ಕಿರೀಟಿ ರೆಡ್ಡಿಗೆ ಸಿಕ್ಕಳು ನಾಯಕಿ, ಅವಳೇ ಕಿಸ್ ಬೆಡಗಿ ಶ್ರೀಲೀಲಾ!
ಜನಾರ್ದನ ರೆಡ್ಡಿ ಪುತ್ರ ಕಿರೀಟಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಅದೀಗ ನಿಜವಾಗಿದೆ. ತೆಲುಗಿನ ಪ್ರಸಿದ್ಧ ನಿರ್ಮಾಣ ಸಂಸ್ಥೆ ವಾರಾಹಿ ಪ್ರೊಡಕ್ಷನ್ ಜನಾರ್ದನ ರೆಡ್ಡಿ ಪುತ್ರನನ್ನು ಚಿತ್ರರಂಗಕ್ಕೆ ಪರಿಚಯಿಸಲು ಮುಂದಾಗಿದೆ. ಇದು ವಾರಾಹಿ ನಿರ್ಮಾಣ ಸಂಸ್ಥೆ ನಿರ್ಮಿಸುತ್ತಿರುವ 15ನೇ ಸಿನಿಮಾ.
Recommended Video
ಈ ಸಿನಿಮಾ ಕನ್ನಡ ಹಾಡು ತೆಲುಗು ಎರಡೂ ಭಾಷೆಯಲ್ಲಿ ನಿರ್ಮಾಣಗೊಳ್ಳಲಿದೆ. ರಾಧಾಕೃಷ್ಣ ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ಇದೊಂದು ಲವ್ ಕಮ್ ಫ್ಯಾಮಿಲಿ ಕಥೆಯುಳ್ಳ ಸಿನಿಮಾ ಆಗಿದ್ದು, ತೆಲುಗಿನ ಸ್ಟಾರ್ ಸಂಗೀತ ನಿರ್ದೇಶಕ ದೇವಿಶ್ರೀ ಪ್ರಸಾದ್ ಸಂಗೀತ ನೀಡಲಿದ್ದಾರೆ.
ಈ ಚಿತ್ರಕ್ಕೆ ಟೈಟಲ್ ಇನ್ನೂ ಫಿಕ್ಸ್ ಆಗಿಲ್ಲ. ಆದರೆ ಅದಾಗಲೇ ಚಿತ್ರದ ನಾಯಕಿ ಯಾರು ಎನ್ನುವ ಸುದ್ದಿ ಹೊರ ಬಂದಿದೆ. ಕಿರೀಟಿ ರೆಡ್ಡಿಗೆ ನಾಯಕಿ ಆಗುವ ಆ ಬೆಡಗಿ ಯಾರು ಎನ್ನುವ ಸಾಕಷ್ಟು ಕುತೂಹಲಗಳು ಹುಟ್ಟಿಕೊಂಡಿದ್ದವು. ಅದಕ್ಕೀಗ ತೆರೆಬಿದ್ದಿದೆ. ಚಿತ್ರಕ್ಕೆ ನಾಯಕಿಯ ಆಯ್ಕೆ ಆಗಿದೆ. ಕನ್ನಡದ ನಟಿ ಶ್ರೀಲೀಲಾ ಕಿರೀಟಿ ಅವರಿಗೆ ನಾಯಕಿಯಾಗಿ ಆಯ್ಕೆ ಆಗಿದ್ದಾರೆ.

ಶ್ರೀಲೀಲಾ ಈಗಾಗಲೇ ಕನ್ನಡ ಮತ್ತು ತೆಲುಗು ಸಿನಿಮಾಗಳಲ್ಲಿ ಬ್ಯುಸಿ ಇದ್ದಾರೆ. ಕನ್ನಡದ ಬೈ ಟು ಲವ್ ಸಿನಿಮಾ ಇತ್ತೀಚೆಗೆ ರಿಲೀಸ್ ಆಯ್ತು. ತೆಲುಗಿನಲ್ಲಿ ರವಿತೇಜ ಜೊತೆಗೆ ಹೊಸ ಚಿತ್ರದಲ್ಲೂ ಕಾಣಿಸಿಕೊಳ್ಳುತ್ತಾ ಇದ್ದಾರೆ. ಇದರ ನಡುವೆ ಶ್ರಿಲೀಲಾ ಅವರು ಈ ಚಿತ್ರಕ್ಕೆ ಆಯ್ಕೆ ಆಗಿದ್ದಾರೆ ಎನ್ನುವ ಸುದ್ದಿ ಹೊರ ಬಂದಿದೆ.
ಕಿರೀಟಿ ಅಭಿನಯದ ಮೊದಲ ಸಿನಿಮಾದ ಟೈಟಲ್ ಅನ್ನು ಇನ್ನೂ ಚಿತ್ರತಂಡ ರಿವೀಲ್ ಮಾಡಿಲ್ಲ. ಬಿಗ್ ಬಜೆಟ್‌ನಲ್ಲಿ ಸಿನಿಮಾ ನಿರ್ಮಾಣ ಆಗುತ್ತಿರುವುದರಿಂದ ಕನ್ನಡ ಹಾಗೂ ತೆಲುಗು ಎರಡೂ ಭಾಷೆಗೆ ಸೂಟ್ ಆಗುವಂತಹ ಟೈಟಲ್ ಇಡಬಹುದು ಎಂದು ನಿರೀಕ್ಷಿಸಲಾಗಿದೆ. ಎರಡು ಭಾಷೆಯ ಸಿನಿಮಾ ಆಗಿರುವುದರಿಂದ ಕನ್ನಡ ಹಾಗೂ ತೆಲುಗಿನಲ್ಲಿ ಯಾವೆಲ್ಲಾ ಕಲಾವಿದರು ಅಭಿನಯಿಸುತ್ತಾರೆ ಎಂಬ ಕುತೂಹಲ ಶುರುವಾಗಿದೆ.
ವಾರಾಹಿ ಪ್ರೊಡಕ್ಷನ್ ನಿರ್ಮಾಣ ಮಾಡುತ್ತಿರುವ ಈ ಸಿನಿಮಾವನ್ನು ಅದ್ದೂರಿಯಾಗಿ ಮಾರ್ಚ್ 04 ರಂದು ಚಾಲನೆ ನೀಡಲಾಗುತ್ತಿದೆ. ಅಂದೇ ಈ ಸಿನಿಮಾದಲ್ಲಿ ಬೇರೆ ಯಾರೆಲ್ಲಾ ನಟಿಸಲಿದ್ದಾರೆ? ಎಲ್ಲೆಲ್ಲಿ ಶೂಟಿಂಗ್ ಮಾಡುತ್ತಾರೆ ಎಂಬ ವಿಷಯಗಳೆಲ್ಲವೂ ರಿವೀಲ್ ಆಗುವ ಸಾಧ್ಯತೆ ಇದೆ.


Click it and Unblock the Notifications











