ದರ್ಶನ್ ಡಬಲ್ ಸಂಕಷ್ಟ; ಒಂದ್ಕಡೆ ಸುಪ್ರೀಂ ಕೋರ್ಟ್‌ಗೆ ಅರ್ಜಿ..ಇನ್ನೊಂದ್ಕಡೆ ಚಾರ್ಜ್‌ಶೀಟ್

ಮೈಸೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಚಾಲೆಂಜಿಂಗ್‌ ಸ್ಟಾರ್ ದರ್ಶನ್‌ಗೆ ಮತ್ತೆ ಸಂಕಷ್ಟಗಳು ಎದುರಾಗಿವೆ. ಈಗಾಗಲೇ 130 ದಿನ ಜೈಲಿನಲ್ಲಿದ್ದು ಜಾಮೀನಿನ ಮೇಲೆ ಹೊರ ಬಂದಿದ್ದಾರೆ. ಅನಾರೋಗ್ಯ ದೃಷ್ಟಿಯನ್ನು ಇಟ್ಟುಕೊಂಡು ನ್ಯಾಯಾಲಯ 6 ವಾರಗಳ ಕಾಲ ಚಿಕಿತ್ಸೆಗೆಂದು ಮಧ್ಯಂತರ ಜಾಮೀನನ್ನು ಮಂಜೂರು ಮಾಡಿದೆ.

ಹೀಗಾಗಿ ದರ್ಶನ್ ಬೆನ್ನು ನೋವು ಹಾಗೂ ಇತರ ಸಮಸ್ಯೆಗಳಿಗೆ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಬೆನ್ನು ನೋವಿಗೆ ಶಸ್ತ್ರ ಚಿಕಿತ್ಸೆ ಆಗಲೇಬೇಕೆಂದು ಹೇಳಿ ಮಧ್ಯಂತರ ಜಾಮೀನನ್ನು ಪಡೆದಿದ್ದರು. ಆದ್ರೀಗ ದರ್ಶನ್ ಶಸ್ತ್ರಚಿಕಿತ್ಸೆಗೆ ಒಪ್ಪುತ್ತಿಲ್ಲ ಎಂದು ವರದಿಯಾಗಿದೆ. ಬೇಕಂತಲೇ ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳುವುದನ್ನು ಮುಂದಕ್ಕೆ ಹಾಕಿದ್ದಾರೆಂಬ ಟೀಕೆಗಳು ಕೂಡ ವ್ಯಕ್ತವಾಗುತ್ತಿವೆ.

Home minister Dr G Parameshwara said police will appeal in supreme court against Darshan Bail

ದರ್ಶನ್ ಜಾಮೀನು ಪಡೆದು ಹೊರ ಬಂದ ಬೆನ್ನಲ್ಲೇ ಪೊಲೀಸರು ಸುಪ್ರೀಂ ಕೋರ್ಟ್ ಮೊರೆ ಹೋಗುವುದಾಗಿ ಹೇಳಿದ್ದರು. ಅದಕ್ಕೆ ಬೇಕಾದ ಸಕಲ ಸಿದ್ಧತೆಗಳನ್ನು ನಡೆಸುತ್ತಿದ್ದಾರೆಂದು ಹೇಳಲಾಗುತ್ತಿತ್ತು. ಅದಕ್ಕೀಗ ಗೃಹ ಸಚಿವರಾದ ಡಾ.ಜಿ. ಪರಮೇಶ್ವರ ಕ್ಲಾರಿಟಿ ಕೊಟ್ಟಿದ್ದಾರೆ. ಸುಪ್ರೀಂ ಕೋರ್ಟ್‌ಗೆ ದರ್ಶನ್ ಜಾಮೀನು ರದ್ದು ಮಾಡುವಂತೆ ಮೇಲ್ಮನವಿ ಸಲ್ಲಿಸುವುದಾಗಿ ಹೇಳಿದ್ದಾರೆ. ಅತ್ತ ಪೊಲೀಸರು ಎರಡನೇ ಚಾರ್ಜ್‌ಶೀಟ್ ಸಲ್ಲಿಸುವುದಕ್ಕೆ ಮುಂದಾಗಿದ್ದಾರೆ.

ದರ್ಶನ್ ವಿಚಾರಕ್ಕೆ ಸಂಬಂಧಿಸಿದಂತೆ ಡಾ.ಜಿ. ಪರಮೇಶ್ವರ್ ಮೈಸೂರಿನಲ್ಲಿ ಮಾಧ್ಯಮಗಳಿಗೆ ಹೇಳಿಕೆ ಕೊಟ್ಟಿದ್ದಾರೆ. ಬೆನ್ನು ನೋವಿಗೆ ಚಿಕಿತ್ಸೆ ಪಡೆಯುವುದಕ್ಕೆಂದು ಮಧ್ಯಂತರ ಜಾಮೀನು ಪಡೆದು ಹೊರಗೆ ಬಂದಿದ್ದಾರೆ. ಇನ್ನು ಮೂರು ವಾರಗಳಲ್ಲಿ ಚಿಕಿತ್ಸೆಯನ್ನು ಪಡೆದು ಜೈಲಿಗೆ ಹೋಗಬೇಕಾಗುತ್ತದೆ. ಅದಕ್ಕೂ ಮುನ್ನ ದರ್ಶನ್ ಮತ್ತೆ ಜಾಮೀನು ಬೇಕು ಎಂದು ಕೇಳಬಹುದು. ಮತ್ತೆ ಈ ಬಗ್ಗೆ ವಿಚಾರಣೆ ನಡೆದರೂ ನಡೆಯಬಹುದು. ಹಾಗೇ ದರ್ಶನ್ ಜಾಮೀನುನನ್ನು ರದ್ದು ಮಾಡುವಂತೆ ಸುಪ್ರೀಂ ಕೋರ್ಟ್‌ ಅರ್ಜಿ ಹಾಕುತ್ತೇ. ಆ ಪ್ರತಿಕ್ರಿಯೆ ಕೂಡ ನಡೆಯುತ್ತಿದೆ ಎಂದು ಡಾ. ಜಿ ಪರಮೇಶ್ವರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

