ವಿಶೇಷ ವಿಮಾನದಲ್ಲಿ ಅಯೋಧ್ಯೆಗೆ ಹೊರಟ ಯುವರಾಜ; ತಂದೆ ,ಅಜ್ಜಿ ತಾತ ಜೊತೆ ನಿಖಿಲ್ ಪ್ರಯಾಣ!

ನಾಳೆ (ಜನವರಿ 22) ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನೆ ಕಾರ್ಯ ನಡೆಯಲಿದೆ. ಈ ಐತಿಹಾಸ ಕ್ಷಣವನ್ನು ಕಣ್ತುಂಬಿಕೊಳ್ಳಲು ದೇಶಾದ್ಯಂತ ಗಣ್ಯರಿಗೆ ಆಹ್ವಾನ ನೀಡಲಾಗಿದೆ. ರಾಜಕೀಯ ಮುಖಂಡರು, ಉದ್ಯಮಿಗಳು, ಸಿನಿಮಾ ತಾರೆಯರು, ಕ್ರೀಡಾಪಟುಗಳಿಗೆ ಆಮಂತ್ರಣ ಕೊಡಲಾಗಿದೆ. ಕರ್ನಾಟಕದಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬಕ್ಕೂ ಆಹ್ವಾನ ನೀಡಲಾಗಿತ್ತು.

ಈ ಆಹ್ವಾನದ ಮೇರೆಗೆ ತಾತಾ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರು, ಅಜ್ಜಿ ಚೆನ್ನಮ್ಮ, ತಂದೆ ಎಚ್‌ಡಿ ಕುಮಾರಸ್ವಾಮಿ ಜೊತೆ ಸ್ಯಾಂಡಲ್‌ವುಡ್‌ನ ಯುವರಾಜ ನಿಖಿಲ್ ಕುಮಾರ್ ಅಯೋಧ್ಯೆಗೆ ತೆರಳಿದ್ದಾರೆ. ಕೆಲವು ದಿನಗಳ ಹಿಂದಷ್ಟೇ ರಾಮ ಜನ್ಮಭೂಮಿ ಟ್ರಸ್ಟ್ ವತಿ ಖುದ್ದಾಗಿ ಬಂದು ನಿಖಿಲ್ ಕುಮಾರ್ ಅವರಿಗೆ ಆಹ್ವಾನ ಪತ್ರಿಕೆ ನೀಡಿದ್ದರು.

HD Devegowda, HD Kumaraswamy, Nikhil Kumaraswamy went to Ayodhya for Sriram Mandir

ಬೆಂಗಳೂರಿನ ಎಚ್‌ಎಎಲ್‌ನಿಂದ ಪ್ರೈವೆಟ್ ಜೆಟ್‌ನಲ್ಲಿ ಎಚ್‌ಡಿ ದೇವೇಗೌಡರು, ಪತ್ನಿ ಚೆನ್ನಮ್ಮ, ಎಚ್‌ಡಿ ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರ್ ಪಯಣ ಬೆಳೆಸಿದ್ದಾರೆ. ಈ ಪೋಟೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಅಯೋಧ್ಯೆ ಶ್ರೀರಾಮ ಮಂದಿ ಉದ್ಘಾಟನೆ ದಿನವೇ ನಿಖಿಲ್ ಕುಮಾರ್‌ ಹುಟ್ಟುಹಬ್ಬವಿದೆ. ಅಯೋಧ್ಯೆಯಲ್ಲಿ ಶ್ರೀರಾಮ ಸಮ್ಮುಖದಲ್ಲಿಯೇ ಹುಟ್ಟುಹಬ್ಬವನ್ನು ಸಂಭ್ರಮಿಸಲಿದ್ದಾರೆ. ನಿಖಿಲ್ ಜನ್ಮ ದಿನದಂದೇ ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನೆ ಆಗುತ್ತಿರೋದು ನಿಖಿಲ್‌ಗೆ ಖುಷಿ ಕೊಟ್ಟಿದೆ.

ನಿಖಿಲ್ ಕುಮಾರ್ ಕೆಲವು ದಿನಗಳ ಹಿಂದೆನೇ ತಮ್ಮ ಅಭಿಮಾನಿಗಳಿಗೆ ಸಂದೇಶವನ್ನು ರವಾನಿಸಿದ್ದರು. ಅಯೋಧ್ಯೆಯಲ್ಲಿ ನಡೆಯಲಿರುವ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆಗೆ ಹೋಗುತ್ತಿರುವುದರಿಂದ ಈ ಬಾರಿ ಹುಟ್ಟುಹಬ್ಬವನ್ನು ನಿಮ್ಮೊಂದಿಗೆ ಆಚರಣೆ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ನಿಖಿಲ್ ಹೇಳಿದ್ದರು.

ನಿಖಿಲ್ ಕುಮಾರ್ ಹಿಂದೆನೇ ಸ್ಯಾಂಡಲ್‌ವುಡ್‌ನ ಮತ್ತೊಬ್ಬ ನಟ ರಿಷಬ್ ಶೆಟ್ಟಿ ಕೂಡ ಪತ್ನಿ ಪ್ರಗತಿ ಶೆಟ್ಟಿಗೆ ಅಯೋಧ್ಯೆಗೆ ತೆರಳಿದ್ದಾರೆ. ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆಗೂ ಮುನ್ನ ಪತ್ನಿ ಪ್ರಗತಿ ಶೆಟ್ಟಿಯೊಂದಿಗೆ ಹನುಮನ ದರ್ಶನವನ್ನು ಪಡೆದು ಬಂದಿರೋ ಫೋಟೊವನ್ನು ಶೇರ್ ಮಾಡಿಕೊಂಡಿದ್ದಾರೆ.

More from Filmibeat

English summary
Former prime minister HD Devegowda family went Ayodhya for Sriram Mandir:
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X