ಕಾಂತಾರ-1 ಸಕ್ಸಸ್ ಹೊತ್ತಲ್ಲಿ ಸಿನಿಪ್ರಿಯರಿಗೆ ಹೊಂಬಾಳೆ ಫಿಲ್ಮ್ಸ್ ಸಂಸ್ಥೆಯಿಂದ ಬಹಿರಂಗ ಪತ್ರ

ಹೊಂಬಾಳೆ ಫಿಲ್ಮ್ಸ್ ಸಂಸ್ಥೆ ನಿರ್ಮಾಣದ 'ಕಾಂತಾರ- 1' ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದೆ. ದೇಶ ವಿದೇಶಗಳಲ್ಲಿ ಸಿನಿಮಾ ಪ್ರೇಕ್ಷಕರನ್ನು ರಂಜಿಸುತ್ತಿದ್ದಾರೆ. ಆದರೆ ಕೆಲವರು ದೈವದ ಅನುಕರಣೆ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ಚಿತ್ರಮಂದಿರದ ಒಳಗೆ, ಹೊರಗೆ ದೈವ ಆಹ್ವಾಹನೆ ಆದಂತೆ ವರ್ತಿಸುತ್ತಿದ್ದಾರೆ. ಈ ಬಗ್ಗೆ ಚಿತ್ರತಂಡ ಪ್ರತಿಕ್ರಿಯಿಸಿದೆ.

ಈ ಹಿಂದೆ 'ಕಾಂತಾರ' ಸಿನಿಮಾ ಬಿಡುಗಡೆ ಆಗಿದ್ದಾಗಲೂ ಕೆಲವರು ಇದೇ ರೀತಿ ವರ್ತಿಸಿದ್ದರು. ಕೆಲವರು ರೀಲ್ಸ್ ಮಾಡಿದ್ದರು. ಆರ್ಕೇಸ್ಟ್ರಾ ಹಾಗೂ ಕಿರುತೆರೆ ಕಾರ್ಯಕ್ರಮ ವೇದಿಕೆಗಳಲ್ಲಿ ಪಂಜುರ್ಲಿ, ಗುಳಿಗ ದೈವದ ರೀತಿ ಅನುಕರಣೆ ಮಾಡುವ ಪ್ರಯತ್ನ ಮಾಡಿದ್ದರು. ಪ್ರೀಕ್ವೆಲ್ ಬಿಡುಗಡೆ ಬೆನ್ನಲ್ಲೇ ಅದು ಪುನರಾವರ್ತನೆ ಆಗುತ್ತಿದೆ. ಇದನ್ನು ತುಳುನಾಡು ಕೂಟ ವಿರೋಧಿಸಿ ರಿಷಬ್ ಶೆಟ್ಟಿಗೆ ಪತ್ರ ಬರೆದು ಬೇಸರ ವ್ಯಕ್ತಪಡಿಸಿದ್ದಾರೆ.

Hombale Films Urges Fans Not to Imitate Divine Characters from Kantara-1 After Viral Incidents

ತಮಿಳುನಾಡಿನ ದಿಂಡಿಗಲ್‌ನಲ್ಲಿರುವ ಚಿತ್ರಮಂದಿರವೊಂದರಲ್ಲಿ ವ್ಯಕ್ತಿಯೊಬ್ಬ ದೈವದ ವೇಷ ಧರಿಸಿ ಬಂದಿದ್ದ ವೀಡಿಯೋ ವೈರಲ್ ಆಗಿತ್ತು. ಚಿತ್ರಮಂದಿರ ಮುಂಭಾಗದಲ್ಲಿ ವ್ಯಕ್ತಿಯೊಬ್ಬರು ದೈವ ಬಂದಂತೆ ಆಡಿದ್ದು ಬಳಿಕ ಕ್ಷಮೆ ಕೇಳಿದ್ದು ಗೊತ್ತೇಯಿದೆ. ಇದೀಗ ಹೊಂಬಾಳೆ ಫಿಲ್ಮ್ಸ್ ಸಂಸ್ಥೆ ಮನವಿ ಮಾಡಿ ಈ ರೀತಿ ಮಾಡಬೇಡಿ ಎಂದು ಕೇಳಿಕೊಂಡಿದೆ. ಈ ಸಂಬಂಧ ಅಧಿಕೃತ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಸಿನಿಪ್ರಿಯರೇ,

