ಜ್ಯೋತಿ ರೈ ಖಾಸಗಿ ವಿಡಿಯೋ ಲೀಕ್ ಪ್ರಕರಣ: ಡೀಪ್‌ಫೇಕ್ ತಂತ್ರಜ್ಞಾನಕ್ಕೆ ಸಿಲುಕಿದರೇ ಕನ್ನಡ ನಟಿ!
ಕನ್ನಡ ಹಾಗೂ ತೆಲುಗು ಕಿರುತೆರೆಯ ಜನಪ್ರಿಯ ನಟಿ ಜ್ಯೋತಿ ರೈ ಖಾಸಗಿ ವಿಡಿಯೋ ಪ್ರಕರಣ ಸಂಚಲನ ಸೃಷ್ಟಿಸಿದೆ. ಕಳೆದೆರಡು ದಿನಗಳಿಂದ ನಟಿ ಜ್ಯೋತಿ ರೈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಗರು ಕಾಮೆಂಟ್ ಮಾಡುತ್ತಿದ್ದಾರೆ. ಸದ್ಯ ಜ್ಯೋತಿ ರೈ ಅವರದ್ದೇ ಎನ್ನಲಾದ ಖಾಸಗಿ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ.
ಈ ವಿಡಿಯೋ ಪ್ರಕರಣ ಹೊರಬೀಳುತ್ತಿದ್ದಂತೆ ನೆಟ್ಟಿಗರು ನಟಿ ಜ್ಯೋತಿ ರೈ ಬೆಂಬಲಕ್ಕೆ ನಿಂತಿದ್ದಾರೆ. ಕಿಡಿಗೇಡಿ ಈ ಕೃತ್ಯದ ಬಗ್ಗೆ ಆಕ್ರೋಶ ವ್ಯಕ್ತವಾಗುತ್ತಿದೆ. ನೆಟ್ಟಿಗರು ಕಿಡಿಗೇಡಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕಾಮೆಂಟ್‌ಗಳನ್ನು ಮಾಡುತ್ತಿದ್ದಾರೆ. ಆದರೆ, ಇನ್ನೂ ಜ್ಯೋತಿ ರೈ ಈ ಬಗ್ಗೆ ನೇರವಾಗಿ ಪ್ರತಿಕ್ರಿಯೆ ನೀಡಿಲ್ಲ.

