ಯಶವಂತಪುರದಿಂದ ಚುನಾವಣಾ ಕಣಕ್ಕೆ ಬಿಜೆಪಿ ಅಭ್ಯರ್ಥಿ ನಟ ಜಗ್ಗೇಶ್!

By Harshitha

ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ಕೆಲವು ದಿನಗಳು ಬಾಕಿ ಉಳಿದಿರುವಾಗ, ಭಾರತೀಯ ಜನತಾ ಪಾರ್ಟಿ ತನ್ನ ನಾಲ್ಕನೇ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದ್ದು, 7 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ.

ಬೆಂಗಳೂರಿನ ಯಶವಂತಪುರ ವಿಧಾನಸಭಾ ಕ್ಷೇತ್ರದಿಂದ ನವರಸ ನಾಯಕ ಜಗ್ಗೇಶ್ ಕಣಕ್ಕೆ ಇಳಿಯಲಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸಲು ಜಗ್ಗೇಶ್ ಗೆ ಬಿಜೆಪಿ ಟಿಕೆಟ್ ನೀಡಿದೆ.

ನಟ ಜಗ್ಗೇಶ್ ಮೂಲತಃ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಜಡೆಮಾಯಸಂದ್ರ ದವರು. 2008 ರಲ್ಲಿ ತಮ್ಮ ತವರು ನೆಲ ತುರುವೇಕೆರೆ ವಿಧಾನಸಭೆ ಕ್ಷೇತ್ರದಿಂದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ನಟ ಜಗ್ಗೇಶ್ ಗೆಲುವು ಕಂಡಿದ್ದರು.

Jaggesh gets ticket to contest from Yashwanthpur is Assembly elections 2018

ಬಳಿಕ ಕಾಂಗ್ರೆಸ್ ತೊರೆದು, ಬಿಜೆಪಿ ಸೇರಿದ್ದ ಜಗ್ಗೇಶ್ ವಿಧಾನ ಪರಿಷತ್ ಸದಸ್ಯರಾದರು. 'ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ'ದ ವೈಸ್ ಚೇರ್ ಮ್ಯಾನ್ ಆಗಿ ಸೇವೆ ಸಲ್ಲಿಸಿದ ನಟ ಜಗ್ಗೇಶ್ ಗೆ ಈ ಬಾರಿ ಚುನಾವಣೆಯಲ್ಲಿ ಕಣಕ್ಕೆ ಇಳಿಯಲು ಬಿಜೆಪಿ ಹೈಕಮಾಂಡ್ ಸಮ್ಮತಿ ನೀಡಿದೆ.

ಯಶವಂತಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಎಸ್.ಟಿ.ಸೋಮಶೇಖರ್ ಹಾಗೂ ಜೆ.ಡಿ.ಎಸ್ ನಿಂದ ಜವರಾಯಿ ಗೌಡ ಈ ಬಾರಿ ಚುನಾವಣಾ ಕಣದಲ್ಲಿದ್ದಾರೆ. ದಶಕದ ಬಳಿಕ ಚುನಾವಣಾ ಕಣಕ್ಕೆ ಇಳಿದಿರುವ ಜಗ್ಗೇಶ್, ಗೆಲುವಿನ ನಗೆ ಬೀರುವುದು, ಬಿಡುವುದು ನಿಮ್ಮ ಕೈಯಲ್ಲಿದೆ.

More from Filmibeat

English summary
BJP Party has released the 4th list of 7 candidates for Upcoming elections. Kannada Actor, BJP Politician Jaggesh gets ticket to contest from Yashwanthpur Constituency in Legislative Assembly Elections 2018.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X