Don't Miss!
- News
ಇಂಡಿಯಾ ಗೇಟ್ ಮುಂದಿನ ಹುತಾತ್ಮರ ಸ್ಮರಣಾ ಚಿಹ್ನೆ ಸ್ಥಳಾಂತರ
- Technology
ಮೂರು ಹೊಸ JioFi ರೀಚಾರ್ಜ್ ಪ್ಲ್ಯಾನ್ ಲಾಂಚ್: ಏನೆಲ್ಲಾ ಪ್ರಯೋಜನಗಳು ಲಭ್ಯ?
- Education
CUK Recruitment 2022 : 61 ಪ್ರಾಧ್ಯಾಪಕ ಮತ್ತು ಸಹ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ
- Finance
ಮೇ.28: ಕಚ್ಚಾತೈಲ ದರ ಏರಿಕೆ: ನಿಮ್ಮ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ದರ ಇಲ್ಲಿದೆ
- Sports
IPL 2022: ಕ್ವಾಲಿಫೈಯರ್ ಪಂದ್ಯದಲ್ಲಿ ಕೊಹ್ಲಿ ಆರ್ಸಿಬಿಗೆ ಕೈಕೊಟ್ಟು ಫ್ಲಾಪ್ ಆದದ್ದು ಇದು ಮೂರನೇ ಬಾರಿ!
- Lifestyle
ಮಂಕಿಪಾಕ್ಸ್ vs ಕೊರೊನಾವೈರಸ್: ಈ ಎರಡು ವೈರಸ್ನಲ್ಲಿ ಮೈ ಮೇಲೆ ಏಳುವ ಗುಳ್ಳೆಗಳು ಹೇಗೆ ಭಿನ್ನವಾಗಿವೆ?
- Automobiles
ಭಾರತದಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಕಾರು ಮಾದರಿಗಳಿವು!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಕತ್ರಿನಾ-ನೋರಾ ಫತೇಹಿ ಇಬ್ಬರೂ ಅಲ್ಲ: ಸುದೀಪ್ ಜೊತೆ ಹೆಜ್ಜೆ ಹಾಕುತ್ತಿದ್ದಾರೆ ಬಾಲಿವುಡ್ ನ ಈ ಸ್ಟಾರ್ ನಟಿ
ಸ್ಯಾಂಡಲ್ ವುಡ್ ನ ಬಹುನಿರೀಕ್ಷೆಯ ಸಿನಿಮಾಗಳಲ್ಲಿ ಕಿಚ್ಚ ಸುದೀಪ್ ಅಭಿನಯದ ಫ್ಯಾಂಟಮ್ ಸಿನಿಮಾ ಕೂಡ ಒಂದು. ಈಗಾಗಲೇ ಬಹುತೇಕ ಚಿತ್ರೀಕರಣ ಮುಗಿಸಿರುವ ಸಿನಿಮಾತಂಡ, ಇತ್ತೀಚಿಗಷ್ಟೆ ಕೇರಳದಲ್ಲಿ ಚಿತ್ರದ ಪ್ರಮುಖ ಹಾಡಿನ ಚಿತ್ರೀಕರಣ ಮಾಡಿದ್ದಾರೆ.
ಫ್ಯಾಂಟಮ್ ಸಿನಿಮಾವನ್ನು ದೊಡ್ಡ ಮಟ್ಟದಲ್ಲಿ ರಿಲೀಸ್ ಮಾಡಲು ಚಿತ್ರತಂಡ ಪ್ಲಾನ್ ಮಾಡಿದೆ. ಈ ಚಿತ್ರ ಕನ್ನಡ ಸೇರಿದಂತೆ ಬೇರೆ ಬೇರೆ ಭಾಷೆಯಲ್ಲೂ ತೆರೆಗೆ ಬರುತ್ತಿದೆ. ಇದೀಗ ಸಿನಿಮಾದ ಬಗ್ಗೆ ಮತ್ತೊಂದು ಸುದ್ದಿ ಹರಿದಾಡುತ್ತಿದೆ. ಚಿತ್ರದಲ್ಲಿ ಬಾಲಿವುಡ್ ನ ಖ್ಯಾತ ನಟಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಹೌದು, ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್, ಸುದೀಪ್ ಜೊತೆ ಹೆಜ್ಜೆ ಹಾಕಲಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ.
ಸುದೀಪ್
'ಫ್ಯಾಂಟಮ್'
ಸಿನಿಮಾದಲ್ಲಿ
ಕತ್ರಿನಾ
ಕೈಫ್;
ನಿರ್ಮಾಪಕ
ಜಾಕ್
ಮಂಜು
ಹೇಳಿದ್ದೇನು?