ಕಿರುತೆರೆ ಹಾಗೂ ಸಿನಿಮಾಗಳಲ್ಲಿ ನಟಿಸಿರುವ ಜ್ಯೋತಿ ರೈ ಈಗಾಗಲೇ ಈ ಪ್ರಕರಣದ ಬಗ್ಗೆ ಸೈಬರ್ ಕ್ರೈಂಗೆ ದೂರನ್ನು ನೀಡಿದ್ದಾರೆ. ಇದರ ಹೊರತಾಗಿಯೂ ಕಿಡಿಗೇಡಿ ಕೆಲವು ವಿಡಿಯೋ ಹಾಗೂ ಫೋಟೊಗಳನ್ನು ಹೊರಬಿಟ್ಟಿದ್ದಾನೆ. ಇದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇದೇ ಬೆನ್ನಲ್ಲೇ ಡೀಪ್‌ಫೇಕ್ ತಂತ್ರಜ್ಞಾನ ಬಳಿಸಿ ನಕಲಿ ವಿಡಿಯೋ ಮಾಡುತ್ತಿರಬಹುದು ಎಂಬ ಅನುಮಾನ ವ್ಯಕ್ತವಾಗುತ್ತಿದೆ.
ಹಾಸನ ಎಂಪಿ ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣ ದೇಶದೆಲ್ಲೆಡೆ ಸಂಚಲನ ಸೃಷ್ಟಿಸುತ್ತಿರುವ ಬೆನ್ನಲ್ಲೇ ಜ್ಯೋತಿ ರೈ ಅವರದ್ದೇ ಎನ್ನಲ್ಲಾದ ವಿಡಿಯೋಗಳು ಹಲ್‌ಚಲ್ ಎಬ್ಬಿಸಿದ್ದವು. ಈ ಸಂಬಂಧ ನಟಿ ಜ್ಯೋತಿ ರೈ ಕೆಲವು ದಿನಗಳ ಹಿಂದೆನೇ ಸೈಬರ್ ಕ್ರೈಂಗೆ ದೂರನ್ನು ನೀಡಿದ್ದರು ಎನ್ನಲಾಗಿದೆ.
ಸದ್ಯ ಈಗಾಗಲೇ ಬೇರೆ ನಟಿಯರ ಹಾಗೆ ಡೀಪ್‌ಫೇಕ್ ತಂತ್ರಜ್ಞಾನಕ್ಕೆ ಜ್ಯೋತಿ ರೈ ಕೂಡ ಬಲಿಯಾಗಿದ್ದಾರೆಯೇ ಎಂಬ ಅನುಮಾನ ಮೂಡಿದೆ. ಈಗಾಗಲೇ ಈ ಡೀಪ್‌ಫೇಕ್‌ನಿಂದ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಸೇರಿದಂತೆ ಹಲವು ನಟಿಯರಿಗೆ ಎಫೆಕ್ಟ್ ಆಗಿತ್ತು. ಈ ತಂತ್ರಜ್ಞಾನದ ಬಳಕೆ ಬಗ್ಗೆ ಅಮಿತಾಭ್ ಬಚ್ಚನ್ ಸೇರಿದಂತೆ ಹಲವು ಮಂದಿ ತಾರೆಯರು ವಿರೋಧ ವ್ಯಕ್ತಪಡಿಸಿದ್ದರು.

ಈಗ ಜ್ಯೋತಿ ರೈ ವಿಚಾರದಲ್ಲೂ ಕೂಡ ಇದೇ ಆಗಿರಬಹುದೆಂದು ಹೇಳಲಾಗುತ್ತಿದೆ. ಕಿಡಿಗೇಡಿ ಡೀಪ್‌ಫೇಕ್ ವಿಡಿಯೋ ಬಳಸಿ ನಟಿ ಜ್ಯೋತಿ ರೈ ನಕಲಿ ವಿಡಿಯೋ ಹಾಗೂ ಫೋಟೊಗಳನ್ನು ಸೃಷ್ಟಿಸಿರಬಹುದೆಂದು ಚರ್ಚೆಯಾಗುತ್ತಿದೆ. ಸದ್ಯ ಸೈಬರ್ ಕ್ರೈಂ ಪೊಲೀಸರು ಈ ವಿಡಿಯೋ ಹಾಗೂ ಕಿಡಿಗೇಡಿ ಬಗ್ಗೆ ಶೀಘ್ರದಲ್ಲೇ ಮಾಹಿತಿಯನ್ನು ನೀಡಬಹುದು.
ಕನ್ನಡ ಕಿರುತೆರೆಯಲ್ಲಿ ಮಿಂಚಿದ್ದ ನಟಿ ಜ್ಯೋತಿ ರೈ ಸದ್ಯ ತೆಲುಗು ಧಾರಾವಾಹಿಗಳಲ್ಲಿ ಮಿಂಚುತ್ತಿದ್ದಾರೆ. ಅಲ್ಲದೆ ವೆಬ್ ಸೀರಿಸ್‌ನಲ್ಲೂ ನಟಿಸಿದ್ದಾರೆ. ಸದ್ಯ ತನ್ನ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಗ್ಲಾಮರಸ್ ಫೋಟೊಗಳನ್ನು ಶೇರ್ ಮಾಡಿಕೊಳ್ಳುತ್ತಿದ್ದರು. ಈ ಫೋಟೊಗಳಿಗೆ ನೆಟ್ಟಿಗರು ಕಾಮೆಂಟ್‌ಗಳನ್ನು ಮಾಡುತ್ತಿದ್ದರು.


Click it and Unblock the Notifications











