ಜಗ್ಗೇಶ್ ಹುಟ್ಟುಹಬ್ಬದ ಸಂಭ್ರಮದಲ್ಲೇ 'ರಾಘವೇಂದ್ರ ಸ್ಟೋರ್ಸ್' ರಿಲೀಸ್ ಡೇಟ್ ಘೋಷಣೆ

ಹೊಂಬಾಳೆ ಫಿಲ್ಮ್ಸ್ ಬ್ಯಾನರ್‌ನಲ್ಲಿ ನವರಸ ನಾಯಕ ಜಗ್ಗೇಶ್ ನಟನೆಯ 'ರಾಘವೇಂದ್ರ ಸ್ಟೋರ್ಸ್' ಸಿನಿಮಾ ರಿಲೀಸ್ ಡೇಟ್ ಕೊನೆಗೂ ಘೋಷಣೆಯಾಗಿದೆ. ಜಗ್ಗೇಶ್ ಹುಟ್ಟುಹಬ್ಬದ ಸಂಭ್ರಮದಲ್ಲೇ ಹೊಂಬಾಳೆ ಸಂಸ್ಥೆ ಈ ವಿಚಾರವನ್ನು ಹಂಚಿಕೊಂಡಿದೆ. ಸಂತೋಷ್ ಆನಂದ್ ರಾಮ್ ನಿರ್ದೇಶನದ ಈ ಕಾಮೆಡಿ ಎಂಟರ್‌ಟೈನರ್ ಚಿತ್ರದಲ್ಲಿ ಜಗ್ಗೇಶ್ ಅಡುಗೆ ಭಟ್ಟನ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾ ಬಹಳ ಕುತೂಹಲ ಮೂಡಿಸಿದೆ.

ಎಲ್ಲಾ ಅಂದುಕೊಂಡಂತೆ ಆಗಿದ್ದರೆ ಕಳೆದ ವರ್ಷವೇ 'ರಾಘವೇಂದ್ರ ಸ್ಟೋರ್ಸ್' ಸಿನಿಮಾ ರಿಲೀಸ್ ಆಗಬೇಕಿತ್ತು. ಕಳೆದ ವರ್ಷ ಆಗಸ್ಟ್ 5ಕ್ಕೆ ಸಿನಿಮಾ ರಿಲೀಸ್ ಮಾಡೋದಾಗಿ ಚಿತ್ರತಂಡ ಘೋಷಿಸಿತ್ತು. ಆದರೆ ಕೊನೆ ಕ್ಷಣದಲ್ಲಿ ರಿಲೀಸ್ ಡೇಟ್ ಮುಂದೂಡುವಂತಾಗಿತ್ತು. 'ರಾಘವೇಂದ್ರ ಸ್ಟೋರ್ಸ್' ಬದಲು ಸೆಪ್ಟೆಂಬರ್ 30ಕ್ಕೆ 'ಕಾಂತಾರ' ಚಿತ್ರವನ್ನು ಹೊಂಬಾಳೆ ಸಂಸ್ಥೆ ಪ್ರೇಕ್ಷಕರ ಮುಂದೆ ತಂದಿತ್ತು. ನಂತರ 'ರಾಘವೇಂದ್ರ ಸ್ಟೋರ್ಸ್' ಸಿನಿಮಾ ನೇರವಾಗಿ ಓಟಿಟಿಗೆ ಬರುತ್ತದೆ ಎನ್ನುವ ಗುಸುಗುಸು ಶುರುವಾಗಿತ್ತು. ಆದರೆ ಈ ವಿಚಾರವನ್ನು ಸಂತೋಷ್ ಆನಂದ್‌ರಾಮ್ ಅಲ್ಲಗಳೆದಿದ್ದರು.

Jaggesh Birthday: Hombale Films announced Raghavendra stores movie release date

ಜಗ್ಗೇಶ್ 60ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಇದೇ ಸಂಭ್ರಮದಲ್ಲಿ ಹೊಂಬಾಳೆ ಸಂಸ್ಥೆ ಟ್ವೀಟ್ ಮಾಡಿ "ನಮ್ಮ ರಾಘವೇಂದ್ರ ಸ್ಟೋರ್ಸ್‌ನ ಖ್ಯಾತ ಬಾಣಸಿಗರಾದ ಜಗ್ಗೇಶ್ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ನವಿರಾಗಿ ಸಿದ್ಧಪಡಿಸಿರುವ ನವರಸದೌತಣವನ್ನು ಏಪ್ರಿಲ್ 28, 2023ರಂದು ನಿಮ್ಮ ಹತ್ತಿರದ ಚಿತ್ರಮಂದಿರಗಳಲ್ಲಿ ಉಣಬಡಿಸಲಿದ್ದೇವೆ. ವಯಸ್ಸು ಕೈ ಜಾರಿದೆ, ಕೈ ಹಿಡಿಯಲು ಒಂದು ವಧು ಬೇಕಿದೆ" ಎಂದು ಬರೆದುಕೊಂಡಿದೆ.

