KD update: ದೊಡ್ಡ ಆರ್ಕೇಸ್ಟ್ರಾ, ಆಡಿಯೋ ರೈಟ್ಸ್, ಟೀಸರ್, ಸಿನಿಮಾ ರಿಲೀಸ್ ಡೇಟ್
ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿಮಾನಿಗಳಿಗೆ ಬ್ಯಾಕ್ ಟು ಬ್ಯಾಕ್ ಬ್ರೇಕಿಂಗ್ ನ್ಯೂಸ್ ಸಿಕ್ಕಿದೆ. ಇತ್ತೀಚೆಗೆ 'ಮಾರ್ಟಿನ್' ಚಿತ್ರತಂಡ ಸುದ್ದಿಗೋಷ್ಠಿ ನಡೆಸಿ ಸಿನಿಮಾ ರಿಲೀಸ್ ಡೇಟ್ ಘೋಷಣೆ ಮಾಡಿತ್ತು. ಇದೀಗ 'KD' ಚಿತ್ರತಂಡದ ಸರದಿ. ಇಂಟ್ರೆಸ್ಟಿಂಗ್ ಅಪ್‌ಡೇಟ್ ಜೊತೆ ಪ್ರೇಮ್ ಮಾಧ್ಯಮಗಳ ಮುಂದೆ ಬಂದಿದ್ದಾರೆ.
ಕೆವಿಎನ್ ಪ್ರೊಡಕ್ಷನ್ಸ್ ಬ್ಯಾನರ್‌ನಲ್ಲಿ ಜೋಗಿ ಪ್ರೇಮ್ ಹಾಗೂ ಧ್ರುವ ಸರ್ಜಾ ಜೋಡಿಯ 'KD' ಸಿನಿಮಾ ಬಹಳ ನಿರೀಕ್ಷೆ ಹುಟ್ಟಾಕ್ಕಿದೆ. ಬಹಳ ಅದ್ಧೂರಿಯಾಗಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಿನಿಮಾ ತೆರೆಗೆ ಬರ್ತಿದೆ. ಈಗಾಗಲೇ ಟೀಸರ್ ಬಿಟ್ಟು ಪ್ರೇಮ್ ಹೈಪ್ ಕ್ರಿಯೇಟ್ ಮಾಡಿದ್ದರು. ಸದ್ಯ ಬಹುತೇಕ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಇದೀಗ ಸಿನಿಮಾ ಆಡಿಯೋ ಬಗ್ಗೆ ಕ್ರೇಜಿ ಅಪ್‌ಡೇಟ್ಸ್ ಸಿಕ್ಕಿದೆ.

ಜೋಗಿ ಪ್ರೇಮ್ ಸಿನಿಮಾ ಅಂದ್ಮೇಲೆ ಆಲ್ಬಮ್ ಬಗ್ಗೆ ಬಿಡಿಸಿ ಹೇಳುವುದು ಬೇಕಾಗಿಲ್ಲ. ತಮ್ಮ ಎಲ್ಲಾ ಸಿನಿಮಾಗಳ ಸಾಂಗ್ಸ್ ಹಿಟ್ ಮಾಡಿಬಿಡ್ತಾರೆ ಪ್ರೇಮ್. ಮತ್ತೊಮ್ಮೆ ಅರ್ಜುನ್ ಜನ್ಯಾ ಸಾಥ್ ಸಿಕ್ಕಿದೆ. ಮ್ಯೂಸಿಕ್ ಬಗ್ಗೆ ಒಳ್ಳೆ ಹಿಡಿತ ಇರುವ ಪ್ರೇಮ್ ಒಳ್ಳೆ ಒಳ್ಳೆ ಟ್ಯೂನ್ಸ್ ಹಾಕಿಸುತ್ತಾರೆ. 'KD' ಸಿನಿಮಾ ವಿಚಾರದಲ್ಲಿ ವಿದೇಶದಲ್ಲಿ ಆರ್ಕೇಸ್ಟ್ರಾ ನುಡಿಸಿ ಸಾಂಗ್ಸ್ ಕಂಪೋಸ್ ಮಾಡಿದ್ದಾರೆ. ಆಗಸ್ಟ್ 24ಕ್ಕೆ ಚಿತ್ರದ ಫಸ್ಟ್ ಸಾಂಗ್ ರಿಲೀಸ್ ಮಾಡುವುದಾಗಿ ಘೋಷಿಸಿದ್ದಾರೆ.
ನಿರ್ದೇಶಕ ಪ್ರೇಮ್, ನಟ ಧ್ರುವ ಸರ್ಜಾ ಹಾಗೂ ಸಂಗೀತ ನಿರ್ದೇಶಕ ಅರ್ಜುನ್ ಜನ್ಯಾ ಸುದ್ದಿಗೋಷ್ಠಿ ನಡೆಸಿ ಸಿನಿಮಾ ಬಗ್ಗೆ ಮಾಹಿತಿ ನೀಡಿದ್ದಾರೆ. 'KD' ರೆಟ್ರೋ ಸ್ಟೈಲ್ ಸಿನಿಮಾ. ಹಾಗಾಗಿ ಚಿತ್ರತಂಡ ಕೂಡ ಅದೇ ಲುಕ್‌ನಲ್ಲಿ ಸುದ್ದಿಗೋಷ್ಠಿಗೆ ಆಗಮಿಸಿತ್ತು. ಕನ್ನಡ ಚಿತ್ರರಂಗದಲ್ಲೇ ದಾಖಲೆ ಮೊತ್ತಕ್ಕೆ 'KD' ಆಡಿಯೋ ರೈಟ್ಸ್ ಮಾರಾಟವಾಗಿದೆ ಎಂದು ಚಿತ್ರತಂಡ ಹೇಳಿದೆ. ಆನಂದ್ ಆಡಿಯೋ ಸಂಸ್ಥೆ ರೈಟ್ಸ್ ಕೊಂಡುಕೊಂಡಿದೆ.
ಯೂಎಸ್‌ನಲ್ಲಿ 'KD' ಚಿತ್ರದ ಆರ್ಕೇಸ್ಟ್ರಾ ಕೆಲಸಗಳು ಮಾಡಲಾಗಿದೆ. ಆಗಸ್ಟ್ 16ಕ್ಕೆ ವರಲಕ್ಷ್ಮಿ ಹಬ್ಬದ ಸಡಗರದಲ್ಲಿ ಚಿತ್ರದ ಟೀಸರ್ ಬಿಡುಗಡೆ ಆಗಲಿದೆ. ಮುಂಬೈನಲ್ಲಿ ಈವೆಂಟ್ ನಡೆಸಿ ಅಲ್ಲಿ ಟೀಸರ್ ರಿಲೀಸ್ ಮಾಡುವ ಲೆಕ್ಕಾಚಾರದಲ್ಲಿದೆ ಚಿತ್ರತಂಡ. ಆಗಸ್ಟ್ 24ಕ್ಕೆ ಹೈದರಾಬಾದ್‌ನಲ್ಲಿ ಈವೆಂಟ್ ನಡೆಸಿ ಫಸ್ಟ್ ಸಾಂಗ್ ರಿಲೀಸ್ ಮಾಡುವುದಾಗಿ ಪ್ರೇಮ್ ಮಾಹಿತಿ ನೀಡಿದ್ದಾರೆ.
ಶಾರುಖ್ ನಟನೆಯ 'ಪಠಾನ್' ಚಿತ್ರಕ್ಕೆ 180 ಜನರನ್ನು ಬಳಸಿ, ಆರ್ಕೆಸ್ಟ್ರಾ ಮಾಡಿಸಲಾಗಿತ್ತು. ಆದರೆ 'KD' ಸಿನಿಮಾ ಅದನ್ನು ಮೀರಿಸಿದೆ. ಆ ಮೂಲಕ ಮೇಕಿಂಗ್ ಹಂತದಲ್ಲೇ ಸಿನಿಮಾ ಹೊಸ ದಾಖಲೆ ಬರೆದಿದೆ ಎಂದು ಮಾಹಿತಿ ನೀಡಿದ್ದಾರೆ. ಭಾರತೀಯ ಚಿತ್ರರಂಗದಲ್ಲಿ ಇದು ದಾಖಲೆ ಎಂದು ಹೇಳಿ ಆರ್ಕೆಸ್ಟ್ರಾ ರೆಕಾರ್ಡಿಂಗ್ ಝಲಕ್ ರಿವೀಲ್ ಮಾಡಲಾಗಿದೆ.