ತುಳುನಾಡಿನ ಸಂಸ್ಕೃತಿಯ ಪ್ರೌಢತೆಯ ಸಂಕೇತವಾದ ದೈವಾರಾಧನೆ ನಮ್ಮನ೦ಬಿಕೆ, ಭಕ್ತಿ ಹಾಗೂ ತಾಯ್ನಾಡಿನ ಹೆಮ್ಮೆಯ ಪ್ರತಿರೂಪವಾಗಿದೆ. 'ಕಾಂತಾರ' ಮತ್ತು 'ಕಾಂತಾರ' ಚಾಪ್ಟರ್-1 ಚಿತ್ರಗಳನ್ನು ನಾವು ಗೌರವದೊಂದಿಗೆ ದೈವಗಳ ಮಹಿಮೆಯನ್ನು ಕೊಂಡಾಡುವ ಸದುದ್ದೇಶದಿಂದ ನಿರ್ಮಿಸಿದ್ದೇವೆ. ದೈವಾರಾಧನೆಯ ಗೌರವ ಹಾಗೂ ಅಚಲ ಭಕ್ತಿಯನ್ನು ಉಳಿಸಿಕೊಳ್ಳುವ ಸಲುವಾಗಿ ನಾವು ಶ್ರಮಪಟ್ಟು ಕೆಲಸಮಾಡಿದ್ದೇವೆ. ಇದರೊಂದಿಗೆ ತುಳುನಾಡಿನ ಸಂಸ್ಕೃತಿ ಮತ್ತು ಪರಂಪರೆಯ ಮಹತ್ವವನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾರಿ ಯಶಸ್ವಿಯಾಗಿದ್ದೇವೆ. ಪ್ರೇಕ್ಷಕರಿಂದ ಬಂದಿರುವ ಅಪಾರವಾದ ಪ್ರೀತಿಗೆ ಹಾಗೂ ಪ್ರೋತ್ಸಾಹಕ್ಕೆ ನಾವು ಹೃತ್ತೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇವೆ. ಆದಾಗ್ಯೂ, ಇತ್ತೀಚೆಗೆ ಕೆಲವು ಜನರು ಚಿತ್ರದಲ್ಲಿ ತೋರಿಸಿದ ದೈವಪಾತ್ರಗಳನ್ನು ಅನುಕರಿಸುತ್ತಾ, ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಕಾರ್ಯಕ್ರಮಗಳಲ್ಲಿ ಅಸಭ್ಯ ರೀತಿಯಲ್ಲಿ ವರ್ತಿಸುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ" ಎಂದು ಪತ್ರದಲ್ಲಿ ಬರೆಯಲಾಗಿದೆ.

"ಚಿತ್ರಗಳಲ್ಲಿ ತೋರಿಸಲಾದ ದೈವಾರಾಧನೆ ಅಥವಾ ದೈವಪೂಜೆ ಅತ್ಯಂತ ಪವಿತ್ರವಾದ ಆಧ್ಯಾತ್ಮಿಕ ಸಂಪ್ರದಾಯಕ್ಕೆ ಆಧಾರಿತವಾಗಿದೆ. ಇದನ್ನು ಹಾಸ್ಯಾಸ್ಪದವಾಗಿ ಅಣುಕು ಪ್ರದರ್ಶನ ಮಾಡುವಂತಿಲ್ಲ. ಇಂತಹ ಕೃತ್ಯಗಳು ನಮ್ಮ ನಂಬಿಕೆ ಮತ್ತು ಧಾರ್ಮಿಕ ಸಂವೇದನೆಯನ್ನು ಹೀನಗೊಳಿಸುತ್ತವೆ ಮತ್ತು ತುಳುನಾಡಿನ ಜನರ ಭಾವನೆಗಳಿಗೆ ತೀವ್ರ ನೋವು೦ಟುಮಾಡುತ್ತವೆ. ಆದುದರಿಂದ, ಹೋಂಬಾಳೆ ಫಿಲ್ಡ್ ಜನತೆ ಹಾಗೂ ಪ್ರೇಕ್ಷಕರಿಗೆ ಮನವಿ ಮಾಡಿಕೊಳ್ಳುತ್ತದೆ - ದೈವಪಾತ್ರಗಳನ್ನು ಅನುಕರಿಸುವುದು, ಧ್ವನಿಯನ್ನು ಹೋಲುವುದು ಅಥವಾ ಅವರ ರೂಪ-ವೇಷಧಾರಣೆ ಮಾಡುವುದು ಸೇರಿದಂತೆ ಯಾವುದೇ ರೀತಿಯ ಕೃತ್ಯಗಳಿಂದ ದೂರವಿರಿ" ಎಂದು ಹೊಂಬಾಳೆ ಫಿಲ್ಮ್ಸ್ ಸಂಸ್ಥೆ ಮನವಿ ಮಾಡಿದೆ.

More from Filmibeat

English summary
‘Kantara-1’ Production House Warns Fans Against Misrepresenting Tulu Nadu’s Traditions
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X