'ಹೊಂದಿಸಿ ಬರೆಯಿರಿ' ಟ್ರೈಲರ್ ರಿಲೀಸ್ ಮಾಡಿದ ಅಶ್ವಿನಿ ಪುನೀತ್ ರಾಜ್‌ಕುಮಾರ್: ಏನಂತಿದೆ ಟೀಮ್?
ಕನ್ನಡದ ಹೊಚ್ಚ ಹೊಸ ಸಿನಿಮಾ 'ಹೊಂದಿಸಿ ಬರೆಯಿರಿ' ರಿಲೀಸ್‌ಗೆ ರೆಡಿಯಾಗಿದೆ. ಪ್ರವೀಣ್ ತೇಜ್, ಭಾವನಾ ರಾವ್, ಸಂಯುಕ್ತ ಹೊರನಾಡು, ಐಶಾನಿ ಶೆಟ್ಟಿ, ನವೀನ್ ಶಂಕರ್, ಶ್ರೀ ಮಹದೇವ್, ಅರ್ಚನಾ ಜೋಯಿಸ್, ಅನಿರುದ್ಧ್ ಆಚಾರ್ಯ ನಟಿಸಿರುವ ಸಿನಿಮಾವಿದೆ. ಇದೇ ಫೆಬ್ರವರಿ 10ರಂದು ಗ್ರ್ಯಾಂಡ್ ಆಗಿ ರಿಲೀಸ್ ಆಗುತ್ತಿದೆ.
ಈ ಸಿನಿಮಾದ ಟ್ರೈಲರ್ ಅನ್ನು ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ರಿಲೀಸ್ ಮಾಡಿದ್ದಾರೆ. ಹಾಗೇ ಸಿನಿಮಾತಂಡಕ್ಕೆ ಶುಭ ಹಾರೈಸಿದ್ದಾರೆ. ಈ ವೇಳೆ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್ ಹಾಗೂ ಪ್ರಮುಖ ಪಾತ್ರಗಳು ಸಿನಿಮಾದ ಬಗ್ಗೆ ಮಾತಾಡಿವೆ.

"ಹೊಂದಿಸಿ ಬರೆಯಿರಿ ಎಂದಾಗ ನೆನಪಾಗೋದು ಬಾಲ್ಯ. ಪರಿಸ್ಥಿತಿಗಳೊಂದಿಗೆ ಹೊಂದಿಕೊಂಡು ಹೋಗಬೇಕು, ಬದುಕು ಬಂದಂತೆ ಸ್ವೀಕರಿಸಿ ಅನ್ನೋದು ಈ ಸಿನಿಮಾದ ಆಶಯ. ಐದು ಜನ ಸ್ನೇಹಿತರ ಹನ್ನೆರಡು ವರ್ಷದ ಜರ್ನಿ ಈ ಸಿನಿಮಾದಲ್ಲಿದೆ. ಕಾಲೇಜು, ಕಾಲೇಜು ನಂತರದ ದಿನಗಳು, ಮದುವೆ ಜರ್ನಿಯನ್ನು ಒಳಗೊಂಡಿದೆ. ತುಂಬಾ ಜನಕ್ಕೆ ಈ ಸಿನಿಮಾ ಹತ್ತಿರ ಆಗುತ್ತೆ." ಎನ್ನುತ್ತಾರೆ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್.
ನಮ್ಮ ಸಿನಿಮಾದ ನಿಜವಾದ ನಾಯಕ ನಿರ್ದೇಶಕ ಹಾಗೂ ನಿರ್ಮಾಪಕ ರಾಮೇನಹಳ್ಳಿ ಜಗನ್ನಾಥ್. ಒಂದೊಳ್ಳೆ ತಂಡವನ್ನು ಕಟ್ಟಿಕೊಂಡು ಎಲ್ಲರನ್ನೂ ನಿಭಾಯಿಸಿ ತುಂಬಾ ಒಳ್ಳೆಯ ಸಿನಿಮಾ ಮಾಡಿದ್ದಾರೆ. ಒಂದೊಳ್ಳೆ ಅನುಭವವನ್ನು ಈ ಸಿನಿಮಾ ನೀಡಿದೆ" ಎಂದು ನಟ ಪ್ರವೀಣ್ ತೇಜ್ ಹೇಳುತ್ತಾರೆ.
"ನಮ್ಮ ಜೀವನದ ಹಾಗೆ ಕೆಲವು ಸನ್ನಿವೇಶಗಳಿಂದ ನಾವು ಜೀವನವನ್ನು ಕಾಂಪ್ಲಿಕೇಟ್ ಮಾಡಿಕೊಳ್ಳುತ್ತೇವೆ. ಚಿತ್ರದಲ್ಲಿ ನಾನು ಭೂಮಿಕ ಪಾತ್ರ ನಿರ್ವಹಿಸಿದ್ದೇನೆ. ಈ ಸಿನಿಮಾ ತುಂಬಾ ಜನಕ್ಕೆ ಕನೆಕ್ಟ್ ಆಗುತ್ತೆ." ಎನ್ನುತ್ತಾರೆ ನಟಿ ಭಾವನ ರಾವ್.

