»   » ನಟ ಜಗ್ಗೇಶ್ ಪುತ್ರನಿಗೆ ಚಾಕುವಿನಿಂದ ಇರಿದ ದುಷ್ಕರ್ಮಿಗಳು

ನಟ ಜಗ್ಗೇಶ್ ಪುತ್ರನಿಗೆ ಚಾಕುವಿನಿಂದ ಇರಿದ ದುಷ್ಕರ್ಮಿಗಳು

Posted By:
Subscribe to Filmibeat Kannada

ನಟ ಜಗ್ಗೇಶ್ ಅವರ ಮೊದಲ ಪುತ್ರ ಗುರು ಜಗ್ಗೇಶ್ ಅವರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದು, ಚಾಕುವಿನಿಂದ ಇರಿದಿದ್ದಾರೆ. ಬೆಂಗಳೂರಿನ ಆರ್.ಟಿ. ನಗರದಲ್ಲಿ ಈ ಘಟನೆ ನಡೆದಿದ್ದು, ಬೆಳಿಗ್ಗೆ ಮಕ್ಕಳನ್ನ ಶಾಲೆಗೆ ಬಿಡಲು ಹೋಗುತ್ತಿದ್ದ ಸಂದರ್ಭದಲ್ಲಿ ಹಲ್ಲೆ ಆಗಿದೆ.

ಗುರು ಜಗ್ಗೇಶ್ ಅವರ ತೊಡೆ ಭಾಗಕ್ಕೆ ಚಾಕುವಿನಿಂದ ಇರಿಯಲಾಗಿದ್ದು, ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪ್ರಕರಣದ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

Jaggesh's son attacked by perpetrators

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಜಗ್ಗೇಶ್ ''ಬೆಳಿಗ್ಗೆ ಮಕ್ಕಳನ್ನ ಶಾಲೆಗೆ ಬೀಡಲು ಹೋಗಿದ್ದ. ಈ ವೇಳೆ ಟ್ರಾಫಿಕ್ ನಲ್ಲಿ ಸಣ್ಣ ವಿಷ್ಯಕ್ಕೆ ಮಾತಿನ ಜಗಳವಾಗಿದೆ. ಅಷ್ಟಕ್ಕೆ ಚಾಕುವಿನಿಂದ ಇರಿದಿದ್ದಾರೆ. ಅವರು ಯಾರು ಎಂಬುದು ಗೊತ್ತಿಲ್ಲ. ಬಹುಶಃ ರೌಡಿ ವ್ಯಕ್ತಿಗಳು ಇರಬಹುದು. ಸ್ವಲ್ಪ ಮಿಸ್ ಆಗಿದ್ದರೂ ಹೊಟ್ಟೆಯ ಭಾಗಕ್ಕೆ ಚಾಕು ಇರಿಯುತ್ತಿದ್ದರೂ. ಸದ್ಯ, ಚಿಕಿತ್ಸೆ ನೀಡುತ್ತಿದ್ದಾರೆ. ಆರಾಮಗಿದ್ದಾರೆ. ಎಂದು ತಿಳಿಸಿದ್ದಾರೆ.

English summary
Some strange people attacked on Kannada film actor Jaggesh's son in R T Nagar, Bengaluru, on August 14th.

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada

X