twitter
    For Quick Alerts
    ALLOW NOTIFICATIONS  
    For Daily Alerts

    ಯಾವ ಚಿಕಿತ್ಸೆ ನೀಡುತ್ತಾರೆ ತಿಳಿಯುತ್ತಿಲ್ಲ, ಪಾರದರ್ಶಕ ವ್ಯವಸ್ಥೆ ಆಗಲಿ; ನಟ ಜಗ್ಗೇಶ್

    |

    ಭಾರತ ಕೋವಿಡ್-19ನಿಂದ ತತ್ತರಿಸಿ ಹೋಗಿದೆ. ಸೋಂಕಿತರು ಆಸ್ಪತ್ರೆ, ಬೆಡ್, ಆಕ್ಸಿಜನ್ ಸಿಗದೆ ಒದ್ದಾಡುತ್ತಿದ್ದಾರೆ. ಸಾವಿರಾರು ಸೋಂಕಿತರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಒಂದು ವೇಳೆ ಆಸ್ಪತ್ರೆ ಸಿಕ್ಕಿದರೂ ಕೇವಲ 2 ಅಥವಾ 3 ದಿನಗಳಲ್ಲೇ ಸೋಂಕಿತರು ಸಾವನ್ನಪ್ಪುತ್ತಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ.

    ವೈದ್ಯರು ಯಾವ ಚಿಕಿತ್ಸೆ ನೀಡುತ್ತಿದ್ದಾರೆ, ಹೇಗೆ ನೋಡಿಕೊಳ್ಳುತ್ತಿದ್ದಾರೆ ಎನ್ನುವ ಮಾಹಿತಿ ಹೊರಗಿರುವ ಸಂಬಂಧಿಕರಿಗೆ ತಿಳಿಯುತ್ತಿಲ್ಲ. ಒಂದು ವೇಳೆ ಸಾವನ್ನಪ್ಪಿದರೆ ಮುಖ ಕೂಡ ನೋಡಲು ಸಂಬಂಧಿಕರಿಗೆ ಬಿಡುತ್ತಿಲ್ಲ. ಇಂಥ ಕೆಟ್ಟ ಪರಿಸ್ಥಿತಿಯಲ್ಲಿದೆ ದೇಶ. ಈ ಬಗ್ಗೆ ನಟ ಜಗ್ಗೇಶ್ ಪ್ರತಿಕ್ರಿಯೆ ನೀಡಿ ಪಾರದರ್ಶಕ ವ್ಯವಸ್ಥೆ ಮಾಡಿ ಎಂದು ಸಿಎಂಗೆ ಮನವಿ ಮಾಡಿದ್ದಾರೆ.

    'ಹಣಕ್ಕಾಗಿ ಸಾಯಬೇಡಿ, ನೊಂದವರ ಪೀಡಿಸಬೇಡಿ, ತಿನ್ನಲು ಅನ್ನಸಿಗದೆ ಸಾಯುತ್ತೀರಿ''ಹಣಕ್ಕಾಗಿ ಸಾಯಬೇಡಿ, ನೊಂದವರ ಪೀಡಿಸಬೇಡಿ, ತಿನ್ನಲು ಅನ್ನಸಿಗದೆ ಸಾಯುತ್ತೀರಿ'

    ಈ ಬಗ್ಗೆ ಜಗ್ಗೇಶ್ ದೀರ್ಘವಾಗಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. 'ಮಾನ್ಯ ಮುಖ್ಯ ಮಂತ್ರಿಗಳ ಗಮನಕ್ಕೆ: ಸಾರ್, ಕೊರೊನಾ ರೋಗಿ ಅಡ್ಮಿಟ್ ಆದ 2/3ದಿನಕ್ಕೆ ಸಾವು ಸಂಭವಿಸುತ್ತಿದೆ (ಸ್ವಂತ ಅನುಭವ). ಯಾವ ಚಿಕಿತ್ಸೆ ನೀಡುತ್ತಾರೆ ಬಂಧುಗಳಿಗೆ ಹೊರಗೆ ತಿಳಿಯದು. ಸಾವಾಗಿದೆ ಎಂದು ತಿಳಿಸುತ್ತಾರೆ ಮುಖಸಹಿತ ನೋಡಲಾಗದು. ಬೆರಳೆಣಿಸುವ ಕೆಲ ಸಿಬ್ಬಂದಿ ಹೊರತುಪಡಿಸಿ ತಜ್ಞರು ವೈಯುಕ್ತಿಕವಾಗಿ ಸಿಗರು ವಿಷಯ ತಿಳಿಯಲು'

    Jaggesh requests to CM Yediyurappa for transparent system in Hospital

    Recommended Video

    ಮನುಷ್ಯರ ಮೇಲೆ ನಂಬಿಕೆ ಸತ್ತುಹೋಗಿದೆ ಅಂದ್ರು ನಟ ಜಗ್ಗೇಶ್ | Filmibeat Kannada

    'ಪ್ರತಿ ರೋಗಿಯ ಮನೆಯವರಿಗೆ ದೂರದಿಂದ ನೋಡಲು ಅವಕಾಶ (safety measures)ನಲ್ಲಿ ಅವಕಾಶ ನೀಡಬೇಕು.ಇಲ್ಲದಿದ್ದರೆ ಒಳಗೆ ನಡೆಯುವ ವಿಷಯ ಹೊರಗೆ ಅರಿವಾಗುತ್ತಿಲ್ಲಾ. ಯಾವುದು ಇಲ್ಲದೆ ಅಡ್ಮಿಟ್ ಮಾಡಿಕೊಂಡು ನಂತರ ಯಾವ ವಿಷಯ ಹೊರಗೆ ತಿಳಿಸದೆ ರೋಗಿಯ ಸಾವಿನ ಜೊತೆ ಮನೆಯವರು ಸಾಯುವಂತೆ tension. ದಯಮಾಡಿ ರೋಗಿ monitor ಡಾಕ್ಟರ್ ಹಾಗು ಬಂಧುಗಳಿಗೆ ತಿಳಿಯುವಂತೆ ಪಾರದರ್ಶಕ ವ್ಯೆವಸ್ಥೆ ಆಗಲಿ' ಎಂದು ಟ್ವೀಟ್ ಮಾಡಿ ಸಿಎಂ ಯಡಿಯೂರಪ್ಪ ಅವರಿಗೆ ಟ್ಯಾಗ್ ಮಾಡಿದ್ದಾರೆ.

    English summary
    Jaggesh requests to CM Yediyurappa for transparent system in Hospital.
    Tuesday, April 27, 2021, 11:14
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X