ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್‌ ಕುಮಾರ್‌ ಶೀಘ್ರವೇ ಕಾಂಗ್ರೆಸ್‌ಗೆ

ನಟ, ರಾಜಕಾರಣಿ ಮಧು ಬಂಗಾರಪ್ಪ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಕೈಹಿಡಿದಿದ್ದಾರೆ. ಕೆಲವೇ ದಿನಗಳಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ ಆಗಲಿದ್ದಾರೆ. ಈ ನಡುವೆ ಸಹೋದರನ ಹಾದಿಯನ್ನೇ ಅಕ್ಕ ಗೀತಾ ಶಿವರಾಜ್ ಕುಮಾರ್ ಸಹ ಹಿಡಿಯಲಿದ್ದಾರೆ ಎನ್ನಲಾಗುತ್ತಿದೆ.

Recommended Video

ಜೆಡಿಎಸ್ ಬಿಟ್ಟು ಕೈ ಹಿಡಿಯಲಿದ್ದಾರೆ ಗೀತಾ ಶಿವರಾಜ್ ಕುಮಾರ್ | Filmibeat Kannada

ನಟ ಶಿವರಾಜ್ ಕುಮಾರ್ ಅವರ ಪತ್ನಿ, ಜೆಡಿಎಸ್ ಸದಸ್ಯೆ ಗೀತಾ ಶಿವರಾಜ್‌ ಕುಮಾರ್ ಅವರು ಸಹ ಕಾಂಗ್ರೆಸ್‌ಗೆ ಹೋಗಲಿದ್ದಾರೆ ಎನ್ನುವ ಸುದ್ದಿ ಬಲವಾಗಿ ಕೇಳಿ ಬರುತ್ತಿದೆ. ಸದಾಶಿವನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ಮಧು ಬಂಗಾರಪ್ಪ, 'ಅಕ್ಕ ಈಗಾಗಲೇ ಕಾಂಗ್ರೆಸ್‌ಗೆ ಬಂದಾಗಿದೆ ಎಂದೇ ತಿಳಿದುಕೊಳ್ಳಿ' ಎಂದು ಹೇಳಿದರು.

ಪಕ್ಕದಲ್ಲೇ ಇದ್ದ ಡಿ.ಕೆ.ಶಿವಕುಮಾರ್ ಮಾತನಾಡಿ, 'ನಾವು ಅವರೊಂದಿಗೆ ಅಧಿಕೃತವಾಗಿ ಮಾತನಾಡುತ್ತೇವೆ. ಅವರೊಬ್ಬ ಗೌರವಾನ್ವಿತ ಮಹಿಳೆ. ಪಕ್ಷ ಕಷ್ಟದಲ್ಲಿದ್ದಾಗ ಹೋರಾಟ ಮಾಡಿದ್ದಾರೆ. ಪಕ್ಷಕ್ಕಾಗಿ ದುಡಿದಿದ್ದಾರೆ. ಅವರ ಕುಟುಂಬಕ್ಕೆ ರಾಷ್ಟ್ರಮಟ್ಟದಲ್ಲಿ ಗೌರವ ಇದೆ. ನಾವು ಅವರನ್ನು ಗೌರವದಿಂದ ಕಾಣಬೇಕಾಗಿದೆ. ನಾವು ಸಹ ಕೆಲವು ಸಿದ್ಧತೆಗಳನ್ನು ಮಾಡಿಕೊಳ್ಳಬೇಕಾಗುತ್ತದೆ. ದೆಹಲಿ ಮಟ್ಟದಲ್ಲಿ ಅವರ ಬಗ್ಗೆ ಮಾತನಾಡಬೇಕಿದೆ. ಅವರಿಗೆ ಏನು ಗೌರವವನ್ನು ನಾವು ಕೊಡಬೇಕೋ ಅದನ್ನು ಕೊಡಲೇ ಬೇಕಾಗುತ್ತದೆ' ಎಂದಿದ್ದಾರೆ.

ಚುನಾವಣೆ ರಾಜಕೀಯದಲ್ಲಿ ಸಕ್ರಿಯರಾಗಿದ್ದರು

ಚುನಾವಣೆ ರಾಜಕೀಯದಲ್ಲಿ ಸಕ್ರಿಯರಾಗಿದ್ದರು

ಗೀತಾ ಶಿವರಾಜ್‌ ಕುಮಾರ್ ಅವರು ಈ ಹಿಂದೆ ಜೆಡಿಎಸ್ ಪಕ್ಷದಿಂದ ಲೋಕಸಭೆ ಚುನಾವಣೆ ಸ್ಪರ್ಧಿಸಿ ಸೋಲನುಭವಿಸಿದ್ದರು. ಶಿವರಾಜ್ ಕುಮಾರ್ ಅವರು ರಾಜಕೀಯದಿಂದ ದೂರವೇ ಉಳಿದಿದ್ದಾರಾದರೂ ಗೀತಾ ಅವರು ಚುನಾವಣಾ ರಾಜಕೀಯದಲ್ಲಿ ಸಕ್ರಿಯರಾಗಿಯೇ ಇದ್ದರು.

