1 ತಿಂಗಳಿಂದ ಪುನರ್ವಸತಿ ಕೇಂದ್ರದಲ್ಲಿದ್ದ ಜಯಶ್ರೀ, ಮಾನಸಿಕ ಖಿನ್ನತೆಯೇ ಸಾವಿಗೆ ಕಾರಣವಾಯ್ತಾ?
ಬಿಗ್ ಬಾಸ್ ಸ್ಪರ್ಧಿ, ನಟಿ ಕಮ್ ಮಾಡೆಲ್ ಜಯಶ್ರೀ ರಾಮಯ್ಯ ಕಳೆದ ರಾತ್ರಿ (ಜನವರಿ 24) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾಗಡಿ ರಸ್ತೆಯಲ್ಲಿರುವ ಸಂಧ್ಯಾಕಿರಣ ಪುನರ್ವಸತಿ ಕೇಂದ್ರದಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದದಾರೆ ಎಂದು ತಿಳಿದು ಬಂದಿದೆ.
Recommended Video
ಹಲವು ವರ್ಷಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಜಯಶ್ರೀಗೆ ಹಲವು ಕಡೆ ಚಿಕಿತ್ಸೆ ಸಹ ನೀಡಲಾಗಿತ್ತು. ಆದರೆ, ಅದರಿಂದ ಹೊರಬರಲು ಸಾಧ್ಯವಾಗಿರಲಿಲ್ಲ. ಮೇಲ್ನೋಟಕ್ಕೆ ಮಾನಸಿಕ ಖಿನ್ನತೆಯೇ ನಟಿಯ ಈ ಸಾವಿಗೆ ಕಾರಣ ಎಂದು ಹೇಳಲಾಗುತ್ತಿದೆ.
ಡಿಸೆಂಬರ್ 25 ರಂದು ಸಂಧ್ಯಾಕಿರಣ ಪುನರ್ವಸತಿ ಕೇಂದ್ರಕ್ಕೆ ಜಯಶ್ರೀ ಅವರನ್ನು ದಾಖಲಿಸಲಾಗಿತ್ತು. ಒಂದು ತಿಂಗಳಿಂದ ಈ ಕೇಂದ್ರದಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಜಯಶ್ರೀಗಾಗಿ ಪ್ರತ್ಯೇಕ ಕೊಠಡಿ ಸಹ ವ್ಯವಸ್ಥೆ ಮಾಡಲಾಗಿತ್ತು.

ಪುನರ್ವಸತಿ ಕೇಂದ್ರದಲ್ಲೂ ಸಹ ಜಯಶ್ರೀ ಅವರು ಒಬ್ಬಂಟಿಯಾಗಿರಲು ಹೆಚ್ಚು ಬಯಸುತ್ತಿದ್ದರು. ಕೊಠಡಿಯಲ್ಲಿ ಒಬ್ಬರೆ ಉಳಿದುಕೊಳ್ಳುತ್ತಿದ್ದರು. ನಿನ್ನೆ ರಾತ್ರಿಯಿಂದ ಯಾವ ಸಿಬ್ಬಂದಿ ಜೊತೆಗೆ ಸಂಪರ್ಕಕ್ಕೆ ಬಂದಿರಲಿಲ್ಲ. ಬೆಳಗ್ಗೆ ಕೊಠಡಿಯಿಂದಲೂ ಹೊರಗೆ ಬಂದಿರಲಿಲ್ಲ. ಹಾಗಾಗಿ, ಅನುಮಾನಗೊಂಡ ಸಿಬ್ಬಂದಿ ರೂಂಮಿನ ಬಾಗಿಲು ತೆಗೆದು ನೋಡಿದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.
ಸದ್ಯ, ಮಾರನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಗೆ ಜಯಶ್ರೀ ಅವರ ಪಾರ್ಥಿವ ಶರೀರವನ್ನು ರವಾನಿಸಲಾಗಿದೆ.
ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಬೆಂಗಳೂರಿನಲ್ಲಿ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ SAHAI ಸಹಾಯವಾಣಿ ಇಂತಿದೆ: 080 - 25497777


Click it and Unblock the Notifications











