»   » ರಾಕಿಂಗ್ ಸ್ಟಾರ್ ಯಶ್ 'KGF' ಸೆಟ್ ನಲ್ಲಿ ರಾಧಿಕಾ ಪಂಡಿತ್

ರಾಕಿಂಗ್ ಸ್ಟಾರ್ ಯಶ್ 'KGF' ಸೆಟ್ ನಲ್ಲಿ ರಾಧಿಕಾ ಪಂಡಿತ್

Posted By:
Subscribe to Filmibeat Kannada

ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಕೆ.ಜಿ.ಎಫ್' ಸಿನಿಮಾದ ಚಿತ್ರೀಕರಣ ಭರದಿಂದ ನಡೆಯುತ್ತಿದೆ. ಈ ಸೆಟ್ ನಲ್ಲಿ ಈಗ ನಟಿ ರಾಧಿಕಾ ಪಂಡಿತ್ ಕೂಡ ಕಾಣಿಸಿಕೊಂಡಿದ್ದಾರೆ.

ಯಶ್ ಪತ್ನಿ ರಾಧಿಕಾ ಪಂಡಿತ್ ಇಂದು 'ಕೆ.ಜಿ.ಎಫ್' ಚಿತ್ರದ ಶೂಟಿಂಗ್ ಸೆಟ್ ಗೆ ಭೇಟಿ ಕೊಟ್ಟಿದ್ದರು. ಇದೇ ವೇಳೆ ರಾಕಿಂಗ್ ಜೋಡಿ ಚೆಂದದ ಫೋಟೋವನ್ನು ತೆಗೆದುಕೊಂಡಿದ್ದಾರೆ. ಪ್ರೀತಿಯ ಪತ್ನಿ ರಾಧಿಕಾ ಸಿನಿಮಾ ಸೆಟ್ ಗೆ ಬಂದಿರುವ ಖುಷಿಯನ್ನು ಯಶ್ ತಮ್ಮ ಫೇಸ್ ಬುಕ್ ಅಕೌಂಟ್ ನಲ್ಲಿ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.

ಯಶ್ 'ಕೆ.ಜಿ.ಎಫ್' ಚಿತ್ರದ ಲೇಟೆಸ್ಟ್ ಸುದ್ದಿ ಕೇಳಿದ್ರಾ?

In pic: Radhika Pandith in 'KGF' movie set

'ಉಗ್ರಂ' ಖ್ಯಾತಿಯ ನಿರ್ದೇಶಕ ಪ್ರಶಾಂತ್ ನೀಲ್ 'ಕೆ.ಜಿ.ಎಫ್' ಸಿನಿಮಾಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಸದ್ಯ ಸಿನಿಮಾದ ಚಿತ್ರೀಕರಣ ಭರದಿಂದ ಸಾಗಿದ್ದು, ಡಿಸೆಂಬರ್ ವೇಳೆಗೆ ಸಿನಿಮಾ ತೆರೆಗೆ ಬರಬಹುದು.

English summary
Kannada Actress Radhika Pandith, W/o Rocking Star Yash visits 'KGF' movie set

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada