ಕನ್ನಡ ಚಿತ್ರರಂಗದ 60 ಸಾಧಕರಿಗೆ ಚೆನ್ನೈನಲ್ಲಿ ಸನ್ಮಾನ

ಈಗಾಗಲೆ ಕನ್ನಡ ಚಿತ್ರರಂಗದ ಹಲವಾರು ತಾರೆಗಳು ಸಮಾರಂಭಕ್ಕೆ ಮತ್ತಷ್ಟು ರಂಗು ತುಂಬಲು, ವೇದಿಕೆ ಮೇಲೆ ಹೆಜ್ಜೆ ಹಾಕಲು ಚೆನ್ನೈನೆಡೆಗೆ ಪ್ರಯಾಣ ಸಾಗಿಸಿದ್ದಾರೆ. ಕನ್ನಡ ಸೇರಿದಂತೆ ತೆಲುಗು, ತಮಿಳು ಹಾಗೂ ಮಲಯಾಳಂ ಚಿತ್ರರಂಗದ ಗಣ್ಯರನ್ನೂ ಈ ಸಂದರ್ಭದಲ್ಲಿ ಸನ್ಮಾನಿಸಲಾಗುತ್ತಿದೆ.
ಕನ್ನಡ ಚಿತ್ರರಂಗದ ಬಹುತೇಕ ಕಲಾವಿದರು, ತಂತ್ರಜ್ಞರು ಶತಮಾನೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಕನ್ನಡ ಚಿತ್ರರಂಗದಲ್ಲಿ 40ಕ್ಕೂ ಹೆಚ್ಚು ವರ್ಷಗಳ ಕಾಲ ಶ್ರಮಿಸಿ ಅದರ ಬೆಳವಣಿಗೆಗಾಗಿ ಶ್ರಮಿಸಿರುವ ಸಾಧಕರಿಗೆ ಶತಮಾನೋತ್ಸವ ಸಮಾರಂಭದಲ್ಲಿ ಗೌರವ ಸಲ್ಲಿಸಲಾಗುತ್ತಿದೆ.
ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್, ನಟಿಯರಾದ ಲೀಲಾವತಿ, ಬಿ.ಸರೋಜಾದೇವಿ, ಭಾರತಿ ವಿಷ್ಣುವರ್ಧನ್, ನಟರಾದ ಅಂಬರೀಶ್, ಶಿವರಾಂ, ರವಿಚಂದ್ರನ್, ಶ್ರೀನಾಥ್, ದ್ವಾರಕೀಶ್, ಎಂ.ಎಸ್.ಉಮೇಶ್ ಅವರನ್ನು ಸನ್ಮಾನಿಸಲಾಗುತ್ತಿದೆ.
ಕನ್ನಡ ಚಿತ್ರರಂಗದ ನಿರ್ದೇಶಕರಾದ ಭಗವಾನ್, ರಾಜೇಂದ್ರ ಸಿಂಗ್ ಬಾಬು, ಕೆ.ಎಸ್.ಎಲ್.ಸ್ವಾಮಿ, ಗಿರೀಶ್ ಕಾಸರವಳ್ಳಿ, ನಿರ್ಮಾಪಕರಾದ ಕೆ.ಸಿ.ಎನ್. ಚಂದ್ರಶೇಖರ್, ಅಜಂತಾ ರಾಜು, ಲಹರಿ ವೇಲು ಮತ್ತಿತರನ್ನು ಸನ್ಮಾನಿಸಲಾಗುತ್ತಿದೆ. (ಏಜೆನ್ಸೀಸ್)


Click it and Unblock the Notifications











