇಲ್ಭಾಗದಲ್ಲಿ ಪ್ರಾರಂಭವಾಗಬೇಕು ಎಂದು ನೀವು ಯೋಚಿಸುವುದಿಲ್ಲವೇ?'' ಎಂದು ಅಕ್ಷಯ್ ಕುಮಾರ್ ಟ್ವೀಟ್ ಗೆ ತಿರುಗೇಟು ನೀಡಿದ್ದಾರೆ.

ಇದು ಬಿಜೆಪಿಗೆ ತಿರುಗೇಟು

ಇದು ಬಿಜೆಪಿಗೆ ತಿರುಗೇಟು

ಅಕ್ಷಯ್ ಕುಮಾರ್ ಟ್ವೀಟ್‌ಗೆ ರಮ್ಯಾ ಪ್ರತಿಕ್ರಿಯೆ ನೀಡಲು ಬಲವಾದ ಕಾರಣವೂ ಇದೆ. ಅಕ್ಷಯ್ ಕುಮಾರ್ ಪ್ರಧಾನಿ ನರೇಂದ್ರ ಮೋದಿ ಅವರ ಅನುಯಾಯಿ. ಅವರ ಸರ್ಕಾರವನ್ನು ಬೆಂಬಲಿಸಿರುವ ನಟ. ಹಾಗಾಗಿ, ಕಾಂಗ್ರೆಸ್ ಕಾಯಕರ್ತೆ ರಮ್ಯಾ ಬಾಲಿವುಡ್‌ನ ಕಾಲೆಳೆಯುವ ಮೂಲಕ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.

Recommended Video

ರಶ್ಮಿಕಾ ಮಂದಣ್ಣ ಬೀಚ್ ವರ್ಕೌಟ್ | Filmibeat Kannada
ಮೋದಿಯನ್ನು ಪ್ರಶ್ನಿಸಿದ ನಟಿ ರಮ್ಯಾ

ಮೋದಿಯನ್ನು ಪ್ರಶ್ನಿಸಿದ ನಟಿ ರಮ್ಯಾ

ಕುವೈತ್ ದೊರೆ ಮೃತಪಟ್ಟಿದ್ದಕ್ಕೆ ಸಂತಾಪ ಸೂಚಿಸಿರುವ ನರೇಂದ್ರ ಮೋದಿ, ಅತ್ಯಾಚಾರ ಮಹಿಳೆಯ ಬಗ್ಗೆ ಏಕೆ ಮಾತನಾಡಿಲ್ಲ ಎಂದು ನಟಿ ರಮ್ಯಾ ಪ್ರಶ್ನಿಸಿದ್ದಾರೆ. ''ಕ್ರೂರವಾಗಿ ಅತ್ಯಾಚಾರಕ್ಕೊಳಗಾಗಿ ಮೃತಪಟ್ಟ ಮಹಿಳೆ ಕಥೆ ಏನು ಮೋದಿ ಜಿ? ನಿಮ್ಮ ಖಂಡನೆ ಅಥವಾ ಸಂತಾಪವನ್ನು ನಾವು ನಿರೀಕ್ಷಿಸುವುದಿಲ್ಲ. ಮಹಿಳೆಯರಿಗೆ ಪ್ರತಿದಿನ ಅತ್ಯಾಚಾರ ಮತ್ತು ಮಾರಣಾಂತಿಕ ಬೆದರಿಕೆಗಳನ್ನು ಹಾಕುವ ರಾಕ್ಷಸರನ್ನು ಅನುಸರಿಸುವ ನೀವು, ಮಹಿಳೆಯರ ಬಗ್ಗೆ ಹೊಂದಿರುವ ಗೌರವ, ಅನುಭೂತಿ ಮತ್ತು ಸಹಾನುಭೂತಿ ಏನು ಎಂಬುದಕ್ಕೆ ಸಾಕ್ಷಿಯಾಗಿದೆ'' ಎಂದು ಟ್ವೀಟ್ ಮಾಡಿದ್ದಾರೆ.

More from Filmibeat

English summary
Hathras gang rape: Bollywood actor akshay kumar condemns on gang rape. now, actress-politician Ramya react on akshay tweet.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X