»   » 'ಹಂಬಲ್ ಪೊಲಿಟಿಷಿಯನ್ ನಾಗರಾಜ್' ರಿಲೀಸ್ ಡೇಟ್ ಫಿಕ್ಸ್

'ಹಂಬಲ್ ಪೊಲಿಟಿಷಿಯನ್ ನಾಗರಾಜ್' ರಿಲೀಸ್ ಡೇಟ್ ಫಿಕ್ಸ್

Posted By:
Subscribe to Filmibeat Kannada

'ಹಂಬಲ್ ಪೊಲಿಟಿಷಿಯನ್ ನಾಗರಾಜ್' ಸಿನಿಮಾ ಈಗಾಗಲೇ ಟ್ರೇಲರ್ ಮೂಲಕ ದೊಡ್ಡ ಕ್ರೇಜ್ ಸೃಷ್ಟಿ ಮಾಡಿದೆ. ಸಿನಿಮಾ ಅಂದುಕೊಂಡಂತೆ ಆಗಿದ್ದರೆ ಕಳೆದ ವರ್ಷ ರಿಲೀಸ್ ಆಗಬೇಕಿತ್ತು. ಆದರೆ ಈ ಸಿನಿಮಾ ಈಗ ರಿಲೀಸ್ ಆಗುತ್ತಿದೆ. ಜನವರಿ 12 ರಾಜ್ಯಾದಂತ್ಯ ಈ ಚಿತ್ರ ಬಿಡುಗಡೆಯಾಗುತ್ತಿದೆ.

'ಹಂಬಲ್ ಪೊಲಿಟಿಷಿಯನ್ ನಾಗರಾಜ್' ಚಿತ್ರದ ಟ್ರೇಲರ್ ಈಗ ಯೂ ಟ್ಯೂಬ್ ನಲ್ಲಿ ನಂ1

ನಟ ರಕ್ಷಿತ್ ಶೆಟ್ಟಿ, 'ಗೋಧಿ ಬಣ್ಣ ಸಾಧಾರಣ ಮೈಕಟ್ಟು' ನಿರ್ದೇಶಕ ಹೇಮಂತ್‌ ಎಂ.ರಾವ್‌ ಹಾಗೂ ಪುಷ್ಕರ ಮಲ್ಲಿಕಾರ್ಜುನ್ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಇದೊಂದು ಕಾಮಿಡಿ ಆಧಾರಿತ ಸಿನಿಮಾವಾಗಿದೆ. ನಾಯಕನಾಗಿ ಕಾಣಿಸಿಕೊಂಡಿರುವ ನಿರೂಪಕ ಡ್ಯಾನಿಶ್‌ ಸೇಠ್ ಅಭಿನಯ ಚಿತ್ರದ ಹೈಲೈಟ್ ಆಗಿದೆ. ಅವರ ಕಾಮಿಡಿ ನೋಡಿ ಇಷ್ಟಪಟ್ಟಿರುವ ಪ್ರೇಕ್ಷಕರು ಸಿನಿಮಾಗಾಗಿ ಕಾಯುತ್ತಿದ್ದಾರೆ.

'Humble Politician Nograj' Movie will be releasing on january 12th

ರಾಜಕೀಯ ವ್ಯವಸ್ಥೆಯ ಲೋಪಗಳನ್ನು ಹಾಸ್ಯಮಯವಾಗಿ ಇಲ್ಲಿ ತೋರಿಸಲಾಗಿದೆ. ಚಿತ್ರದ ಮುಖ್ಯ ಪಾತ್ರವೊಂದರಲ್ಲಿ ನಟಿ ಶೃತಿ ಹರಿಹರನ್ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಈ ಸಿನಿಮಾದ ಮೇಲೆ ದೊಡ್ಡ ನಿರೀಕ್ಷೆ ಇದೆ. ಸಾಮಾಜಿಕ ಜಾಲತಾಣದಲ್ಲಿ ಸಿನಿಮಾ ಸಖತ್ ಕ್ರೇಜ್ ಹುಟ್ಟಿಸಿದೆ. ಇದೀಗ ಚಿತ್ರದ ಸೆನ್ಸಾರ್ ಕೂಡ ಆಗಿದ್ದು U ಸರ್ಟಿಫಿಕೇಟ್ ನೀಡಲಾಗಿದೆ. ಅಂದಹಾಗೆ, 'ಹಂಬಲ್ ಪೊಲಿಟಿಷಿಯನ್ ನಾಗರಾಜ್' ಸಿನಿಮಾ ಜನವರಿ 12ಕ್ಕೆ ರಿಲೀಸ್ ಆಗಲಿದೆ.

English summary
Actor Danish Sait's 'Humble Politician Nograj' Movie will be releasing on january 12th. The movie is producing by Rakshit Shetty, Pushkara Mallikarjunaiah and Hemanth M Rao.

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada

X