For Quick Alerts
  ALLOW NOTIFICATIONS  
  For Daily Alerts

  ದರ್ಶನ್ ಹೋಟೆಲ್ ಗಲಾಟೆ ಕುರಿತು ಎಚ್‌ಡಿ ಕುಮಾರಸ್ವಾಮಿ ಏನಂದ್ರು?

  |

  ಹೋಟೆಲ್ ಸಪ್ಲೈಯರ್ ಮೇಲೆ ನಟ ದರ್ಶನ್ ಹಲ್ಲೆ ಮಾಡಿದ್ದಾರೆ ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ''ಸರ್ಕಾರ ಈ ಬಗ್ಗೆ ಕ್ರಮ ತೆಗೆದುಕೊಳ್ಳಲಿ'' ಎಂದಿದ್ದಾರೆ.

  ''ಇಂತಹ ವಿಷಯಗಳ ಬಗ್ಗೆ ನಾನು ಮಾತನಾಡುವುದಿಲ್ಲ. ಆಮೇಲೆ ಅದಕ್ಕೆ ಬೇರೆ ಏನೋ ಸಂಬಂಧ ಕಲ್ಪಿಸುವುದು ಬೇಡ. ಇದೆಲ್ಲ ಅವಶ್ಯಕತೆ ಇಲ್ಲ. ಯಾರಾದರೂ ತಪ್ಪು ಮಾಡಿದ್ರೆ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು, ನನಗೆ ಇದು ಸಂಬಂಧ ಇಲ್ಲ. ಈ ವಿಷಯಗಳು ಏನು ಎಂದು ಸರ್ಕಾರ ಮಾಹಿತಿ ಹೇಳಬೇಕು'' ಎಂದು ತಿಳಿಸಿದ್ದಾರೆ.

  2 ದಿನದಲ್ಲಿ 25 ಲಕ್ಷ ಸಂಗ್ರಹ: ಡಿ-ಬಾಸ್ ಮನವಿಗೆ ಭರ್ಜರಿ ಪ್ರತಿಕ್ರಿಯೆ2 ದಿನದಲ್ಲಿ 25 ಲಕ್ಷ ಸಂಗ್ರಹ: ಡಿ-ಬಾಸ್ ಮನವಿಗೆ ಭರ್ಜರಿ ಪ್ರತಿಕ್ರಿಯೆ

  ಇನ್ನು ಸಾರ್ವಜನಿಕ ಜೀವನದಲ್ಲಿ ಈ ರೀತಿ ಎಲ್ಲಾ ನಡೆದುಕೊಳ್ಳುವುದು ಎಷ್ಟು ಸರಿ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ''ಅದು ಅವರವರ ವೈಯಕ್ತಿಕ, ಸಾರ್ವಜನಿಕ ಜೀವನದಲ್ಲಿ ಹೇಗಿರಬೇಕು ಎನ್ನುವುದು ಅವರಿಗೆ ಸೇರಿದ್ದು'' ಎಂದಿದ್ದಾರೆ.

  ಇಂದ್ರಜಿತ್ ಲಂಕೇಶ್ ಆರೋಪ

  ಅರುಣಾ ಕುಮಾರಿ ಪ್ರಕರಣ ಸ್ವಲ್ಪ ತಣ್ಣಗಾಗುತ್ತಿದ್ದಂತೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ನಟ ದರ್ಶನ್ ವಿರುದ್ಧ ಸಿಡಿದೆದ್ದಿದ್ದಾರೆ. ಸಂದೇಶ್ ಪ್ರಿನ್ಸ್ ಹೋಟೆಲ್‌ನಲ್ಲಿ ವೇಟರ್‌ವೊಬ್ಬರ ಮೇಲೆ ನಟ ದರ್ಶನ್ ಹಲ್ಲೆ ಮಾಡಿದರು. ಲಾಕ್‌ಡೌನ್‌ ಸಮಯದಲ್ಲಿ ಪಾರ್ಟಿ ಮಾಡಿದರು ಎಂದು ದೂರಿದರು.

  ಇಂದ್ರಜಿತ್ ತುಂಬಾ ದೊಡ್ಡೋರು ಪ್ರೂವ್ ಮಾಡ್ಲಿ ನೋಡೋಣ | Darshan | Indrajit Lankesh | Filmibeat Kannada

  ಈ ಸಂಬಂಧ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ದೂರು ನೀಡಿದ್ದು, ತನಿಖೆ ಮಾಡಿ ಸೆಲೆಬ್ರಿಟಿಗಳ ವಿರುದ್ಧ ಕ್ರಮ ಜರುಗಿಸಿ ಎಂದು ಮನವಿ ಮಾಡಿದ್ದಾರೆ.

  English summary
  Karnataka Ex CM HD Kumaraswamy Reaction about Darshan assaulting Waiter.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X