ಬಿ ಟೌನ್ ನ 'ಕಿರಿಕ್ ಪಾರ್ಟಿ'ಗೆ ಸಾನ್ವಿ ಸಿಕ್ಕಳು

By Pavithra

ಸ್ಯಾಂಡಲ್ ವುಡ್ ನಲ್ಲಿ ಸೂಪರ್ ಡೂಪರ್ ಹಿಟ್ ಆಗಿದ್ದ 'ಕಿರಿಕ್ ಪಾರ್ಟಿ' ಸಿನಿಮಾ ಬಾಲಿವುಡ್ ಅಂಗಳದಲ್ಲಿ ಸೆಟ್ಟೇರಲಿದೆ. ಈಗಾಗಲೇ ತಿಳಿದಿರುವಂತೆ ಚಿತ್ರದಲ್ಲಿ ರಕ್ಷಿತ್ ಶೆಟ್ಟಿ ಪಾತ್ರವನ್ನು ಕಾರ್ತಿಕ್ ಆರ್ಯನ್ ನಿರ್ವಹಿಸುತ್ತಿದ್ದಾರೆ.

'ಕಿರಿಕ್ ಪಾರ್ಟಿ' ಸಿನಿಮಾದಲ್ಲಿ ಹೆಚ್ಚು ಗಮನ ಸೆಳೆದಿದ್ದ ಪಾತ್ರ ಎಂದರೆ ಸಾನ್ವಿ . ಹೌದು ರಶ್ಮಿಕಾ ಮಂದಣ್ಣ ಪಾತ್ರದಲ್ಲಿ ನಟಿ ಜಾಕ್ವೆಲಿನ್ ಕಾಣಿಸಿಕೊಳ್ಳಲಿದ್ದಾರೆ ಎನ್ನುವುದು ಈಗ ವಿಶೇಷ. 'ರೇಸ್ 3' ಸಿನಿಮಾ ನಂತರ ಯಾವ ಸಿನಿಮಾವನ್ನು ಒಪ್ಪಿಕೊಳ್ಳದ ಜಾಕ್ವೆಲಿನ್ ಫರ್ನಾಂಡಿಸ್, ಸದ್ಯ ಹಿಂದಿ 'ಕಿರಿಕ್ ಪಾರ್ಟಿ' ಸಿನಿಮಾದಲ್ಲಿ ಅಭಿನಯ ಮಾಡಲು ಸಿದ್ದತೆ ಮಾಡಿಕೊಂಡಿದ್ದಾರೆ.

Jacqueline Fernandez heroine of the Hindi remake of Kannada Kirik Party

ಅಕ್ಟೋಬರ್ ತಿಂಗಳಲ್ಲಿ ಸಿನಿಮಾ ಸೆಟ್ಟೇರಲಿದ್ದು ಅಜಯ್ ಕಪೂರ್ ಸಿನಿಮಾವನ್ನು ನಿರ್ಮಾಣ ಮಾಡಲಿದ್ದಾರೆ. ಗುಜರಾತಿ ಸಿನಿಮಾರಂಗದಲ್ಲಿ ಹೆಸರು ಮಾಡಿರುವ ಅಭಿಷೇಕ್ ಜೈನ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ.

Jacqueline Fernandez heroine of the Hindi remake of Kannada Kirik Party

ಸಿನಿಮಾ ಚಿತ್ರೀಕರಣ ಶುರುವಾಗುವ ಮುನ್ನ ಕಲಾವಿದರಿಗೆ ತರಬೇತಿಯನ್ನು ನೀಡಲಾಗುತ್ತಿದೆಯಂತೆ. ಸದ್ಯ ಟ್ವಿಟ್ಟರ್ ನಲ್ಲಿ ಕಾರ್ತಿಕ್ ಮತ್ತು ಜಾಕ್ವೆಲಿನ್ ಫರ್ನಾಂಡಿಸ್ ಫೋಟೋಗಳು ಹರಿದಾಡುತ್ತಿವೆ. ಇನ್ನು ಆರ್ಯ ಪಾತ್ರವನ್ನು ಯಾರು ನಿರ್ವಹಿಸಲಿದ್ದಾರೆ ಎನ್ನುವುದು ಗೊಂದಲವಾಗಿ ಉಳಿದಿದೆ.

More from Filmibeat

English summary
Jacqueline Fernandez is the heroine of the Hindi remake of Kannada block buster Kirik Party. Jacqueline Fernandes will be seen in Rasmika's upcoming role.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X