ರಾಕಿಂಗ್ ಸ್ಟಾರ್ ಯಶ್ ಗಡ್ಡದ ಬಗ್ಗೆ ಹೀಗಂದರೇಕೆ ಹಾಲಿವುಡ್ ಸ್ಟಂಟ್ ಮಾಸ್ಟರ್

ಯಶ್ ನಟನೆಯ 'ಟಾಕ್ಸಿಕ್' ಚಿತ್ರಕ್ಕಾಗಿ ವಿದೇಶದ ಪ್ರತಿಭೆಗಳು ಕೆಲಸ ಮಾಡುತ್ತಿದ್ದಾರೆ. ಹಾಲಿವುಡ್ ಸ್ಟಂಟ್ ಮಾಸ್ಟರ್ ಜೆಜೆ ಪೆರ್ರಿ ಜೊತೆಗೆ ಬ್ರಿಟೀಷ್ ಕಲಾವಿದರು ಚಿತ್ರದಲ್ಲಿದ್ದಾರೆ. ಬಹಳ ಅದ್ಧೂರಿಯಾಗಿ ಸಿನಿಮಾ ನಿರ್ಮಾಣವಾಗ್ತಿದೆ. ಜೂನ್ 4ಕ್ಕೆ ತೆರೆಮೇಲೆ ರಾಯ ಹಾಗೂ ಟಿಕೆಟ್ ಆರ್ಭಟ ಶುರುವಾಗಲಿದೆ.

ಗೀತು ಮೋಹನ್ ದಾಸ್ ನಿರ್ದೇಶನದ ಚಿತ್ರವನ್ನು ಕೆವಿಎನ್ ಪ್ರೊಡಕ್ಷನ್ಸ್ ಜೊತೆ ಸೇರಿ ಯಶ್ ನಿರ್ಮಿಸಿದ್ದಾರೆ. ನಯನತಾರಾ, ಹುಮಾ ಖುರೇಷಿ, ತಾರಾ ಸುತಾರಿಯಾ, ಕಿಯಾರಾ ಅದ್ವಾನಿ, ರುಕ್ಮಿಣಿ ವಸಂತ್ ಸೇರಿ ದೊಡ್ಡ ತಾರಾಗಣ ಚಿತ್ರದಲ್ಲಿದೆ. 'ಟಾಕ್ಸಿಕ್' ಸಿನಿಮಾದಲ್ಲಿ ಕೆಲಸ ಮಾಡಿದ ಬಗ್ಗೆ ಮತ್ತೊಮ್ಮೆ ಸ್ಟಂಟ್ ಮಾಸ್ಟರ್ ಜೆಜೆ ಪೆರ್ರಿ ಪ್ರತಿಕ್ರಿಯಿಸಿದ್ದಾರೆ. ಸೀಟ್ ಬೆಲ್ಟ್ ಭದ್ರಪಡಿಸಿಕೊಳ್ಳಿ ಎಂದು ಪ್ರೇಕ್ಷಕರಿಗೆ ಸಲಹೆ ನೀಡಿದ್ದಾರೆ. ಯಶ್ ಗಡ್ಡದ ಬಗ್ಗೆ ಕೂಡ ಬರೆದುಕೊಂಡಿದ್ದಾರೆ.

J J Perry Hypes Yash s Toxic Fasten Your Seatbelts Post Sparks Buzz

'ಟಾಕ್ಸಿಕ್' ಚಿತ್ರಕ್ಕಾಗಿ ಇಡೀ ಪಾತ್ರವರ್ಗ ಮತ್ತು ಸಿಬ್ಬಂದಿಯೊಂದಿಗೆ ಕೆಲಸ ಮಾಡುವುದು ಬಹಳ ಗೌರವದ ಸಂಗತಿ. ಯಶ್ ಅವರಿಗೆ ಬಹಳ ಧನ್ಯವಾದ ಹೇಳಲೇಬೇಕು, ಅವರು ಉದ್ಯಮದಲ್ಲಿ ಒಳ್ಳೆ ಗಡ್ಡ(ಎಲ್ಲದಕ್ಕೂ ಧೈರ್ಯವಾಗಿ ನಿಲ್ಲುವ) ಹೊಂದಿರುವ ಅದ್ಭುತ ಪ್ರತಿಭಾನ್ವಿತ ನಟ. ನಾನು ಹೆಮ್ಮೆಯಿಂದ ಸ್ನೇಹಿತ ಎಂದು ಕರೆಯುವ ವ್ಯಕ್ತಿ. ಅದೇ ರೀತಿ ಗೀತು ಮೋಹನ್ ದಾಸ್ ಅದ್ಭುತ ನಿರ್ದೇಶಕಿ. ಅವರ ತಂಡದೊಂದಿಗೆ ಕೆಲಸ ಮಾಡುವುದನ್ನು ನಾನು ತುಂಬಾ ಆನಂದಿಸಿದೆ. ಅವರ ಛಾಯಾಗ್ರಹಣ ನಿರ್ದೇಶಕ ರಾಜೀವ್ ರವಿ ಅವರಿಗೆ ಅಭಿನಂದನೆಗಳು. ನಿಮ್ಮ ಸೀಟ್ ಸೀಟ್‌ಬೆಲ್ಟ್‌ಗಳನ್ನು ಕಟ್ಟಿಕೊಳ್ಳಿ.. 'ಟಾಕ್ಸಿಕ್' ಚಿತ್ರ ಬಿಡುಗಡೆಗಾಗಿ ಕಾತರದಿಂದ ಕಾಯುತ್ತಿದ್ದೇನೆ" ಎಂದು ಜೆಜೆ ಪೆರ್ರಿ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಚಿತ್ರದ ಒಂದಷ್ಟು ಮೇಕಿಂಗ್ ಫೋಟೊಗಳನ್ನು ಹಂಚಿಕೊಂಡಿದ್ದಾರೆ. ಅಂದಹಾಗೆ ಗೀತು ಮೋಹನ್ ದಾಸ್ ಪತಿ ರಾಜೀವ್ ರವಿ ಈ ಚಿತ್ರವನ್ನು ತಮ್ಮ ಕ್ಯಾಮರಾ ಕಣ್ಣಲ್ಲಿ ಸೆರೆ ಹಿಡಿದಿದ್ದಾರೆ. ಮಾರ್ಚ್ 19ಕ್ಕೆ 'ಟಾಕ್ಸಿಕ್' ಸಿನಿಮಾ ತೆರೆಗೆ ಬರಬೇಕಿತ್ತು. ಇರಾನ್-ಇಸ್ರೇಲ್ ಯುದ್ಧದ ನೆಪವೊಡ್ಡಿ ಸಿನಿಮಾ ಬಿಡುಗಡೆ ಮುಂದೂಡಲಾಗಿತ್ತು. ಲಾಸ್‌ವೇಗಾಸ್‌ನಲ್ಲಿ ನಡೆದ ಸಿನಿಮಾಕಾನ್ ಸಮಾವೇಶದಲ್ಲಿ ಯಶ್ ಭಾಗಿ ಆಗಿದ್ದರು. ಈ ವೇಳೆ 'ಟಾಕ್ಸಿಕ್' ಸಿನಿಮಾ ಬಗ್ಗೆ ಸಾಕಷ್ಟು ಸಂಗತಿಗಳನ್ನು ಹಂಚಿಕೊಂಡಿದ್ದಾರೆ.

