'ಹೊಂಬಾಳೆ' ಸಿಬ್ಬಂದಿಗೆ ಉಚಿತ ಕೊರೊನಾ ಲಸಿಕೆ: ಉದ್ಯೋಗಿಗಳ ಆರೋಗ್ಯ ಮುಖ್ಯ ಎಂದ ನಿರ್ಮಾಪಕ

ಕೊರೊನಾ ಎರಡನೇ ಅಲೆ ಪ್ರಾರಂಭವಾಗಿದ್ದು ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಮತ್ತೊಂದೆಡೆ ಕೊರೊನಾ ಲಸಿಕೆ ಸಹ ಹಾಕಿಸಿಕೊಳ್ಳುತ್ತಿದ್ದಾರೆ. ದೇಶದಾದ್ಯಂತ ಎರಡನೇ ಹಂತದ ಕೊರೊನಾ ಲಸಿಕೆ ಅಭಿಯಾನ ಪ್ರಾರಂಭವಾಗಿದ್ದು, 45 ವರ್ಷ ಮೇಲ್ಪಟ್ವವರು ಲಸಿಕೆ ಹಾಕಿಸಿಕೊಳ್ಳುತ್ತಿದ್ದಾರೆ.

ಸ್ಯಾಂಡಲ್ ವುಡ್ ನ ಪ್ರತಿಷ್ಠಿತ ಸಿನಿಮಾ ನಿರ್ಮಾಣ ಸಂಸ್ಥೆಗಳಲ್ಲಿ ಒಂದಾಗಿರುವ ಹೊಂಬಾಳೆ ಫಿಲ್ಮ್ಸ ತನ್ನ ಕಂಪೆನಿಯಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ಉದ್ಯೋಗಿಗಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಸಿಬ್ಬಂದಿಗೆ ಮತ್ತು ಅವರ ಕುಟುಂಬದವರಿಗೆ ಉಚಿತ ಕೊರೊನಾ ಲಸಿಕೆ ಹಾಕಿಸಲು ಮುಂದಾಗಿದ್ದಾರೆ.

ಉದ್ಯೋಗಿಗಳ ಆರೋಗ್ಯ ಮುಖ್ಯ ಎಂದಿರುವ ನಿರ್ಮಾಪಕ ವಿಜಯ್ ಕಿರಗಂದೂರು ಉಚಿತ ಕೊರೊನಾ ಲಸಿಕೆ ಹಾಕಿಸುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸಿದ್ದಾರೆ. ಸರ್ಕಾರದ ಮಾರ್ಗಸೂಚಿಯಂತೆ ಕೊರೊನಾ ಲಸಿಕೆ ಹಾಕಿಸಲು ಮುಂದಾಗಿದ್ದಾರೆ.

Hombale films decided to cover the vaccination cost for all the employees

'ಕೊರೊನಾ ಮುಕ್ತ ಆಗಲು ಲಸಿಕೆ ಬಹಳ ಮುಖ್ಯ. ನೀವೆಲ್ಲರೂ ಸಹ ಲಸಿಕೆ ಹಾಕಿಸಿಕೊಳ್ಳಿ ಮತ್ತು ಆರೋಗ್ಯವಾಗಿರಿ' ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಹೊಂಬಾಳೆ ಫಿಲ್ಮ್ಸ್ ಅವರು ತನ್ನ ಉದ್ಯೋಗಿಗಳ ಆರೋಗ್ಯದ ಬಗ್ಗೆ ಹೊಂದಿರುವ ಕಾಳಜಿ ಮತ್ತು ಈ ಮಹತ್ವದ ನಿರ್ಧಾರಕ್ಕೆ ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇಷ್ಟು ದೊಡ್ಡ ಮಟ್ಟದಲ್ಲಿ ಬೆಳೆದಿರುವ ಜೊತೆಗೆ ಉದ್ಯೋಗಿ ಸ್ನೇಹಿ ಆಗಿರುವ ಹೊಂಬಾಳೆ ಫಿಲ್ಮ್ಸ್ ಕನ್ನಡದ ಹೆಮ್ಮೆಯ ಸಂಸ್ಥೆ ಎಂದು ನೆಟ್ಟಿಗರು ಹಾಡಿ ಹೊಗಳುತ್ತಿದ್ದಾರೆ.

ಹೊಂಬಾಳೆ ಫಿಲ್ಮ್ಸ್ ಸದ್ಯ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಯುವರತ್ನ ಸಿನಿಮಾದ ರಿಲೀಸ್ ನಲ್ಲಿ ಬ್ಯುಸಿಯಾಗಿದ್ದಾರೆ. ಇನ್ನೂ ಇಡೀ ವಿಶ್ವವೇ ಕಾತರದಿಂದ ಕಾಯುತ್ತಿರುವ ಕೆಜಿಎಫ್ -2 ಮತ್ತು ಪ್ರಭಾಸ್ ನಟನೆಯ ಸಲಾರ್ ಸಿನಿಮಾ ಕೂಡ ಹೊಂಬಾಳೆ ಫಿಲ್ಮ್ಸ್ ನಲ್ಲಿ ಮೂಡಿಬರುತ್ತಿದೆ.

Recommended Video

ದೊಡ್ಡ ಮೊತ್ತಕ್ಕೆ ಸೇಲ್ ಆಯ್ತು ಪೊಗರು ಸಿನಿಮಾ | Filmibeat Kannada

More from Filmibeat

English summary
Hombale films decided to cover the vaccination cost for all the employees.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X