ಲಾಂಗ್ ಹಿಡಿದು ರೀಲ್ಸ್ ಮಾಡಿದ ವಿನಯ್ ಗೌಡ, ರಜತ್: ಬಿಗ್ ಬಾಸ್ ಸ್ಪರ್ಧಿಗಳ ವಿರುದ್ಧ ಬಿತ್ತು ಕೇಸ್

ಸೋಶಿಯಲ್ ಮೀಡಿಯಾದಲ್ಲಿ ರೀಲ್ಸ್ ಮಾಡುವ ಕ್ರೇಜ್ ಹೆಚ್ಚಾಗಿದೆ. ಕ್ರಿಯೇಟಿವ್ ಆಗಿ ರೀಲ್ಸ್ ಮಾಡಬೇಕು ಎನ್ನುವ ಭರಾಟೆಯಲ್ಲಿ ತಪ್ಪು ಸಂದೇಶ ಸಾರುವ ವಿಡಿಯೋಗಳನ್ನು ಪೋಸ್ಟ್ ಮಾಡುತ್ತಿದ್ದಾರೆ. ಇಂತಹ ವಿಡಿಯೋಗಳ ವಿರುದ್ಧ ಅದೇ ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತವಾಗುತ್ತಿವೆ. ಪೊಲೀಸರು ಕೂಡ ಇಂತಹವರ ವಿರುದ್ಧ ಒಂದು ಕಣ್ಣು ಇಟ್ಟಿರುತ್ತಾರೆ. ಇತ್ತೀಚೆಗೆ ಬಿಗ್ ಬಾಸ್ ಖ್ಯಾತಿ ಡ್ರೋಣ್ ಪ್ರತಾಪ್ ಕೃಷಿ ಹೊಂಡದಲ್ಲಿ ಸ್ಪೋಟ ಮಾಡಿ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದರು.

ಈಗ ಇನ್ನಿಬ್ಬರು ಬಿಗ್ ಬಾಸ್ ಸ್ಪರ್ಧಿಗಳು ಹೀಗೆ ರೀಲ್ಸ್ ಮಾಡುವುದಕ್ಕೆ ಹೋಗಿ ಪೇಚಿಗೆ ಸಿಕ್ಕಿಕೊಂಡಿದ್ದಾರೆ. ಬಿಗ್ ಬಾಸ್ 10 ಸ್ಪರ್ಧಿ ವಿನಯ್ ಗೌಡ ಹಾಗೂ ಬಿಗ್ ಬಾಸ್ 11ರ ಸ್ಪರ್ಧಿ ರಜತ್ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಕೆಲವು ದಿನಗಳ ಹಿಂದೆ ಲಾಂಗ್ ಹಿಡಿದು ಇಬ್ಬರೂ ರೀಲ್ಸ್ ಮಾಡಿದ್ದರು. ಅದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

Instagram reel trouble FTR against Bigg Boss contestants Vinay Gowda and Rajath

ದೊಡ್ಮನೆ ಆನೆ ವಿನಯ್ ಗೌಡ ಹಾಗೂ ರಜತ್ ಇಬ್ಬರೂ ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಲಾಂಗ್ ಹಿಡಿದು ವಿಡಿಯೋ ಮಾಡಿದ ಹಿನ್ನೆಲೆಯಲ್ಲಿ ಇವರಿಬ್ಬರ ವಿರುದ್ಧ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಶಸ್ತ್ರಾಸ್ತ್ರ ಕಾಯ್ದೆಯಡಿ ಎಫ್‌ಐಆರ್ ಅನ್ನು ದಾಖಲು ಮಾಡಿಕೊಳ್ಳಲಾಗಿದೆ. ಅಷ್ಟಕ್ಕೂ ಈ ವಿಡಿಯೋದಲ್ಲಿ ಏನಿದೆ? ಎಫ್‌ಐಆರ್ ದಾಖಲು ಮಾಡುವಂತಹದ್ದು ಏನಾಗಿದೆ? ತಿಳಿಯುವುದಕ್ಕೆ ಮುಂದೆ ಓದಿ.

Take a Poll

ಸೋಶಿಯಲ್ ಮೀಡಿಯಾಗಳಲ್ಲಿ ಲಾಂಗ್, ಮಚ್ಚು, ಗನ್, ಬಂದೂಕು ಇಂತಹವು ಅಸಲಿ ಅಥವಾ ನಕಲಿ ಆಗಿರಲಿ ಹಿಡಿದು ಪೋಸ್ ಕೊಡುವುದು, ರೀಲ್ಸ್ ಮಾಡುವುದು ಮಾಡುವಂತಿಲ್ಲ. ಇಂತಹವರ ವಿರುದ್ಧ ಪೊಲೀಸರು ಕಣ್ಣಿಟ್ಟಿದ್ದಾರೆ. ಬೆಂಗಳೂರಿನಲ್ಲಿ ಇತ್ತೀಚೆಗೆ ಲಾಂಗ್ ಹಿಡಿದು ವೀಲ್ಹಿಂಗ್ ಮಾಡುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಅಂತಹ ವಿಡಿಯೋಗಳ ವಿರುದ್ಧ ಜನರು ಆಕ್ರೋಶ ಹೊರ ಹಾಕಿದ್ದರು. ಹೀಗಾಗಿ ಪೊಲೀಸರು ಅಂತಹವರನ್ನು ಹಿಡಿದು ಕೇಸ್ ದಾಖಲು ಮಾಡುತ್ತಿದೆ.