Home minister Dr G Parameshwara said police will appeal in supreme court against Darshan Bail

ಗೃಹ ಸಚಿವರ ಹೇಳಿಕೆ ದರ್ಶನ್ ಬಳಗದಲ್ಲಿ ಆತಂಕ ಸೃಷ್ಟಿಸಿದೆ. ಬೆನ್ನು ನೋವಿಗೆ ಚಿಕಿತ್ಸೆ ಪಡೆಯಬೇಕೆಂಬ ಕಾರಣವೊಡ್ಡಿ ದರ್ಶನ್ ಜಾಮೀನು ಪಡೆದಿದ್ದರು. ಆದರೆ, ಅದಕ್ಕೆ ಪೊಲೀಸ್ ಇಲಾಖೆ ಆಕ್ಷೇಪ ವ್ಯಕ್ತಪಡಿಸುತ್ತಿದೆ. ಸದ್ಯ ಗೃಹ ಇಲಾಖೆ ಕೂಡ ಸುಪ್ರೀಂ ಕೋರ್ಟ್‌ ಅರ್ಜಿ ಸಲ್ಲಿಸುವುದಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದು, ಮತ್ತೆ ದರ್ಶನ್ ಜೈಲಿಗೆ ಹೋಗಬೇಕಾದ ಅನಿವಾರ್ಯತೆ ಎದುರಾಗಬಹುದು. ಹೀಗಾಗಿ ದರ್ಶನ್ ಮುಂದಿನ ಪ್ಲ್ಯಾನ್ ಏನು ಅನ್ನೋದು ಕುತೂಹಲ ಮೂಡಿಸಿದೆ.

ಇನ್ನೊಂದು ಕಡೆ ಪೋಲಿಸರು ದರ್ಶನ್ ವಿರುದ್ಧ ಹೆಚ್ಚುವರಿ ಚಾರ್ಜ್‌ಶೀಟ್ ಸಲ್ಲಿಸಲು ತಯಾರಿ ಮಾಡಿಕೊಂಡಿದ್ದಾರೆ. ಈಗಾಗಲೇ ಸುಮಾರು ಎರಡು ಸಾವಿರ ಪಟ್ಟಿಗಳಷ್ಟು ದೋಷಾರೋಪ ಪಟ್ಟಿಯನ್ನು ಸಲ್ಲಿಸುವುದಕ್ಕೆ ಬೇಕಿರುವ ಸಕಲ ಸಿದ್ಧತೆಗಳು ಕೂಡ ನಡೆದಿದೆ. ಇನ್ನೂ ಕೆಲವು ಸಾಕ್ಷ್ಯಗಳನ್ನು ಸಂಗ್ರಹಿಸಲಾಗುತ್ತಿದ್ದು, ಆ ಎಲ್ಲಾ ಪ್ರತಿಕ್ರಿಯೆ ನಡೆದ ಬಳಿಕ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಗೆ ಆಗಬಹುದು.

ಚಾರ್ಜ್ ಸಲ್ಲಿಕೆ ಬಗ್ಗೆನೂ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿಕೆ ಕೊಟ್ಟಿದ್ದಾರೆ. ದರ್ಶನ್ ಜಾಮೀನು ಅವಧಿಯನ್ನು ವಿಸ್ತರಿಸುವಂತೆ ಕೇಳಿಕೊಂಡಿರುವುದು ನನ್ನ ಗಮನಕ್ಕೆ ಬಂದಿಲ್ಲ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರೆದಿದೆ ಎಂದಿದ್ದು, ಈ ಪ್ರಕರಣಕ್ಕೆ ಬೇಕಿರುವ ಸಾಕ್ಷ್ಯಗಳನ್ನು ಸಂಗ್ರಹಿಸುವ ಕೆಲಸ ಕೂಡ ನಡೆದಿದೆ. ಆ ಎಲ್ಲಾ ಸಾಕ್ಷ್ಯಗಳು ದೊರೆತ ಬಳಿಕ ದೋಷಾರೋಪ ಪಟ್ಟಿಯನ್ನು ಸಲ್ಲಿಸಲಾಗುತ್ತೆಂದು ಡಾ. ಜಿ ಪರಮೇಶ್ವರ್ ಹೇಳಿದ್ದಾರೆ.

More from Filmibeat

English summary
Home minister Dr.G.Parameshwara said police will appeal in supreme court against Darshan Bail;
Read more about: darshan sandalwood filmibeat news
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X