ಚೇತನ್‌ಗೆ ಗಡಿಪಾರು ಭೀತಿಯಿಂದ ಬಿಗ್ ರಿಲೀಫ್: ಹೈಕೋರ್ಟ್‌ನಿಂದ ಷರತ್ತು ಬದ್ಧ ರಿಲೀಫ್

ಸ್ಯಾಂಡಲ್‌ವುಡ್‌ ನಟ ಚೇತನ್ ಅಹಿಂಸಾ ವಿರುದ್ಧ ಹಲವು ವಿವಾದಗಳು ಸುತ್ತಿಕೊಂಡಿದ್ದವು. ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಹಾಗೂ ಇನ್ನಿತರ ವಿಷಯಗಳಿಗೆ ಸಂಬಂಧಿಸಿದಂತೆ ಚೇತನ್ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ ಸೋಶಿಯಲ್ ಮೀಡಿಯಾಗಳಲ್ಲೂ ವಿರೋಧ ಹೊರಹಾಕಿದ್ದರು.

ಚೇತನ್ ಅಹಿಂಸ ಭಾರತ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಡಂಡಿದ್ದು, ಸಮಾಜದಲ್ಲಿ ದ್ವೇಷ ಮೂಡಿ ಪ್ರಯತ್ನ ಮಾಡಿದ್ದಾರೆಂಬ ಆರೋಪದ ಬೆನ್ನಲ್ಲೇ ಕೇಂದ್ರ ಸರ್ಕಾರ ನೋಟಿಸ್ ನೀಡಿತ್ತು. ಈ ಸಂಬಂಧ ಚೇತನ್​ ಕಡೆಯಿಂದ ಉತ್ತರವನ್ನೂ ಪಡೆದಿತ್ತು. ಈ ಸಂದರ್ಭದಲ್ಲಿ ನಟ ಚೇತನ್ ನೀಡಿರುವ ಉತ್ತರ ಸಮಾಧಾನ ನೀಡಿಲ್ಲ ಅನ್ನೋ ಕಾರಣಕ್ಕೆ ಕೇಂದ್ರ ಸರ್ಕಾರ ಚೇತನ್‌ ಅವರ ಒಸಿಐ ಕಾರ್ಡ್ ರದ್ದುಪಡಿಸಿತ್ತು.

High Court gave relief to Chetan Ahimsa from overseas citizenship of india card cancellation

ಕೇಂದ್ರ ಸರ್ಕಾರ ಒಸಿಐ ಮಾನ್ಯತೆ ರದ್ದು ಮಾಡಿದ ಹಿನ್ನೆಲೆಯಲ್ಲಿ ಗಡಿಪಾರಾಗುವ ಭೀತಿಯಲ್ಲಿ ಚೇತನ್ ಇದ್ದರು. ಈ ವೇಳೆ ಚೇತನ್ ವಾದವನ್ನು ಆಲಿಸದೇ ಈ ಕ್ರಮ ಕೈಗೊಂಡಿದ್ದು ಸರಿಯಲ್ಲ ಎಂದು ಚೇತನ್ ಪರ ವಕೀಲರು ವಾದ ಮಂಡಿಸಿದ್ದರು. ಈ ಸಂಬಂಧ ಈಗ ನಟ ಚೇತನ್‍ಗೆ ಹೈಕೋರ್ಟ್‌ ಷರತ್ತು ಹಾಕಿ ಈ ಪ್ರಕರಣದಿಂದ ಕೊಂಚ ರಿಲೀಫ್ ಕೊಟ್ಟಿದೆ.

ನ್ಯಾ. ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಚೇತನ್ ಒಸಿಐ ಪ್ರಕರಣದಲ್ಲಿ ಈ ಆದೇಶ ಹೊರಡಿಸಿದೆ. ಇದಕ್ಕೂ ಮುನ್ನ ನಟ ಚೇತನ್ ಪರ ವಕೀಲರು, ನಟನ ವಾದವನ್ನು ಆಲಿಸದೇ ಕ್ರಮ ಕೈಗೊಳ್ಳಲಾಗಿದೆ. ಇನ್ನೊಂದು ಕಡೆ ಕೇಂದ್ರ ಸರ್ಕಾರದ ಪರ ವಕೀಲರು ಸರ್ಕಾರದ ಈ ಕ್ರಮವನ್ನು ಸಮರ್ಥಿಸಿಕೊಂಡಿದ್ದರು. ಚೇತನ್ ನ್ಯಾಯಾಂಗದ ವಿರುದ್ಧವೂ ಆಕ್ಷೇಪಾರ್ಹ ಹೇಳಿಕೆ ನೀಡಿದ್ದು, ಕೇಂದ್ರ ಸರ್ಕಾರದ ಕ್ರಮಕ್ಕೆ ತಡೆ ನೀಡದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಕೀಲರಾದ ಎಎಜಿ ಅರುಣ್ ಶ್ಯಾಮ್, ಎಎಸ್ ಜಿ ಶಾಂತಿಭೂಷಣ್ ವಾದ ಮಂಡಿಸಿದ್ದರು.

High Court gave relief to Chetan Ahimsa from overseas citizenship of india card cancellation

2018ರಲ್ಲಿ ನಟ ಚೇತನ್‍ಗೆ ಓವರ್ ಸೀಸ್ ಸಿಟಿಜನ್ ಆಫ್ ಇಂಡಿಯಾ ಕಾರ್ಡ್ ನೀಡಲಾಗಿತ್ತು. ಆದ್ರೀಗ ಚೇತನ್ ಭಾರತ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆಂದು, ಸಮುದಾಯಗಳ ನಡುವೆ ದ್ವೇಷ ಮೂಡಿಸುತ್ತಿದ್ದಾರೆಂಬ ಆರೋಪ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನೋಟಿಸ್ ನೀಡಿತ್ತು. ಬಳಿಕ ಅವರ ಒಸಿಐ ಕಾರ್ಡ್ ಅನ್ನು ರದ್ದು ಪಡಿಸಿತ್ತು.

ಚೇತನ್ ಹಾಗೂ ಕೇಂದ್ರ, ರಾಜ್ಯ ಸರ್ಕಾರದ ಪರ ವಕೀಲರ ವಾದವನ್ನು ಆಲಿಸಿದ ಬಳಿಕ ಹೈಕೋರ್ಟ್ ಷರತ್ತುಬದ್ಧ ರಿಲೀಫ್ ನೀಡಿದೆ. ನ್ಯಾಯಾಂಗದ ಬಗ್ಗೆ ನಟ ಚೇತನ್ ಟ್ವೀಟ್ ಮಾಡಬಾರದು. ಅಲ್ಲದೆ ವಿಚಾರಣೆಗೆ ಬಾಕಿಯಿರುವ ಪ್ರಕರಣಗಳ ಬಗ್ಗೆನೂ ಟ್ವೀಟ್ ಮಾಡುಬಾರದು ಎಂದ ಹೈಕೋರ್ಟ್ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಹಾಗೇ ಜೂನ್ 2ನೇ ತಾರೀಕಿನವರೆಗೂ ನಟ ಚೇತನ್ ವಿರುದ್ ಕ್ರಮ ಕೈಗೊಳ್ಳಬಾರದೆಂದು ನ್ಯಾಯಾಲಯದ ಆದೇಶವನ್ನು ನೀಡಿದೆ.

More from Filmibeat

English summary
High Court gave relief to Chetan Ahimsa from overseas citizenship of India card cancellation, know more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X