'ಟಾಕ್ಸಿಕ್' ಸಿನಿಮಾ ತಂದೆ- ಮಗನ ನಡುವಿನ ಸಂಘರ್ಷದ ಕಥೆ ಹೊಂದಿದೆ ಎಂದು ಯಶ್ ತಿಳಿಸಿದ್ದಾರೆ. ಭಾರತಕ್ಕೆ 1947ರಲ್ಲಿ ಸ್ವಾತಂತ್ಯ್ರ ಬಂದರೂ ಗೋವಾದಲ್ಲಿ ಪೋರ್ಚುಗೀಸರು ಉಳಿದುಕೊಂಡಿದ್ದರು. ಆ ಕಾಲಘಟ್ಟದಲ್ಲಿ ಆ ಭಾಗದಲ್ಲಿ ನಡೆಯುವ ಗ್ಯಾಂಗ್‌ಸ್ಟರ್ ಸಿನಿಮಾ ಇದು ಎಂದು ಯಶ್ ಹೇಳಿದ್ದಾರೆ. 'ಕೆಜಿಎಫ್- 2' ಸಿನಿಮಾ ಬಂದು 4 ವರ್ಷಗಳ ಬಳಿಕ 'ಟಾಕ್ಸಿಕ್' ಸಿನಿಮಾ ತೆರೆಗೆ ಬರ್ತಿದೆ. ಹಾಗಾಗಿ ಅಭಿಮಾನಿಗಳ ನಿರೀಕ್ಷೆ ಹೆಚ್ಚಿದೆ.

ಹಾಲಿವುಡ್ ಪ್ರೇಕ್ಷಕರನ್ನು ಗಮನದಲ್ಲಿಟ್ಟುಕೊಂಡು ಯಶ್ ಈ ಸಿನಿಮಾ ತೆರೆಗೆ ತರುತ್ತಿದ್ದಾರೆ. ಕನ್ನಡದ ಜೊತೆಗೆ ಇಂಗ್ಲೀಷ್ ಭಾಷೆಯಲ್ಲಿ ಸಿನಿಮಾ ಚಿತ್ರೀಕರಣವಾಗಿದೆ. ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಸೇರಿ ವಿದೇಶದ ಭಾಷೆಗಳಿಗೆ ಸಿನಿಮಾ ಡಬ್ ಮಾಡಿ ರಿಲೀಸ್ ಮಾಡುವ ಪ್ರಯತ್ನಗಳು ನಡೀತಿದೆ. ರವಿ ಬಸ್ರೂರು ಜೊತೆಗೆ ಇನ್ನು 4 ಜನ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ.

ಈಗಾಗಲೇ 'ಟಾಕ್ಸಿಕ್' ಚಿತ್ರದ 3 ಟೀಸರ್ ಜೊತೆಗೆ ಒಂದು ಹಾಡು ರಿಲೀಸ್ ಆಗಿ ಹಿಟ್ ಆಗಿದೆ. ಯಶ್ ದ್ವಿಪಾತ್ರದಲ್ಲಿ ನಟಿಸಿರುವುದು ಇನ್ನಿಲ್ಲದ ಕುತೂಹಲ ಮೂಡಿಸಿದೆ. ಟಿಕೆಟ್ ಪಾತ್ರಕ್ಕಾಗಿ ಗಡ್ಡಕ್ಕೆ ಕತ್ತರಿ ಹಾಕಿ ಯಶ್ ಮಿಂಚಿದ್ದಾರೆ. ಮೇಕಿಂಗ್ ಹಂತದಲ್ಲೇ ಸಿನಿಮಾ ಸಿಕ್ಕಾಪಟ್ಟೆ ಸೌಂಡ್ ಮಾಡ್ತಿದ್ದು ಜೂನ್ 4ರಂದು ಬಾಕ್ಸಾಫೀಸ್ ಶೇಕ್ ಆಗುವ ನಿರೀಕ್ಷೆ ಮೂಡಿದೆ.

Read more about: yash toxic kvn productions
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X