ಸಿನಿಮಾ ಟಿಕೆಟ್ ದರ 200 ರೂ. ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ

ಸಿನಿಮಾ ಟಿಕೆಟ್ ದರ 200 ರೂ. ನಿಗದಿ ಮಾಡಿ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ದುಬಾರಿ ಸಿನಿಮಾ ಟಿಕೆಟ್ ದರದಿಂದ ಪ್ರೇಕ್ಷಕರು ಬೇಸತ್ತಿದ್ದರು. ಹಾಗಾಗಿ ಏಕರೂಪ ಟಿಕೆಟ್ ದರವನ್ನು ಸರ್ಕಾರ ಜಾರಿಗೆ ತಂದಿತ್ತು. ಅದರ ಪ್ರಕಾರ ಸಿಂಗಲ್ ಸ್ಕ್ರೀನ್ ಹಾಗೂ ಮಲ್ಟಿಪ್ಲೆಕ್ಸ್‌ಗಳಲ್ಲಿ ಒಂದು ಟಿಕೆಟ್‌ನ ಮೂಲ ಬೆಲೆ 200 ರೂ. ದಾಟಬಾರದು. ತೆರಿಗೆಯೂ ಸೇರಿ ದರ 236 ರೂ. ಆಗಿತ್ತು.

ಸೆಪ್ಟೆಂಬರ್ 13ರಿಂದಲೇ ಸರ್ಕಾರದ ನಿಯಮ ಜಾರಿಗೆ ಬಂದಿತ್ತು. ಇದು ಸಹಜವಾಗಿಯೇ ಸಿನಿರಸಿಕರ ಸಂತಸಕ್ಕೆ ಕಾರಣವಾಗಿತ್ತು. ಫಿಲ್ಮ್ ಚೇಂಬರ್ ಸೇರಿದಂತೆ ಚಿತ್ರರಂಗದ ಕೆಲವರು ಈ ಆದೇಶವನ್ನು ಸ್ವಾಗತಿಸಿದ್ದರು. ಆದರೆ ಸರ್ಕಾರ ಆದೇಶ ವಿರೋಧಿಸಿ ಮಲ್ಟಿಪ್ಲೆಕ್ಸ್ ಸಂಘಟನೆ, ಹೊಂಬಾಳೆ ಫಿಲ್ಮ್ಸ್ ಚಿತ್ರ ನಿರ್ಮಾಣ ಸಂಸ್ಥೆ ಸೇರಿ ಕೆಲ ನಿರ್ಮಾಪಕರು ಕೋರ್ಟ್ ಮೆಟ್ಟಿಲೇರಿದ್ದರು. ರಿಟ್ ಅರ್ಜಿ ಸಲ್ಲಿಸಿದ್ದರು.

High Court Stays Karnataka Government Order Capping Cinema Ticket Prices at 200

ಸರ್ಕಾರದ ಆದೇಶದ ಬಗ್ಗೆ ಸೆಪ್ಟೆಂಬರ್ 16ರಂದು ನ್ಯಾಯಾಲಯದಲ್ಲಿ ವಾದ-ಪ್ರತಿವಾದ ನಡೆದಿತ್ತು. ಇಂದು(ಸೆಪ್ಟೆಂಬರ್ 23) ಹೈಕೋರ್ಟ್ ಏಕಸದಸ್ಯ ಪೀಠ ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ ನೀಡಿದೆ. ಅಂದು ವಾದ - ಪ್ರತಿವಾದ ಆಲಿಸಿದ್ದ ಕೋರ್ಟ್ ಆದೇಶವನ್ನು ಕಾಯ್ದಿರಿಸಿತ್ತು. ಇಂದು(ಸೆಪ್ಟೆಂಬರ್ 23) ಹೈಕೋರ್ಟ್ ಏಕಸದಸ್ಯ ಪೀಠ ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ ನೀಡಿ ಆದೇಶ ನೀಡಿದೆ. 'ಕಾಂತಾರ- 1' ಸಿನಿಮಾ ಬಿಡುಗಡೆ ಹೊಸ್ತಿಲಲ್ಲಿ 200 ರೂ. ಟಿಕೆಟ್ ದರ ವಿಚಾರದ ಬಗ್ಗೆ ಹೊಂಬಾಳೆ ಕೂಡ ಮಲ್ಟಿಪೆಕ್ಸ್ ಅಸೋಸಿಯೇಷನ್ ಜೊತೆ ಕೋರ್ಟ್‌ಗೆ ಹೋಗಿತ್ತು. ಕೋರ್ಟ್ ಆದೇಶದಿಂದ ಸಮಾಧಾನವಾದಂತಾಗಿದೆ.