ಯಡಿಯೂರಪ್ಪ ವಿರುದ್ಧ ಸ್ಪರ್ಧಿಸಿದ್ದ ಗೀತಾ ಶಿವರಾಜ್‌ಕುಮಾರ್

ಯಡಿಯೂರಪ್ಪ ವಿರುದ್ಧ ಸ್ಪರ್ಧಿಸಿದ್ದ ಗೀತಾ ಶಿವರಾಜ್‌ಕುಮಾರ್

2014 ರ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗದಲ್ಲಿ ಯಡಿಯೂರಪ್ಪ ವಿರುದ್ಧ ಸ್ಪರ್ಧಿಸಿ ಸೋಲನುಭವಿಸಿದ್ದರು. 2019 ರ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಒಟ್ಟಿಗೆ ಸ್ಪರ್ಧಿಸಿದಾಗ ಮಧು ಬಂಗಾರಪ್ಪ ಅವರಿಗೆ ಟಿಕೆಟ್ ನೀಡಲಾಗಿ ಅವರು ಚುನಾವಣೆಯಲ್ಲಿ ಸೋತರು.

ಮಧು ಬಂಗಾರಪ್ಪ ಪರ ಗೀತಾ ಪ್ರಚಾರ

ಮಧು ಬಂಗಾರಪ್ಪ ಪರ ಗೀತಾ ಪ್ರಚಾರ

ಶಿವರಾಜ್ ಕುಮಾರ್ ಅವರು ರಾಜಕೀಯದಿಂದ ತುಸು ಅಂತರ ಕಾಯ್ದುಕೊಂಡಿದ್ದಾರೆ ಆದರೆ ಮಾಜಿ ಸಿಎಂ ಬಂಗಾರಪ್ಪ ಅವರ ಪುತ್ರಿಯಾದ ಗೀತಾ ಶಿವರಾಜ್ ಕುಮಾರ್ ಅವರು ಚುನಾವಣಾ ರಾಜಕೀಯದಲ್ಲಿ ಸಕ್ರಿಯರಾಗಿಯೇ ಇದ್ದರು. ಕಳೆದ ಬಾರಿ ಅವರಿಗೆ ಟಿಕೆಟ್ ಸಿಗದೇ ಇದ್ದರು ಸಹೋದರ ಮಧು ಬಂಗಾರಪ್ಪ ಪರವಾಗಿ ಪ್ರಚಾರದಲ್ಲಿ ಭಾಗವಹಿಸಿದ್ದರು.

ಮಧು ಬಂಗಾರಪ್ಪ-ಗೀತಾ ಒಟ್ಟಿಗೆ ಕಾಂಗ್ರೆಸ್ ಸೇರ್ಪಡೆ?

ಮಧು ಬಂಗಾರಪ್ಪ-ಗೀತಾ ಒಟ್ಟಿಗೆ ಕಾಂಗ್ರೆಸ್ ಸೇರ್ಪಡೆ?

ಮಧು ಬಂಗಾರಪ್ಪ ಅವರು ಜೆಡಿಎಸ್‌ ಪಕ್ಷದಿಂದ ಹೊರಬಂದಿದ್ದು ಶೀಘ್ರವಾಗಿಯೇ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ ಆಗಲಿದ್ದಾರೆ. ಮಧು ಬಂಗಾರಪ್ಪ ಅವರು ಕಾಂಗ್ರೆಸ್ ಸೇರ್ಪಡೆ ಆಗುವ ದಿನದಂದೇ ಗೀತಾ ಶಿವರಾಜ್ ಕುಮಾರ್ ಅವರೂ ಸಹ ಕಾಂಗ್ರೆಸ್ ಸೇರಲಿದ್ದಾರೆ ಎನ್ನಲಾಗುತ್ತಿದೆ.

More from Filmibeat

English summary
Shiva Rajkumar's wife Geetha Shiva Rajkumar may join congress soon. In 2014 Geetha Shiva Rrajkumar contested Lok Sabha election as JDS candidate.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X