ನಟಿ ರಶ್ಮಿಕಾ ಮಂದಣ್ಣ ಮನೆ ಮೇಲೆ ಐಟಿ ರೈಡ್
Recommended Video
ಸ್ಯಾಂಡಲ್ ವುಡ್ ನಟಿ ರಶ್ಮಿಕಾ ಮಂದಣ್ಣ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು ರಶ್ಮಿಕಾ ಅವರ ವಿರಾಜಪೇಟೆ ಮನೆ ಮೇಲೆ ದಾಳಿ ನಡೆಸಿದ್ದಾರೆ. ಸುಮಾರು 10ಕ್ಕು ಹೆಚ್ಚು ಅಧಿಕಾರಿಗಳು ಮನೆ ಮೇಲೆ ರೈಡ್ ಮಾಡಿದ್ದು, ಮನೆಯಲ್ಲಿ ಶೋಧ ನಡೆಸುತ್ತಿದ್ದಾರೆ.
ಮುಂಜಾನೆಯಿಂದ ಐಟಿ ಅಧಿಕಾರಿಗಳು ಮನೆ ಶೋಧ ಮಾಡುತ್ತಿದ್ದು, ರಶ್ಮಿಕಾ ಮನೆಯಲ್ಲಿರುವ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ರಶ್ಮಿಕಾ ತಂದೆ ಮದನ್ ಮಂದಣ್ಣ ದೊಡ್ಡ ಮಟ್ಟದ ಕಾಫಿ ಬೆಳೆಗಾರರು, ಮಗಳು ಖ್ಯಾತ ನಟಿಯಾಗಿ ಗುರಿತಿಸಿಕೊಂಡಿದ್ದಾರೆ. ಕೋಟಿ ಸಂಭಾವನೆ ತೆಗೆದುಕೊಳ್ಳುವ ರಶ್ಮಿಕಾಗೆ ಈಗ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ.

ಸಂಪೂರ್ಣ ಭದ್ರತೆಯ ನಡುವೆ ಪರಿಶೀಲನೆ ಮಾಡುತ್ತಿದ್ದಾರೆ. ರಶ್ಮಿಕಾ ಇತ್ತೀಚಿಗೆ ಹೆಚ್ಚು ಸಂಭಾವನೆ ಪಡೆಯುತ್ತಿದ್ದಾರೆ. ಹಾಗಾಗಿ ರಶ್ಮಿಕಾ ಟ್ಯಾಕ್ಸ್ ಕಟ್ಟುತ್ತಿದ್ದಾರಾ ಓನು ಎನ್ನುವ ಬಗ್ಗೆ ಅಧಿಕಾರಿಗಳು ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ. ರಶ್ಮಿಕಾ ಸದ್ಯ ಹೈದರಾಬಾದ್ ನಲ್ಲಿ ಇದ್ದಾರೆ ಎಂದು ಹೇಳಲಾಗುತ್ತಿದೆ. ರಶ್ಮಿಕಾ ಆ ಮನೆಗೆ ಬರುವುದು ತೀರಾ ಅಪರೂಪ. ಹಾಗಾಗಿ ಅಧಿಕಾರಿಗಳು ಈಗ ರಶ್ಮಿಕಾ ತಾಯಿಯನ್ನು ವಿಚಾರಿಸುತ್ತಿದ್ದಾರೆ. ಜೊತೆಗೆ ಅಧಿಕಾರಿಗಳು. ಮನೆಯ ಕೆಲಸದವರನ್ನು ವಿಚಾರಿಸುತ್ತಿದ್ದಾರೆ.
ನಟಿ ರಶ್ಮಿಕಾ ಕಿರಿಕ್ ಪಾರ್ಟಿ ಸಿನಿಮಾದಿಂದ ಬಣ್ಣದ ಲೋಕದ ಪಯಣ ಪ್ರಾರಂಭಿಸಿರುವ ರಶ್ಮಿಕಾ ಈಗ ಕನ್ನಡ ಮಾತ್ರವಲ್ಲದೆ ತೆಲುಗು ಮತ್ತು ತಮಿಳು ಚಿತ್ರರಂಗದಲ್ಲಿ ಖ್ಯಾತಿಗಳಿಸಿದ್ದಾರೆ. ಸ್ಟಾರ್ ನಟರ ಜೊತೆ ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ಮಾಡುತ್ತ ಸದ್ಯ ಕೋಟಿ ಸಂಭಾವನೆ ಪಡೆಯುತ್ತಿದ್ದಾರೆ ಕಿರಿಕ್ ಬೆಡಗಿ.
ಇತ್ತೀಚಿಗಷ್ಟೆ ರಶ್ಮಿಕಾ ಮಹೇಶ್ ಬಾಬು ಜೊತೆ ಸರಿಲೇರು ನೀಕೆವ್ವರು ಚಿತ್ರದಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದರು. ಈ ಸಿನಿಮಾ ರಿಲೀಸ್ ಆಗಿ ಸದ್ಯ ಉತ್ತಮ ಪ್ರದರ್ಶನ ಕಾಣುತ್ತಿದೆ. ಈ ನಡುವೆ ಈಗ ಐಟಿ ಅಧಿಕಾರಿಗಳು ಚಮಕ್ ನಟಿಗೆ ಶಾಕ್ ನೀಡಿದ್ದಾರೆ.


Click it and Unblock the Notifications