ಮಲ್ಟಿಪ್ಲೆಕ್ಸ್‌ಗಳ ಪರ ಹಿರಿಯ ವಕೀಲ ಮುಖುಲ್ ರೊಹ್ಟಗಿ ಹಾಗೂ ಧ್ಯಾನ್ ಚಿನ್ನಪ್ಪ ತಮ್ಮ ವಾದವನ್ನು ಮಾಡಿದರು. "ರಾಜ್ಯ ಸರ್ಕಾರ ಮಲ್ಟಿಪ್ಲೆಕ್ಸ್ ಹಾಗೂ ಸಿಂಗಲ್ ಸ್ಕ್ರೀನ್‌ ಥಿಯೇಟರ್‌ಗಳಲ್ಲಿ ಟಿಕೆಟ್ ದರ 200 ರೂ. ನಿಗದಿಪಡಿಸಿದೆ. ಆದರೆ ಸರ್ಕಾರ ಏಕಪಕ್ಷೀಯವಾಗಿ ದರ ನಿಗದಿ ಮಾಡಿದೆ. ಸರ್ಕಾರದ ಈ ನಿಯಮ ಕಾನೂನುಬಾಹಿರ ಹಾಗೂ ಸಂವಿಧಾನದ ಸಮಾನತೆ, ಅಭಿವ್ಯಕ್ತಿ ಸ್ವಾತಂತ್ರ್ಯ ಉಲ್ಲಂಘನೆಯಾಗಿದೆ. ಟಿಕೆಟ್ ಖರೀದಿಸಿ ಚಿತ್ರ ನೋಡುವುದು ಗ್ರಾಹಕನಿಗೆ ಬಿಟ್ಟದ್ದು. ಈ ವಿಚಾರದಲ್ಲಿ ಸರ್ಕಾರ ಮಧ್ಯಪ್ರವೇಶಿಸಬಾರದು. ಮಲ್ಟಿಪ್ಲೆಕ್ಸ್‌ ನಿರ್ಮಾಣಕ್ಕೆ ಕೋಟ್ಯಂತರ ರೂ. ಹಣ ಖರ್ಚು ಮಾಡಿರುತ್ತಾರೆ. ಸೌಲಭ್ಯ ಒದಗಿಸಿರುವ ಸಂಸ್ಥೆಗಳಿಗೆ ದರ ನಿಗದಿ ಸರಿಯಲ್ಲ" ಎಂದು ಆಗ್ರಹಿಸಿದ್ದರು.

ಕಳೆದ ಬಾರಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗಲೇ ಸಿನಿಮಾ ಟಿಕೆಟ್ ದರ ವಿಚಾರ ಚರ್ಚೆ ಆಗಿತ್ತು. ಆಗ ಕೂಡ ಸಿಎಂ ಟಿಕೆಟ್ ದರ ನಿಗದಿಗೆ ಮುಂದಾಗಿದ್ದರು. ಈ ಬಾರಿ ಬಜೆಟ್‌ನಲ್ಲೇ ಈ ಬಗ್ಗೆ ಪ್ರಸ್ತಾಪಿಸಿದ್ದರು. ಇದೇ ವಿಚಾರವನ್ನು ರಾಜ್ಯ ಸರ್ಕಾರದ ಪರ ವಕೀಲರಾದ ಎಎಜಿ ಇಸ್ಮಾಯಿಲ್ ಜಬೀವುಲ್ಲಾ ವಾದಿಸಿದ್ದರು. "ಬಜೆಟ್‌ನಲ್ಲೇ ಸಿನಿಮಾ ಟಿಕೆಟ್ ದರ ಮಿತಿ ಬಗ್ಗೆ ಘೋಷಿಸಲಾಗಿತ್ತು, ನಿಯಮ ಜಾರಿಗೆ ತರುವ ಮುನ್ನ ಕರಡು ಅಧಿಸೂಚನೆಗೆ ಆಕ್ಷೇಪಣೆಗೆ ಸೂಚಿಸಲಾಗಿತ್ತು. ಆ ಬಳಿಕವೇ ತೀರ್ಮಾನ ತೆಗೆದುಕೊಳ್ಳಲಾಗಿದೆ. ಸರ್ಕಾರಕ್ಕೆ ಸಿನಿಮಾ ಟಿಕೆಟ್ ದರ ನಿಗದಿಪಡಿಸುವ ಅಧಿಕಾರವಿದೆ" ಎಂದಿದ್ದರು.

ಒಟ್ಟಾರೆ ಹೈಕೋರ್ಟ್ ತಡೆಯಾಜ್ಞೆಯಿಂದ ಸಿನಿರಸಿಕರಿಗೆ ನಿರಾಸೆಯಾಗಿದೆ. ಕೇವಲ 10 ದಿನಕ್ಕೆ 236 ರೂಪಾಯಿಗೆ ಮಲ್ಟಿಪ್ಲೆಕ್ಸ್‌ಗಳಲ್ಲಿ ಸಿನಿಮಾ ವೀಕ್ಷಿಸುವ ಅವಕಾಶ ಇಲ್ಲದಂತಾಗಿದೆ. ಮುಂದೆ ಇದು ಯಾವ ಯಾವ ಸ್ವರೂಪ ಪಡೆದುಕೊಳ್ಳುತ್ತದೆ ಎನ್ನುವುದನ್ನು ಕಾದು ನೋಡಬೇಕಿದೆ.

More from Filmibeat

English summary
Government’s Cinema Ticket Price Limit of ₹200 Stayed by Court
Read more about: politics sandalwood theater
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X