"ಇಡೀ ಸಿನಿಮಾವನ್ನು ಮಾತಲ್ಲಿ ಹೇಳೋಕಾಗಲ್ಲ ಅಷ್ಟು ಆಳವಾಗಿದೆ . ನನಗೆ ಈ ಚಿತ್ರ ತುಂಬಾ ಸ್ಪೆಷಲ್. ನಾಲ್ಕರಿಂದ ಐದು ಲುಕ್ ನಲ್ಲಿ ಚಿತ್ರದಲ್ಲಿ ಕಾಣಿಸಿಕೊಂಡಿದ್ದೇನೆ." ನಟ ಶ್ರೀ ಮಹದೇವ್. ಹಾಗೇ "ಈ ಸಿನಿಮಾದಲ್ಲಿ ಸನಿಹ ಪಾತ್ರ ಮಾಡಿದ್ದೇನೆ. ಈ ಪಾತ್ರ ಹಾಗೂ ಈ ಸಿನಿಮಾದ ಭಾಗವಾಗಿರೋದಕ್ಕೆ ನನಗೆ ತುಂಬಾ ಹೆಮ್ಮೆಯಿದೆ." ಎನ್ನುತ್ತಾರೆ ನಟಿ ಐಶಾನಿ ಶೆಟ್ಟಿ.
"ಈ ಸಿನಿಮಾದಲ್ಲಿ ಪಲ್ಲವಿ ಪಾತ್ರ ಮಾಡಿದ್ದೇನೆ. ತುಂಬಾ ಪ್ರಬುದ್ಧತೆ ಹೊಂದಿರುವ ಪಾತ್ರ, ಸರಳ ಜೀವಿ, ಸ್ವಾವಲಂಬಿ, ಮಿತಭಾಷಿ, ಬದುಕಿನ ಎಲ್ಲ ದ್ವಂದ್ವಗಳನ್ನು ಸಮಚಿತ್ತದಿಂದ ನೋಡುವ ಪಾತ್ರ ಪಲ್ಲವಿಯದ್ದು. ಸಿನಿಮಾ ನೋಡಿ ಹೋಗುವಾಗ ಪಲ್ಲವಿ ಎಲ್ಲರನ್ನು ಕಾಡುತ್ತಾಳೆ." ಎಂದು'ಕೆಜಿಎಫ್' ಖ್ಯಾತಿಯ ನಟಿ ಅರ್ಚನಾ ಜೋಯೀಸ್ ಹೇಳುತ್ತಾರೆ.
"ಸಂಬಂಧಗಳ ಸುತ್ತ, ಸ್ನೇಹದ ಸುತ್ತ, ಬಾಂಧವ್ಯ ಸುತ್ತ ಈ ಸಿನಿಮಾ ಹೇಳ ಹೊರಟ ವಿಷಯ ಬಹಳ ಇಷ್ಟವಾಯ್ತು. ಇಲ್ಲಿ ರಂಜಿತ್ ಅನ್ನೋ ಪಾತ್ರ ಮಾಡಿದ್ದೇನೆ. ತುಂಬಾ ಅನುಭವಿ, ಗಟ್ಟಿತನ ಇರುವ ಹುಡುಗನ ಪಾತ್ರ." ಎಂದು ನವೀನ್ ಶಂಕರ್ ಆಶಯ ವ್ಯಕ್ತಪಡಿಸುತ್ತಾರೆ. ಇದೇ ವೇಳೆ ನಟಿ ಅರ್ಚನಾ ಕೊಟ್ಟಿಗೆ, ನಟ ಅನಿರುದ್ದ್ ಆಚಾರ್ಯ ಕೂಡ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.


Click it and Unblock the Notifications