ಸುದೀಪ್ ಜೊತೆ ಜಾಕ್ವೆಲಿನ್ ಫರ್ನಾಂಡಿಸ್?
ಫ್ಯಾಂಟಮ್ ಸಿನಿಮಾದ ವಿಶೇಷ ಹಾಡಿಗಾಗಿ ಜಾಕ್ವೆಲಿನ್ ಫರ್ನಾಂಡೀಸ್ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಒಂದು ವೇಳೆ ಫ್ಯಾಂಟಮ್ ನಲ್ಲಿ ಜಾಕ್ವೆಲಿನ್ ಹೆಜ್ಜೆ ಹಾಕಿದರೆ ಈ ಮೂಲಕ ಮಾದಲೆ ಬಾರಿಗೆ ಚಂದನವನಕ್ಕೆ ಎಂಟ್ರಿ ಕೊಡುತ್ತಿದ್ದಾರೆ.

ಕತ್ರಿನಾ ಮತ್ತು ನೋರಾ ಫತೇಹಿ ಹೆಸರು ಕೇಳಿಬಂದಿತ್ತು
ಅಂದಹಾಗೆ ಈ ಹಿಂದೆ ಫ್ಯಾಂಟಮ್ ನ ವಿಶೇಷ ಹಾಡಿನಲ್ಲಿ ಸುದೀಪ್ ಜೊತೆ ಬಾಲಿವುಡ್ ಖ್ಯಾತ ನಟಿ ಕತ್ರಿನಾ ಕೈಫ್ ಕಾಣಿಸಿಕೊಳ್ಳಲಿದ್ದಾರೆ ಅಥವಾ ನೋರಾ ಫತೇಹಿ ಹೆಜ್ಜೆಹಾಕಲಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿತ್ತು. ಇಬ್ಬರಲ್ಲಿ ಒಬ್ಬರು ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಲಾಗಿತ್ತು. ಅಲ್ಲದೆ ಈ ಬಗ್ಗೆ ಚಿತ್ರದ ನಿರ್ಮಾಪಕ ಜಾಕ್ ಮಂಜು ಸಹ ಸ್ಪಷ್ಟಪಡಿಸಿದ್ದರು.
ದುಬೈನಲ್ಲಿ
ಫ್ಯಾಂಟಮ್
ಸಂಭ್ರಮ:
ಕಿಚ್ಚನಿಗಾಗಿಯೇ
ಇದೆಲ್ಲಾ

ಏಪ್ರಿಲ್ ನಲ್ಲಿ ಹಾಡಿನ ಚಿತ್ರೀಕರಣ
ಜಾಕ್ವೆಲಿನ್ ಫರ್ನಾಂಡೀಸ್, ಸುದೀಪ್ ಜೊತೆ ಹೆಜ್ಜೆ ಹಾಕುವುದು ಬಹುತೇಕ ಖಚಿತವಾಗಿದೆ ಎನ್ನುವ ಮಾತುಗಳು ಕೇಳಿಬರುತ್ತಿದೆ. ಈಗಾಗಲೇ ಜಾಕ್ವೆಲಿನ್ ಹಾಡನ್ನು ಕೇಳಿ ಇಷ್ಟಪಟ್ಟಿದ್ದಾರಂತೆ. ಅಲ್ಲದೆ ಮುಂದಿನ ವರ್ಷ ಏಪ್ರಿಲ್ ನಲ್ಲಿ ಚಿತ್ರೀಕರಣ ಮಾಡುವುದಾಗಿ ಹೇಳಿದ್ದಾರಂತೆ. ಹಾಗಾಗಿ ಫ್ಯಾಂಟಮ್ ಸಿನಿಮಾದ ಬಹುನಿರೀಕ್ಷೆಯ ಹಾಡಿನ ಚಿತ್ರೀಕರಣ ಏಪ್ರಿಲ್ ನಲ್ಲಿ ಮಾಡಲು ಸಿನಿಮಾತಂಡ ನಿರ್ಧರಿಸಿದೆ ಎನ್ನಲಾಗುತ್ತಿದೆ.

ಬುರ್ಜ್ ಖಲೀಫಾದಲ್ಲಿ ಟೀಸರ್ ರಿಲೀಸ್
ಇನ್ನು ಫ್ಯಾಂಟಮ್ ಸಿನಿಮಾದ ಟೀಸರ್ ಅನ್ನು ದೊಡ್ಡ ಮಟ್ಟದಲ್ಲಿ ರಿಲೀಸ್ ಮಾಡಲು ಸಿನಿಮಾತಂಡ ಪ್ಲಾನ್ ಮಾಡಿದೆ. ವಿಶ್ವದ ಎತ್ತರದ ಮತ್ತು ದುಬಾರಿ ಹೋಟೆಲ್ ಗಳಲ್ಲಿ ಒಂದಾಗಿರುವ ಬುರ್ಜ್ ಖಲೀಫಾದಲ್ಲಿ ಟೀಸರ್ ರಿಲೀಸ್ ಮಾಡುವ ಯೋಜನೆ ಹಾಕಿಕೊಂಡಿದ್ದಾರೆ. ಆದರೀಗ ಕೊರೊನಾ ರೂಪಾಂತರ ವೈರಸ್ ಲಗ್ಗೆ ಇಟ್ಟಿರುವುದರಿಂದ ಈ ಯೋಜನೆ ತಲೆಕೆಳಕಾದರೂ ಅಚ್ಚರಿ ಇಲ್ಲ.