»   » ಕದ್ರಿ ಮಂಜುನಾಥೇಶ್ವರ ದೇವಾಲಯಕ್ಕೆ ಭೇಟಿ ನೀಡಿದ ಶಿವರಾಜ್ ಕುಮಾರ್

ಕದ್ರಿ ಮಂಜುನಾಥೇಶ್ವರ ದೇವಾಲಯಕ್ಕೆ ಭೇಟಿ ನೀಡಿದ ಶಿವರಾಜ್ ಕುಮಾರ್

By: ಮಂಗಳೂರು ಪ್ರತಿನಿಧಿ
Subscribe to Filmibeat Kannada
Hatrick Hero Shiva Rajkumar visits Kadri Temple, Mangalore

ಮಂಗಳೂರು: ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಇಂದು ಮಂಗಳೂರಿಗೆ ಭೇಟಿ ನೀಡಿದರು. ನಗರದ ಕದ್ರಿ ದೇವಾಲಯಕ್ಕೆ ಭೇಟಿ ನೀಡಿದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕದ್ರಿ ಮಂಜುನಾಥೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಇಂದು ಕದ್ರಿ ಮೈದಾನದಲ್ಲಿ ಕದ್ರಿ ಫ್ರೆಂಡ್ಸ್ ಆಯೋಜಿಸಿರುವ ಸ್ಟಾರ್ ನೈಟ್ಸ್ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಂಗಳೂರಿಗೆ ಆಗಮಿಸಿರುವ ಶಿವರಾಜ್ ಕುಮಾರ್ ತಮ್ಮ ಬಿಜಿ ಶೆಡ್ಯೂಲ್ ಮಧ್ಯೆಯೂ ಕದ್ರಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ನಂತರ ದೇವಾಲಯಕ್ಕೆ ಆಗಮಿಸಿದ್ದ ಭಕ್ತರ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡರು.

hatrick hero shivarajkumar visits kadri temple in mangalore

ಶ್ರೀಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ನಿನ್ನೆ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದಿದ್ದರು. ಮಠದ ಆವರಣದಲ್ಲಿ ನಡೆಯುತ್ತಿದ್ದ ಮುದ್ದುಕೃಷ್ಣ ವೇಷ ಧರಿಸಿದ್ದ ಮಕ್ಕಳೊಂದಿಗೆ ಬೆರೆತ ಶಿವರಾಜ್ ಕುಮಾರ್ ಮಕ್ಕಳನ್ನು ಎತ್ತಿಕೊಂಡು ಮುದ್ದಾಡಿದರು. ನಂತರ ಪರ್ಯಾಯ ಪೇಜಾವರ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದರು.

English summary
Hatrick Hero Shivarajkumar visited Kadri Temple in Mangaluru today (Sep 14th).
Please Wait while comments are loading...

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada