Don't Miss!
- Lifestyle
Horoscope Today 6 Feb 2023: ಸೋಮವಾರ : ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
- Sports
IND VS AUS Test: ಟೆಸ್ಟ್ ಸರಣಿಯಲ್ಲಿ ಕೆಎಲ್ ರಾಹುಲ್ ವಿಕೆಟ್ ಕೀಪರ್ ಅಲ್ಲ: ಪದಾರ್ಪಣೆ ಮಾಡಲು ಸಜ್ಜಾದ ವಿಕೆಟ್ ಕೀಪರ್
- News
ರಾಜ್ಯ ರಾಜಕೀಯದ ಮುಂದಿನ ರಹಸ್ಯವೊಂದನ್ನು ಬೇಧಿಸಿದ ಎಚ್ಡಿಕೆ
- Finance
ಆಧಾರ್ ಕಾರ್ಡ್ ಸಂಖ್ಯೆಯಿಂದ ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ಪರಿಶೀಲಿಸಿ, ಹೇಗೆ ಇಲ್ಲಿ ತಿಳಿಯಿರಿ
- Automobiles
ಹೆಚ್ಚಿನ ಮೈಲೇಜ್ ನೀಡುವ ಬಹುನಿರೀಕ್ಷಿತ ಟಾಟಾ ಆಲ್ಟ್ರೊಜ್ iCNG ಕಾರಿನ ವಿಶೇಷತೆಗಳು...
- Technology
ಇನ್ಮುಂದೆ ಟ್ವಿಟ್ಟರ್ನಲ್ಲೂ ಹಣ ಗಳಿಸಬಹುದು; ಮಸ್ಕ್ರ ಹೊಸ ನಿರ್ಧಾರ ಏನು!?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ದೊಡ್ಡ ಸಂಸ್ಥೆಗಳ ವಿರುದ್ಧ ಹೊಂಬಾಳೆ ಫಿಲ್ಮ್ಸ್ ಚಾಲೆಂಜ್: 3 ಸಾವಿರ ಕೋಟಿ ಹೂಡಿಕೆ ಪಕ್ಕಾ!
2022 ಕನ್ನಡ ಚಿತ್ರರಂಗಕ್ಕಷ್ಟೇ ಅಲ್ಲ, ಹೊಂಬಾಳೆ ಫಿಲ್ಮ್ಸ್‌ಗೂ ಲಾಭದಾಯಕ. 'ಕೆಜಿಎಫ್ 2', 'ಕಾಂತಾರ'ದಂತಹ ಸಿನಿಮಾಗಳು ಸೂಪರ್ ಸಕ್ಸಸ್ ತಂದುಕೊಟ್ಟಿವೆ. ಇದೇ ಜೋಷ್‌ನಲ್ಲಿ ಮತ್ತಷ್ಟು ಸಿನಿಮಾಗಳನ್ನು ನಿರ್ಮಾಣ ಮಾಡಲು ಮುಂದಾಗಿದೆ.
ಹೊಂಬಾಳೆ ಫಿಲ್ಮ್ಸ್ ಮುಂದಿನ 5 ವರ್ಷಗಳಲ್ಲಿ ಸಿನಿಮಾಗಾಗಿಯೇ ಸುಮಾರು 3000 ಕೋಟಿ ರೂಪಾಯಿ ಹೂಡಿಕೆ ಮಾಡಲು ನಿರ್ಧರಿಸಿದೆ. ಈ ಮಾತನ್ನು ಸ್ವತ: ಹೊಂಬಾಳೆ ಫಿಲ್ಮ್ಸ್‌ನ ಮಾಲೀಕ ವಿಜಯ್ ಕಿರಗಂದೂರು ಅಧಿಕೃತವಾಗಿ ಘೋಷಿಸಿದ್ದಾರೆ. ಈ ಬಗ್ಗೆ ವಿಜಯ್ ಕಿರಗಂದೂರು ಟ್ವಿಟರ್‌ನಲ್ಲಿ ಅಧಿಕೃತವಾಗಿ ಬರೆದುಕೊಂಡಿದ್ದಾರೆ.
ಹೊಸ ವರ್ಷದ ಈ ಶುಭ ಸಂದರ್ಭದಲ್ಲಿ ವಿಜಯ್ ಕಿರಗಂದೂರು ತಮ್ಮನ್ನು ಪ್ರೋತ್ಸಾಹಿಸಿದ ಜನತೆಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ. 2023ರಲ್ಲಿ ಹೊಂಬಾಳೆ ಫಿಲ್ಮ್ಸ್ ಸಂಸ್ಥೆಯಿಂದ ಹೊಸ ಹೊಸ ಯೋಜನೆಗಳನ್ನು ರೂಪಿಸಲು ತೀರ್ಮಾನಿಸಿದ್ದಾರೆ.
ಹೊಂಬಾಳೆ
3
ಸಾವಿರ
ಕೋಟಿ
ಸ್ಕೆಚ್:
ಅಸಲಿ
ಆಟ
ಮುಂದಿನ
ವರ್ಷ!
"ಚಿತ್ರ ಪ್ರೇಮಿಗಳ ಪ್ರೀತಿ ಮತ್ತು ಪ್ರೋತ್ಸಾಹದ ಫಲವಾಗಿ ಹೊಂಬಾಳೆ ಫಿಲ್ಮ್ಸ್ ಅತ್ಯಂತ ಯಶಸ್ವಿ ಚಲನಚಿತ್ರಗಳನ್ನು ಕೊಡುಗೆಯಾಗಿ ನೀಡಿದ್ದು, ಈ ಯಶಸ್ವಿ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗಲು ತೀರ್ಮಾನಿಸಿದ್ದೇವೆ. ಅದರ ಭಾಗವಾಗಿ ಮುಂದಿನ 5 ವರ್ಷದಲ್ಲಿ ಮನರಂಜನಾ ಕ್ಷೇತ್ರದಲ್ಲಿ 3 ಸಾವಿರ ಕೋಟಿ ಹೂಡಲು ಯೋಜನೆ ಸಿದ್ದವಾಗಿದೆ ಎಂದು ಘೋಷಿಸಿದ್ದಾರೆ.ಹೊಂಬಾಳೆ ಫಿಲಮ್ಸ್ ಸಂಸ್ಥೆ ಇಂದು ದೇಶದ ಪ್ರತಿಷ್ಠಿತ ಚಿತ್ರ ನಿರ್ಮಾಣ ಎಂಬ ಹೆಗ್ಗಳಿಕೆ ಪಡೆದಿರುವುದು ಚಿತ್ರ ಪ್ರೇಮಿಗಳ ಬೆಂಬಲದಿಂದ " ಎಂದು ವಿಜಯ್ ಕಿರಗಂದೂರು ಹೇಳಿದ್ದಾರೆ.

"ಸಿನಿಮಾ ಕ್ಷೇತ್ರ ಇಂದು ಅದ್ಭುತವಾಗಿ ಬೆಳವಣಿಗೆ ಕಂಡಿದೆ. ದೇಶದ ಉದ್ದಗಲಕ್ಕೂ ವೈವಿದ್ಯಮಯ ಹಾಗೂ ಗುಣಮಟ್ಟದ ಸಿನಿಮಾ ನಿರ್ಮಾಣಕ್ಕೆ ಅವಕಾಶವಿದೆ. ದೇಶದ ಯುವ ಪೀಳಿಗೆಯನ್ನು ಜಾಗೃತಗೊಳಿಸುವ ಹಾಗೂ ಪ್ರೋತ್ಸಾಹಿಸುವ ದೃಷ್ಟಿಯಿಂದ ಸಿನಿಮಾ ಕ್ಷೇತ್ರದಲ್ಲಿ ಪರಿಣಾಮಕಾರಿಯಾಗಿ ಸೇವೆ ಸಲ್ಲಿಸಲು ತೀರ್ಮಾನಿಸಲಾಗಿದೆ. ದೇಶದ ಇತಿಹಾಸ, ಪರಂಪರೆ, ಕಲೆ- ಸಂಸ್ಕೃತಿಯನ್ನು ವಿಶ್ವಕ್ಕೆ ಪರಿಚಯಿಸುವ ಗುಣಮಟ್ಟದ ಸಿನಿಮಾಗಳನ್ನು ನೀಡಲು ತೀರ್ಮಾನಿಸಿದ್ದೇವೆ." ಎಂದು ವಿಜಯ್ ಕಿರಗಂದೂರು ಪತ್ರದಲ್ಲಿ ತಿಳಿಸಿದ್ದಾರೆ.
ಹೊಂಬಾಳೆ ಫಿಲ್ಮ್ಸ್ ಮೇಲೆ ಜನರು ಇಟ್ಟಿರುವ ನಂಬಿಕೆ ಹಾಗೂ ಭರವಸೆಗಳನ್ನು ಸುಳ್ಳಾಗದಂತೆ ನೋಡಿಕೊಳ್ಳಲು ಬದ್ಧರಾಗಿದ್ದೇವೆ ಎಂದು ತಿಳಿಸಿದ್ದಾರೆ. ಮತ್ತಷ್ಟು ವಿಭಿನ್ನ ಚಿತ್ರಗಳನ್ನು ನಿರ್ಮಿಸುವ ಮೂಲಕ ಮನರಂಜನಾ ಕ್ಷೇತ್ರಕ್ಕೆ ಮತ್ತಷ್ಟು ಕೊಡುಗೆ ನೀಡುವ ಸಂಕಲ್ಪವನ್ನು ಹೊಸ ವರ್ಷಕ್ಕೆ ಮಾಡಿದ್ದಾರೆಂದು ವಿಜಯ್ ಹೇಳಿದ್ದಾರೆ.