Don't Miss!
- Sports
ಬಾರ್ಡರ್-ಗವಾಸ್ಕರ್ ಟ್ರೋಫಿ: ರೋಹಿತ್ ಬಳಗದ ಅಭ್ಯಾಸಕ್ಕೆ ಭಾನುವಾರ ರಜೆ ನೀಡಿದ ಕೋಚ್ ದ್ರಾವಿಡ್
- Lifestyle
Horoscope Today 6 Feb 2023: ಸೋಮವಾರ : ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
- News
ರಾಜ್ಯ ರಾಜಕೀಯದ ಮುಂದಿನ ರಹಸ್ಯವೊಂದನ್ನು ಬೇಧಿಸಿದ ಎಚ್ಡಿಕೆ
- Finance
ಆಧಾರ್ ಕಾರ್ಡ್ ಸಂಖ್ಯೆಯಿಂದ ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ಪರಿಶೀಲಿಸಿ, ಹೇಗೆ ಇಲ್ಲಿ ತಿಳಿಯಿರಿ
- Automobiles
ಹೆಚ್ಚಿನ ಮೈಲೇಜ್ ನೀಡುವ ಬಹುನಿರೀಕ್ಷಿತ ಟಾಟಾ ಆಲ್ಟ್ರೊಜ್ iCNG ಕಾರಿನ ವಿಶೇಷತೆಗಳು...
- Technology
ಇನ್ಮುಂದೆ ಟ್ವಿಟ್ಟರ್ನಲ್ಲೂ ಹಣ ಗಳಿಸಬಹುದು; ಮಸ್ಕ್ರ ಹೊಸ ನಿರ್ಧಾರ ಏನು!?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ವಿನಯ್ ರಾಜ್ ಕುಮಾರ್ ಹೊಸ ಸಿನಿಮಾಗೆ ನಾಯಕಿಯಾದ ಕಾಜಲ್
ಸ್ಯಾಂಡಲ್ ವುಡ್ ನಟ ವಿಜಯ್ ರಾಜ್ ಕುಮಾರ್ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಅನಂತು ವರ್ಸಸ್ ನುರ್ಸತ್ ಸಿನಿಮಾ ಬಳಿಕ ವಿನಯ್ ರಾಜ್ ಕುಮಾರ್ ಮತ್ತೆ ತೆರೆಮೇಲೆ ಬಂದಿಲ್ಲ. ಇದೀಗ ಹೊಸ ಸಿನಿಮಾ ಮೂಲಕ ಮತ್ತೆ ಸದ್ದು ಮಾಡುತ್ತಿದ್ದಾರೆ.
ವಿನಯ್ ರಾಜ್ ಕುಮಾರ್ ಹೊಸ ಸಿನಿಮಾಗೆ ಪೆಪೆ ಎಂದು ಹೆಸರಿಡಲಾಗಿದೆ. ಚಿತ್ರದಲ್ಲಿ ವಿನಯ್ ರಗಡ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಮೊದಲ ಬಾರಿಗೆ ಆಕ್ಷನ್ ಸಿನಿಮಾದಲ್ಲಿ ನಟಿಸುತ್ತಿದ್ದು, ಫಸ್ಟ್ ಲುಕ್‌ನಲ್ಲಿ ಲಾಂಗ್ ಹಿಡಿದು ರಕ್ತಸಿಕ್ತವಾಗಿ ಕಾಣಿಸಿಕೊಂಡಿದ್ದಾರೆ.