ನಟ ಧ್ರುವ ಸರ್ಜಾ ಮಾತನಾಡಿ "KD ಅಂದ್ರೆ ಕಾಳಿದಾಸ. ಈ ಸಿನಿಮಾದಲ್ಲಿ ಕಾಳಿದಾಸ ನಾನೇ. ನಿರ್ದೇಶಕ ಪ್ರೇಮ್ ಜೊತೆಗೆ ಸಿನಿಮಾ ಮಾಡಬೇಕು ಅಂತ ನಿರ್ಧಾರ ಮಾಡಿದ್ದೆ. ಅದು ಕೆವಿಎನ್ ಸಂಸ್ಥೆಯಿಂದ ಆರಂಭ ಆಯ್ತು. ಚಿತ್ರದ ಆಡಿಯೋ ಹಕ್ಕು ದೊಡ್ಡ ಮೊತ್ತಕ್ಕೆ ಮಾರಾಟ ಆಗಿದ್ದು ತುಂಬಾ ಖುಷಿ ಆಗಿದೆ. ನನ್ನ 'ಅದ್ಧೂರಿ' ಸಿನಿಮಾ 4 ಕೋಟಿ ರೂ. ಖರ್ಚಿನಲ್ಲಿ ನಿರ್ಮಾಣವಾಗಿತ್ತು. ಆದ್ರೆ ಈಗ 'KD' ಆಡಿಯೋ ಹಕ್ಕು ಮಾತ್ರ 17.70 ಕೋಟಿ ರೂ. ಸೇಲ್ ಆಗಿದೆ. ಸಿನಿಮಾ ಕೂಡ ತುಂಬಾ ರಿಚ್ ಆಗಿ ಮೂಡಿ ಬಂದಿದೆ" ಎಂದಿದ್ದಾರೆ.
ಡಿಸೆಂಬರ್‌ನಲ್ಲಿ 'KD' ಸಿನಿಮಾ ಬಿಡುಗಡೆ ಮಾಡಲು ಚಿತ್ರತಂಡ ತಯಾರಿ ನಡೆಸಿದೆ. ರೀಷ್ಮಾ ನಾಣಯ್ಯ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಇನ್ನುಳಿದಂತೆ ಸಂಜಯ್ ದತ್, ಶಿಲ್ಪಾ ಶೆಟ್ಟಿ, ಕ್ರೇಜಿಸ್ಟಾರ್ ರವಿಚಂದ್ರನ್, ರಮೇಶ್ ಅರವಿಂದ್ ಚಿತ್ರದ ತಾರಾಗಣದಲ್ಲಿದ್ದಾರೆ.


Click it and Unblock the Notifications











