For Quick Alerts
  ALLOW NOTIFICATIONS  
  For Daily Alerts

  ನಟ ಜಗ್ಗೇಶ್ ಪುತ್ರನ ಕಾರು ಅಪಘಾತ: ಅಪಾಯದಿಂದ ಪಾರು

  |

  ಕನ್ನಡದ ಹಿರಿಯ ನಟ, ರಾಜಕಾರಣಿ ಜಗ್ಗೇಶ್ ಅವರ ಮಗ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೆ ಒಳಗಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

  ದೊಡ್ಡ ದುರಂತದಿಂದ ಬಚಾವಾದ ಜಗ್ಗೇಶ್ ಪುತ್ರ!! | Filmibeat Kannada

  ಬೆಂಗಳೂರು-ಹೈದರಾಬಾದ್‌ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಜಗ್ಗೇಶ್ ಪುತ್ರ ಯತಿರಾಜ್ ಗೆ ಸಣ್ಣಪುಟ್ಟ ಗಾಯಗಳಾಗಿದೆ. ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಆಗಿದ್ದು, ಯಾವುದೇ ಅಪಾಯವಿಲ್ಲ ಎಂದು ತಿಳಿದು ಬಂದಿದೆ.

  ಕಾರನ್ನು ಸ್ವತಃ ಯತಿರಾಜ್ ಡ್ರೈವ್ ಮಾಡುತ್ತಿದ್ದರು ಎಂಬ ಮಾಹಿತಿ ಸಿಕ್ಕಿದ್ದು, ಈ ಅಪಘಾತಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಸದ್ಯಕ್ಕೆ ಯತಿರಾಜ್ ಆರೋಗ್ಯ ಸ್ಥಿತಿ ಚೆನ್ನಾಗಿದೆ.

  ಅಪಘಾತ ನಡೆದ ಸ್ಥಳಕ್ಕೆ ಚಿಕ್ಕಬಳ್ಳಾಪುರ ಪೊಲೀಸರು ಆಗಮಿಸಿ ಪರಿಶೀಲನೆ ಮಾಡಿದ್ದಾರೆ. ಯತಿರಾಜ್ ಪ್ರಸ್ತುತ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿದ್ದಾರೆ ಎಂದು ಹೇಳಲಾಗಿದೆ. ಆದರೆ ಅಪಘಾತದ ರಭಸಕ್ಕೆ ಯತಿರಾಜ್ ಕಾರಿನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ.

  ಮಗನ ಕಾರು ಅಪಘಾತದ ಬಗ್ಗೆ ನಟ ಜಗ್ಗೇಶ್ ಟ್ವಿಟ್ಟರ್ ಮೂಲಕ ಮಾಹಿತಿ ನೀಡಿದ್ದಾರೆ. ''ಕೊರೊನಾ ಬಂದಾಗಿನಿಂದ ಹೊರ ಹೋಗಿಲ್ಲಾ ಹೋಗಿಬರುವೆ ಎಂದು ಅಮ್ಮನಿಗೆ ಹೇಳಿ ಹೊರ ಹೋದ ಮಗ ಯತಿರಾಜ, ಅವನು ಪ್ರತಿಬಾರಿ ಅವನ ಇಷ್ಟದ ರಸ್ತೆ ಬೆಂಗಳೂರಿನಿಂದ ಚಿಕ್ಕಬಳ್ಳಾಪುರ ಹೋಗಿ ಬರುವಾಗ ಅಡ್ಡ ಬಂದ ನಾಯಿ ರಕ್ಷಿಸಲು ಹೋಗಿ ರಸ್ತೆ ವಿಭಜಕ್ಕೆ ಹೊಡೆದು ಕಾರು ಪಕ್ಕದ ರಸ್ತೆಗೆ ಬಿದ್ದಿದೆ. ರಾಯರದಯೇ ಹಾಗು ನಿಮ್ಮ ಶುಭ ಹಾರೈಕೆ ಯತಿರಾಜನಿಗೆ ಸಣ್ಣ ಗಾಯವು ಇಲ್ಲ'' ಎಂದು ತಿಳಿಸಿದ್ದಾರೆ.

  English summary
  Jaggesh Son yathiraj escapes unhurt in car accident on Hyderabad-Bengaluru Highway.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X