ವಿನಯ್
ರಾಜ್
ಕುಮಾರ್
ಚಿತ್ರಕ್ಕೆ
ನಾಯಕಿಯಾಗಿ
ಅದಿತಿ
ಪ್ರಭುದೇವ
ಮೊದಲ ಬಾರಿಗೆ ವಿನಯ್ ರಾಜ್ ಕುಮಾರ್ ಅವರನ್ನು ಈ ಅವತಾರದಲ್ಲಿ ನೋಡಿ ಅಭಿಮಾನಿಗಳು ಅಚ್ಚರಿ ಪಟ್ಟಿದ್ದಾರೆ. ವಿಶೇಷ ಎಂದರೆ ಈ ಸಿನಿಮಾಗೆ ಈಗ ನಾಯಕಿ ಫಿಕ್ಸ್ ಆಗಿದ್ದಾರೆ. ವಿನಯ್ ಗೆ ನಾಯಕಿಯಾಗಿ ಕಾಜಲ್ ಆಯ್ಕೆಯಾಗಿದ್ದಾರೆ. ಅಂದಹಾಗೆ ಕಾಜಲ್ ಅಂದಮಾತ್ರಕ್ಕೆ ತೆಲುಗು ನಟಿ ಕಾಜಲ್ ಅಂತ ಭಾವಿಸಬೇಡಿ. ಕನ್ನಡದ ನಟಿ ಕಾಜಲ್.
ಈಗಾಗಲೇ ತುಳು ಮತ್ತು ಮರಾಠಿ ಸಿನಿಮಾಗಳಲ್ಲಿ ಮಿಂಚಿರುವ ಕಾಜಲ್ ಮಾಯಾ ಕನ್ನಡಿ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದಾರೆ. ಸದ್ಯ ವಿನಯ್ ರಾಜ್ ಕುಮಾರ್ ನಟನೆಯ ಪೆಪೆ ಸಿನಿಮಾದ ಜೊತೆಗೆ ದಿಯಾ ಖ್ಯಾತಿಯ ದೀಕ್ಷಿತ್ ಶೆಟ್ಟಿ ನಟನೆಯ ಕೆಟಿಎಂ ಸಿನಿಮಾದಲ್ಲೂ ನಟಿಸುತ್ತಿದ್ದಾರೆ.
ಪೆಪೆ ಸಿನಿಮಾಗೆ ಉದಯ್ ಶಂಕರ್ ನಿರ್ದೇಶನ ಮಾಡುತ್ತಿದ್ದಾರೆ. ಸದ್ಯ ಫಸ್ಟ್ ಲುಕ್ ಮೂಲಕ ಸದ್ದು ಮಾಡುತ್ತಿರುವ ಸಿನಿಮಾತಂಡ ಟೀಸರ್ ಬಿಡುಗಡೆಗೆ ಕಾಯುತ್ತಿದ್ದಾರೆ. ಕಳೆದ ಎಲ್ಲಾ ಸಿನಿಮಾಗಳಿಂತ ವಿಭಿನ್ನವಾಗಿ ಕಾಣಿಸಿಕೊಂಡಿರುವ ವಿನಯ್ ರಾಜ್ ಕುಮಾರ್ ಪೆಪೆ ಹೇಗಿರಲಿದೆ ಎನ್ನುವುದು ಅಭಿಮಾನಿಗಳ ಕುತೂಹಲ.
Recommended Video
ವಿನಯ್ ರಾಜ್ ಕುಮಾರ್ ಸದ್ಯ '10' ಸಿನಿಮಾ ಬಿಡುಗಡೆಗೆ ಕಾಯುತ್ತಿದ್ದಾರೆ. ಜೊತೆಗೆ ಗ್ರಾಮಾಯಣ ಚಿತ್ರೀಕರಣ ಮುಗಿಸಿದ್ದಾರೆ. ಇನ್ನು ಅಂದೊಂದಿತ್ತು ಕಾಲಸಿನಿಮಾದ ಚಿತ್ರೀಕರಣದಲ್ಲೂ ನಿರತರಾಗಿದ್ದಾರೆ. ಸದ್ಯ ಕೈತುಂಬ ಸಿನಿಮಾಗಳನ್ನು ಇಟ್ಟುಕೊಂಡಿರುವ ವಿನಯ್ ಯಾವ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರ್ತಿದ್ದಾರೆ ಎಂದು ಕಾದುನೋಡಬೇಕು.