ಬೆಂಗಳೂರಿನ ಟ್ರಾಫಿಕ್‌ ಪೊಲೀಸರು ಹಾಗೂ ಸೈಬರ್‌ ಸೆಕ್ಯುರಿಟಿ ವಿಂಗ್‌ ಸೋಶಿಯಲ್‌ ಮೀಡಿಯಾಗಳಲ್ಲಿ ಹೀಗೆ ಆತಂಕ ಹುಟ್ಟಿಸುವಂತಹ ರೀಲ್ಸ್‌ ಮಾಡುವವರ ಮೇಲೆ ಕಣ್ಣಿಟ್ಟಿದೆ. ಇಂತಹ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಹಾಕಿದ್ದಲ್ಲಿ ಕೇಸ್ ದಾಖಲಾಗುತ್ತೆ. ಈಗ ಬಿಗ್ ಬಾಸ್ ಸ್ಪರ್ಧಿಗಳು ವಿನಯ್ ಗೌಡ ಹಾಗೂ ರಜತ್ ವಿರುದ್ಧ ಆಗಿದ್ದು ಕೂಡ ಇದೇನೆ. ರೀಲ್ಸ್ ಮಾಡುವ ಭರಾಟೆಯಲ್ಲಿ ಲಾಂಗ್ ಹಿಡಿದು ರಸ್ತೆಯಲ್ಲಿ ಒಡಾಡಿದ್ದರು.

ವಿನಯ್ ಗೌಡ ಹಾಗೂ ರಜತ್ ಇಬ್ಬರೂ ಹೆಚ್ಚು ಕಡಿಮೆ ಒಂದೇ ಕಾಸ್ಟ್ಯೂಮ್‌ನಲ್ಲಿ ಕೈಯಲ್ಲಿ ನಕಲಿ ಲಾಂಗ್ ಹಿಡಿದು ರೀಲ್ಸ್ ಮಾಡಿದ್ದರು. ಆ ರೀಲ್ಸ್ ಅನ್ನು ರಜತ್ ತನ್ನ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಶೇರ್ ಮಾಡಿದ್ದರು. ಹೀಗೆ ಲಾಂಗ್ ಹಿಡಿದು ವಿಡಿಯೋ ಮಾಡುವುದು, ರೀಲ್ಸ್ ಮಾಡುವುದು ಕಾನೂನು ಬಾಹಿರ ಆಗಿದೆ. ಇದರಿಂದ ಸಾರ್ವಜನಿಕರಲ್ಲಿ ಭಯದ ವಾತಾವಾರಣ ಸೃಷ್ಟಿಯಾಗಿದೆ ಎಂದು ಆರೋಪ ಮಾಡಿದ ಬೆನ್ನಲ್ಲೇ ಬಸವೇಶ್ವರ ನಗರ ಪೊಲೀಸರು ದೂರನ್ನು ದಾಖಲು ಮಾಡಿದ್ದಾರೆ.

ಈ ವಿಡಿಯೋ ನೋಡಿ ಜನ ಸಾಮಾನ್ಯರ ಮೇಲೆ ಇಂತಹ ರೀಲ್ಸ್ ಮಾಡಿದರೆ ದೂರು ದಾಖಲಾಗುತ್ತೆ. ಆದರೆ, ಸೆಲೆಬ್ರಿಟಿಗಳ ಮೇಲೆ ಯಾಕಿಲ್ಲ? ಎಂದು ಪೊಲೀಸರ ವಿರುದ್ಧ ಬೇಸರ ವ್ಯಕ್ತಪಡಿಸಿದ್ದರು. ಜನರಿಂದ ಟೀಕೆಗೆ ಒಳಗಾದ ಬೆನ್ನಲ್ಲೇ ವಿನಯ್ ಗೌಡ ಹಾಗೂ ರಜತ್ ಕಿಶನ್ ವಿರುದ್ಧ ದೂರು ದಾಖಲಿಸಿದ್ದಾರೆ. ಹೀಗಾಗಿ ಇಬ್ಬರಿಗೂ ಸಂಕಷ್ಟ ಎದುರಾಗಿದೆ.

More from Filmibeat

English summary
Instagram reel trouble FTR against Bigg Boss contestants Vinay Gowda and Rajath. Here is the reason
Read more about: bigg boss fir controversy
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X