ಹೋಟೆಲ್‌ನಲ್ಲಿ ಬಾಣಸಿಗನ ಕೆಲಸ ಮಾಡಿಕೊಂಡಿರುವ ನಾಯಕನಿಗೆ ವಯಸ್ಸು 40 ದಾಟಿದರೂ ಇನ್ನು ಮದುವೆ ಆಗಿರಲ್ಲ. ಆತ ಮದುವೆ ಹುಡುಗಿ ಹುಡುಕಲು, ಮದವೆ ಆಗಲು ಏನೆಲ್ಲಾ ಕಸರತ್ತು ಮಾಡುತ್ತಾನೆ ಎನ್ನುವುದನ್ನು ತಮಾಷೆಯಾಗಿ ಸಂತೋಷ್ ಆನಂದ್‌ರಾಮ್ ಈ ಚಿತ್ರದಲ್ಲಿ ಕಟ್ಟಿಕೊಟ್ಟಿದ್ದಾರೆ. ಜಗ್ಗಣ್ಣ ತಮ್ಮ ಅದ್ಭುತ ಅಭಿನಯದಿಂದ ಪ್ರೇಕ್ಷಕರನ್ನು ರಂಜಿಸಲು ಬರುತ್ತಿದ್ದಾರೆ. ಈಗಾಗಲೇ ಚಿತ್ರದ ಸಣ್ಣ ಟೀಸರ್ ರಿಲೀಸ್ ಆಗಿ ಗಮನ ಸೆಳೆದಿದೆ. ಇದೀಗ ಹೊಸ ರಿಲೀಸ್ ಡೇಟ್ ಘೋಷಿಸಿರುವ ಹೊಂಬಾಳೆ ಸಂಸ್ಥೆ ಸಿನಿಮಾ ಪ್ರಚಾರಕ್ಕೆ ಚಾಲನೆ ನೀಡಿದೆ. ಶೀಘ್ರದಲ್ಲೇ ಚಿತ್ರದ ಮೊದಲ ಸಾಂಗ್ ರಿಲೀಸ್ ಆಗಲಿದೆ.

ಶ್ವೇತಾ ಶ್ರೀವಾಸ್ತವ್ 'ರಾಘವೇಂದ್ರ ಸ್ಟೋರ್ಸ್' ಚಿತ್ರದಲ್ಲಿ ನವರಸ ನಾಯಕನಿಗೆ ಜೋಡಿಯಾಗಿ ಮಿಂಚಿದ್ದಾರೆ. ಸಂತೋಷ್ ಆನಂದ್ ರಾಮ್ ಹಾಗೂ ಜಗ್ಗೇಶ್ ಕಾಂಬಿನೇಷನ್ ಹೇಗಿರುತ್ತೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇದೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ, ಶ್ರೀಶ ಕುದುವಳ್ಳಿ ಛಾಯಾಗ್ರಹಣವಿದೆ. ವಿಶ್ವಾಸ್ ಕಶ್ಯಪ್ ಕಲಾ ನಿರ್ದೇಶನದಲ್ಲಿ ಸಿನಿಮಾ ಮತ್ತಷ್ಟು ಸೊಗಸಾಗಿ ಮೂಡಿ ಬಂದಿದೆ. ಚಿತ್ರದ ಒನ್‌ಲೈನ್ ಸ್ಟೋರಿ ಮಜವಾಗಿದ್ದು ಜಗ್ಗಣ್ಣ ತಮ್ಮ ಕಾಮೆಡಿ ಟೈಮಿಂಗ್‌ನಿಂದ ಪ್ರೇಕ್ಷಕರಿಗೆ ನಗುವಿನ ಕಚಗುಳಿ ಇಡಲಿದ್ದಾರೆ.

60ನೇ ಹುಟ್ಟುಹಬ್ಬದ ಸಂಭ್ರಮದಲ್ಲಿರುವ ನವರಸ ನಾಯಕನಿಗೆ ಶುಭಾಶಯಗಳ ಮಹಾಪೂರವೇ ಹರಿದು ಬರ್ತಿದೆ. ಚಿತ್ರರಂಗ ಹಾಗೂ ರಾಜಕೀಯರಂಗದಲ್ಲಿ ಸಕ್ರಿಯರಾಗಿರುವ ಜಗ್ಗೇಶ್ ಅವರಿಗೆ ಈ ಹುಟ್ಟುಹಬ್ಬ ಬಹಳ ವಿಶೇಷ. ಈ ವಿಶೇಷವಾದ ದಿನದಂದೇ 'ರಾಘವೇಂದ್ರ ಸ್ಟೋರ್ಸ್' ರಿಲೀಸ್ ಡೇಟ್ ಘೋಷಣೆ ಆಗಿರುವುದು ಮತ್ತಷ್ಟು ಸಂತಸ ತಂದಿದೆ. ಅಭಿಮಾನಿಗಳು 'ರಾಘವೇಂದ್ರ ಸ್ಟೋರ್ಸ್' ಚಿತ್ರಕ್ಕಾಗಿ ಬಹಳ ದಿನಗಳಿಂದ ಕಾಯುತ್ತಿದ್ದಾರೆ. ಸಿನಿಮಾ ಥಿಯೇಟರ್‌ನಲ್ಲೇ ರಿಲೀಸ್ ಆಗುತ್ತಿರುವುದು ಮತ್ತಷ್ಟು ಸಂತಸ ತಂದಿದೆ.

More from Filmibeat

English summary
Jaggesh Birthday: Hombale Films announced Raghavendra stores movie release date. Santhosh Ananddram directed comedy entertainer scheduled for theatrical release on 28 april 2023. know more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X