Don't Miss!
- News
ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಪತ್ರ ನಕಲಿ ಎಂದ ಸಿದ್ದರಾಮಯ್ಯ.! ಆ ಪತ್ರದಲ್ಲಿ ಏನಿದೆ.?
- Sports
IND-W vs SA-W T20 Tri-series Final: ಭಾರತ ವನಿತೆಯರ ವಿರುದ್ಧ ದಕ್ಷಿಣ ಆಫ್ರಿಕಾಗೆ ಜಯ
- Lifestyle
ಮಗುವಿಗೆ ತುಂಬಾ ಜ್ವರ ಇದ್ದಾಗ ಏನು ಮಾಡಬೇಕು?
- Finance
6 ತಿಂಗಳಲ್ಲಿ 2ನೇ ಬಾರಿಗೆ ಉದ್ಯೋಗಿಗಳನ್ನು ವಜಾಗೊಳಿಸಿದ Byju's: ಈ ಬಾರಿ ಎಷ್ಟು ನೌಕರರು?
- Automobiles
ಭಾರತದಲ್ಲಿ ಮಾರುತಿ ಜಿಮ್ನಿ ಎಸ್ಯುವಿಗೆ ಭಾರೀ ಡಿಮ್ಯಾಂಡ್: ಪ್ರತಿಸ್ಪರ್ಧಿಗಳಿಗೆ ಹೆಚ್ಚಿದ ಆತಂಕ
- Technology
ಮಾರುಕಟ್ಟೆಗೆ ಎಂಟ್ರಿ ಕೊಟ್ಟ ವಾಯರ್ಲೆಸ್ ಚಾರ್ಜಿಂಗ್ ಬೆಂಬಲಿಸುವ ಸ್ಮಾರ್ಟ್ವಾಚ್!
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಎರಡೇ ತಿಂಗಳಿಗೆ ಶೂಟಿಂಗ್ ಮುಗಿಸಿದ 'ಧೂಮಂ' ಚಿತ್ರತಂಡ; ಹೊಂಬಾಳೆಯ ಮತ್ತೊಂದು ಚಿತ್ರ ರೆಡಿ!
ಇಲ್ಲಿಯವರೆಗೂ ಒಳ್ಳೊಳ್ಳೆ ಚಿತ್ರಗಳನ್ನು ನೀಡುತ್ತಾ ಬಂದಿರುವ ಹೊಂಬಾಳೆ ಫಿಲ್ಮ್ಸ್ ಸಾಲು ಸಾಲು ಚಿತ್ರಗಳಿಗೆ ಬಂಡವಾಳ ಹೂಡುತ್ತಿದೆ. ಕನ್ನಡ ಮಾತ್ರವಲ್ಲದೆ ತೆಲುಗು, ಮಲಯಾಳಂ ಹಾಗೂ ತಮಿಳು ಚಿತ್ರಗಳನ್ನೂ ಸಹ ನಿರ್ಮಿಸಿ ತನ್ನ ವ್ಯಾಪ್ತಿಯನ್ನು ಹೆಚ್ಚಿಸಿಕೊಂಡಿದೆ ಹೊಂಬಾಳೆ ಫಿಲ್ಮ್ಸ್.
ಹೀಗೆ ವಿವಿಧ ಇಂಡಸ್ಟ್ರಿಗೆ ಕಾಲಿಟ್ಟ ಹೊಂಬಾಳೆ ಫಿಲ್ಮ್ಸ್ ಅಡಿಯಲ್ಲಿ ಕನ್ನಡ ಹಾಗೂ ಮಲಯಾಳಂ ದ್ವಿಭಾಷಾ ಚಿತ್ರವೊಂದನ್ನು ನಿರ್ಮಿಸುತ್ತಿದೆ. ಹೌದು, ಕನ್ನಡದ ನಿರ್ದೇಶಕನಾದ ಲೂಸಿಯಾ, ಯು ಟರ್ನ್ ಖ್ಯಾತಿಯ ಪವನ್ ಕುಮಾರ್ ನಿರ್ದೇಶನದ ಧೂಮಂ ಚಿತ್ರಕ್ಕೆ ಹೊಂಬಾಳೆ ಬಂಡವಾಳ ಹೂಡಿದೆ.
ಕಳೆದ ಸೆಪ್ಟೆಂಬರ್ 30ರಂದು ಘೋಷಣೆಯಾಗಿದ್ದ ಈ ಚಿತ್ರದ ಮುಹೂರ್ತ ಅಕ್ಟೋಬರ್ 9 ರಂದು ನಡೆದಿತ್ತು. ಹೀಗೆ ಅಂದು ಆರಂಭಗೊಂಡಿದ್ದ ಚಿತ್ರದ ಚಿತ್ರೀಕರಣ ನಿನ್ನೆ ( ಜನವರಿ 13 ) ಮುಕ್ತಾಯಗೊಂಡಿದೆ. ಈ ಕುರಿತಾಗಿ ಹೊಂಬಾಳೆ ಫಿಲ್ಮ್ಸ್ ಫೋಟೊವೊಂದನ್ನು ಹಂಚಿಕೊಂಡಿದ್ದು ಧೂಮಮ್ ಚಿತ್ರೀಕರಣ ಮುಕ್ತಾಯಗೊಂಡಿದೆ ಎಂದು ಬರೆದುಕೊಂಡಿದೆ. ಇನ್ನು ಈ ಚಿತ್ರದಲ್ಲಿ ನಾಯಕನಾಗಿ ಫಾಹದ್ ಫಾಸಿಲ್ ಅಭಿನಯಿಸಿದ್ದರೆ, ನಾಯಕಿಯಾಗಿ ಅಪರ್ಣ ಬಾಲಮುರಳಿ ನಟಿಸಿದ್ದಾರೆ. ಹೀಗೆ ಎರಡು ತಿಂಗಳುಗಳಲ್ಲೇ ಚಿತ್ರೀಕರಣವನ್ನು ವೇಗವಾಗಿ ಮುಗಿಸಿರುವ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಆದಷ್ಟು ಬೇಗ ಮುಗಿಸಲಿದ್ದು, ಆದಷ್ಟು ಬೇಗ ಚಿತ್ರಮಂದಿರದ ಅಂಗಳಕ್ಕೆ ಬರುವುದು ಖಚಿತ.