For Quick Alerts
  ALLOW NOTIFICATIONS  
  For Daily Alerts

  ಬಾಡಿಬಿಲ್ಡರ್ ಎ.ವಿ.ರವಿಗೆ ಮದರ್ ತೆರೇಸಾ ರಾಷ್ಟ್ರೀಯ ಪ್ರಶಸ್ತಿ

  |

  ಅಂತರಾಷ್ಟ್ರೀಯ ಕ್ರೀಡಾಪಟು, ಮಿಸ್ಟರ್ ಇಂಡಿಯಾ, ಏಕಲವ್ಯ ಪ್ರಶಸ್ತಿ ಪುರಸ್ಕೃತ ಜಿಮ್ ರವಿ ಅವರಿಗೆ ಈ ಸಾಲಿನ ಮದರ್ ತೆರೇಸಾ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ.

  ಕರ್ನಾಟಕ ಜಿಮ್ ಮಾಲಿಕರ ಸಂಘದ ಅಧ್ಯಕ್ಷರಾಗಿರುವ ರವಿ ಅವರಿಗೆ ನ್ಯಾಷನಲ್ ಕ್ರಿಸ್ ಕೌನ್ಸಿಲ್ಆಫ್ ಇಂಡಿಯಾ ಮತ್ತು ದಿ ನ್ಯೂಸ್ ಪೇಪರ್ಸ್ ಅಸೋಸಿಯೇಷನ್ ಆಫ್ ಕರ್ನಾಟಕ ಜಂಟಿಯಾಗಿ ಈ ಪ್ರಶಸ್ತಿ ನೀಡಿ ಗೌರವಿಸಿದೆ. ಅಕ್ಟೋಬರ್ 15ರಂದು ನಡೆದ ಪ್ರಶಸ್ತಿ ಸಮಾರಂಭ ಕಾರ್ಯಕ್ರಮದಲ್ಲಿ ರವಿ ಅವರಿಗೆ ಈ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

  ಜಿಮ್ ರವಿ ಮಾಡಿರುವ ಸಾಧನೆ ಬಗ್ಗೆ ನಿಮಗೆಷ್ಟು ಗೊತ್ತು.?

  ಬೆಂಗಳೂರಿನ ಚಾಮರಾಜಪೇಟೆ ಯಲ್ಲಿನ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದಲ್ಲಿ ಪ್ರಶಸ್ತಿ ಸಮಾರಂಭ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಜಿಮ್ ರವಿ ಕ್ರೀಡಾಪಟು, ಬಾಡಿಬಿಲ್ಡರ್ ಮತ್ತು ನಟ ಕೂಡ ಹೌದು. ಜೊತೆಗೆ ಬಿಗ್ ಬಾಸ್ ಸೀಸನ್ 6ರಲ್ಲಿ ಸ್ಪರ್ಧಿಯಾಗಿ ಬಿಗ್ ಮನೆ ಪ್ರವೇಶ ಮಾಡಿದ್ದರು.

  ಎ.ವಿ.ರವಿ ಅಲಿಯಾಸ್ ಜಿಮ್ ರವಿ ಮೂಲತಃ ಕೋಲಾರದವರು. ಅಂತಾರಾಷ್ಟ್ರೀಯ ದೇಹದಾರ್ಢ್ಯ ಪಟು. ಪ್ರೋಟೀನ್ ಇಂಜೆಕ್ಷನ್ ಗಳನ್ನು ಪಡೆಯದೆ, ಮನೆ ಊಟ ಮಾಡಿ ನ್ಯಾಚುರಲ್ ಆಗಿ ಬಾಡಿ ಬಿಲ್ಡ್ ಮಾಡಿ ಖ್ಯಾತಿ ಗಳಿಸಿರುವವರು ಎ.ವಿ.ರವಿ.

  ನಮ್ಮ ಜನ ಏನು ಅಂತ ಅವತ್ತು ಪ್ರೂವ್ ಮಾಡಿದ್ರು | Filmibeat Kannada

  ರಾಜ್ಯ ಸರ್ಕಾರದಿಂದ ಏಕಲವ್ಯ ಪ್ರಶಸ್ತಿ ಪಡೆದಿರುವ ಎ.ವಿ.ರವಿ ಅನೇಕ ಬಾರಿ ಮಿಸ್ಟರ್ ಇಂಡಿಯಾ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. 'ಭಾರತ ಶ್ರೀ', 'ಭಾರತ ಶ್ರೇಷ್ಠ', 'ಕರ್ನಾಟಕ ಶ್ರೀ', 'ಕರ್ನಾಟಕ ಶ್ರೇಷ್ಠ' ಸೇರಿದಂತೆ ಹತ್ತು ಹಲವು ಪ್ರಶಸ್ತಿಗಳು ಹಾಗೂ 90ಕ್ಕೂ ಹೆಚ್ಚು ಚಿನ್ನದ ಪದಕಗಳನ್ನ ಎ.ವಿ.ರವಿ ಪಡೆದಿದ್ದಾರೆ.

  English summary
  Bodybuilder Dr A V Ravi is honoured with Mother Teresa National Award 2020.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X