For Quick Alerts
  ALLOW NOTIFICATIONS  
  For Daily Alerts

  ಮೊಮ್ಮಗನನ್ನು ಎತ್ತಿ ಮುದ್ದಾಡಿದ ಕುಮಾರಸ್ವಾಮಿ: ದೇವೇಗೌಡರ ಕೈಯಲ್ಲಿ ಮರಿಗೌಡ್ರು

  |

  ದೊಡ್ಡ ಗೌಡರ ಕುಟುಂಬದಲ್ಲಿ ಸಂಭ್ರಮ ಮನೆಮಾಡಿದೆ. ನಟ ಹಾಗೂ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪತ್ನಿ ರೇವತಿ ಶುಕ್ರವಾರ (ಸೆಪ್ಟೆಂಬರ್ 24) ಮಧ್ಯಾಹ್ನ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ರೇವತಿ ನಿಖಿಲ್ ಕುಮಾರ್ ಗಂಡು ಮಗುವಿಗೆ ಜನ್ಮ ನೀಡಿದ್ದು, ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ಕುಟುಂಬಸ್ಥರಿಂದ ಮಾಹಿತಿ ನೀಡಿದ್ದಾರೆ.

  ಮನೆಗೆ ಮೊಮ್ಮಗ ಬಂದ ಖುಷಿಯಲ್ಲಿದ್ದಾರೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ. ಈಗಾಗಲೇ ಮೊಮ್ಮಗನ್ನು ನೋಡಲು ಕುಮಾರಸ್ವಾಮಿ ದಂಪತಿ ಮತ್ತು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ದಂಪತಿ ಆಸ್ಪತ್ರೆಗೆ ಭೇಟಿ ನೀಡಿ ತಾಯಿ, ಮಗುವಿನ ಆರೋಗ್ಯ ವಿಚಾರಿಸಲಿದ್ದಾರೆ. ಮಗುವನ್ನು ಎತ್ತಿಕೊಂಡು ಮುದ್ದಾಡಿದ್ದಾರೆ. ಈಗಾಗಲೆ ನಿಖಿಲ್ ಮಗುವಿನ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

  ಮರಿಗೌಡರನ್ನು ಎತ್ತಿಕೊಂಡಿರುವ ದೇವೇಗೌಡರ ಫೋಟೋ ಅಭಿಮಾನಿಗಳ ಗಮನ ಸೆಳೆಯುತ್ತಿದೆ. ಮರಿಗೌಡರನ್ನು ನೋಡುತ್ತಿರುವ ದೇವೇಗೌಡರು ಜೊತೆಯಲ್ಲಿ ನಿಖಿಲ್ ಕುಮಾರ್ ನಿಂತಿರುವ ಫೋಟೋ ಮತ್ತು ಕುಮಾರಸ್ವಾಮಿ ಎತ್ತಿಕೊಂಡಿರುವ ಫೋಟೋ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ತಂದೆಯಾದ ಸಂಭ್ರಮದಲ್ಲಿರುವ ನಿಖಿಲ್ ಮತ್ತು ಪತ್ನಿ ರೇವತಿ ದಂಪತಿಗೆ ಅಭಿಮಾನಿಗಳಿಂದ ಅಭಿನಂದನೆಗಳು ಹರಿದುಬರುತ್ತಿವೆ.

  ತಾತನಾದ ಸಂತಸವನ್ನು ಎಚ್‌ ಡಿ ಕುಮಾರಸ್ವಾಮಿ ಟ್ವಿಟ್ಟರ್ ಮೂಲಕ ಸಂತಸ ಹಂಚಿಕೊಂಡಿದ್ದಾರೆ. ''ನನ್ನ ಜೀವನದಲ್ಲಿ ಇನ್ನೊಂದು ಶುಭ ಘಳಿಗೆ ಬಂದಿದೆ. ನಮ್ಮ ಪರಿವಾರಕ್ಕೆ ಹೊಸ ಸದಸ್ಯನ ಆಗಮನವಾಗಿದೆ. ತಾತನಾದೆ ಎಂದು ಹೇಳಲು ಅತೀವ ಸಂತಸವಾಗುತ್ತಿದೆ. ಕಂದನಿಗೆ ನಿಮ್ಮೆಲ್ಲರ ಹಾರೈಕೆ ಮತ್ತು ಆಶೀರ್ವಾದ ಇರಲಿ ಎಂದು ಪ್ರಾರ್ಥನೆ ಮಾಡುತ್ತೇನೆ'' ಎಂದು ಪೋಸ್ಟ್ ಹಾಕಿದ್ದಾರೆ.

  ಇನ್ನು ತಂದೆಯಾದ ಸಂತಸವನ್ನು ನಿಖಿಲ್ ಕುಮಾರಸ್ವಾಮಿ ಕೂಡ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಪುತ್ರನನ್ನು ಎತ್ತಿಕೊಂಡಿರುವ ಫೋಟೋ ಶೇರ್ ಮಾಡಿರುವ ನಿಖಿಲ್, "ನಮ್ಮ ಜೀವನದ ಈ ವಿಶೇಷ ಕ್ಷಣವನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ಸಂತೋಷವಾಗುತ್ತಿದೆ" ಎಂದು ಹೇಳಿದ್ದಾರೆ.

  2020ರ ಏಪ್ರಿಲ್​ನಲ್ಲಿ ರೇವತಿ ಜೊತೆ ನಿಖಿಲ್​ ಕುಮಾರಸ್ವಾಮಿ ಸಪ್ತಪದಿ ತುಳಿದಿದ್ದರು. ಲಾಕ್ ​ಡೌನ್​ ನಿಯಮಗಳ ಪ್ರಕಾರ ವಿವಾಹ ಸಮಾರಂಭ ನೆರವೇರಿತ್ತು. ಬಿಡದಿ ಬಳಿ ಇರುವ ಫಾರ್ಮ್​ ಹೌಸ್ ​ನಲ್ಲಿ ರೇವತಿ ಮತ್ತು ನಿಖಿಲ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ನಿಖಿಲ್ ದಂಪತಿ ಒಂದು ವರ್ಷದ ಬಳಿಕ ಮೊದಲ ಮಗುವನ್ನು ಸ್ವಾಗತಿಸಿದ ಸಂತಸದಲ್ಲಿದ್ದಾರೆ.

  English summary
  HD Devegowda, Kumaraswamy and family visited to hospital to see Nikhil Kumar's son.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X