Darshan: 3 ವರ್ಷದ ಮುನಿಸು ಕೊನೆ: ರಾಕ್‌ಲೈನ್‌ ಸಂಧಾನ ಯಶಸ್ವಿ ಆಗಿದ್ಹೇಗೆ?

ವರಮಹಾಲಕ್ಷ್ಮಿ ಹಬ್ಬದ ಸಂಭ್ರಮದಲ್ಲಿ ನಟ ದರ್ಶನ್ ಮಾಧ್ಯಮಗಳಿಗೆ ಬಹಿರಂಗ ಪತ್ರ ಬರೆದಿದ್ದಾರೆ. ದರ್ಶನ್ ಮಾಧ್ಯಮಗಳ ಬಗ್ಗೆ ಅವಾಚ್ಯ ಶಬ್ದಗಳಿಂದ ಜರಿದಿದ್ದಾರೆ ಎನ್ನಲಾಗಿದ್ದ ಆಡಿಯೋ ಕೆಲ ದಿನಗಳ ಹಿಂದೆ ವೈರಲ್ ಆಗಿತ್ತು. ಆ ಆಡಿಯೋ ವೈರಲ್ ಆಗುತ್ತಿದ್ದಂತೆ ವಿದ್ಯುನ್ಮಾನ ಮಾಧ್ಯಮಗಳು ದರ್ಶನ್ ಅವರನ್ನು ಅಘೋಷಿತ ಬ್ಯಾನ್ ಮಾಡಿದ್ದವು. ದರ್ಶನ್ ಕುರಿತು ಸುದ್ದಿ ಪ್ರಸಾರ ಮಾಡುತ್ತಿರಲಿಲ್ಲ.

"ಸಮಸ್ತ ಕರ್ನಾಟಕ ಜನತೆಗೆ ನನ್ನ ಸೆಲೆಬ್ರಿಟಿಗಳಿಗೆ ಹಾಗೂ ಹಿರಿಯ ಪತ್ರಕರ್ತರಿಗೆ, ಮಾಧ್ಯಮ ಮಿತ್ರರಿಗೆ ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ ಶುಭಾಶಯಗಳು. ಕಳೆದ ಸುಮಾರು ಎರಡು ವರ್ಷಗಳಿಂದ ನನ್ನ ಹಾಗೂ ಕನ್ನಡ ಮಾಧ್ಯಮ ಮಿತ್ರರ ನಡುವೆ ಒಂದು ಕಂದಕ ಉಂಟಾಗಿತ್ತು. ಈ ವರಮಹಾಲಕ್ಷ್ಮಿ ಹಬ್ಬದ ಮುನ್ನಾದಿನ ಮಿತ್ರ ರಾಕ್ ಲೈನ್ ವೆಂಕಟಶ್‌ ನೇತೃತ್ವದಲ್ಲಿ ನನ್ನ ಹಾಗೂ ಕನ್ನಡದ ಪ್ರಮುಖ ಮಾಧ್ಯಮಗಳ ಸಂಪಾದಕರ ನಡುವೆ ಮಾತುಕತೆ ನಡೆದು ಇಡೀ ಪ್ರಕರಣ ಸುಖಾಂತ್ಯಗೊಂಡಿದೆ."

Kaatera Actor Darshan Open Letter To Kannada news channels

"ಕೆಲ ವರ್ಷಗಳ ಹಿಂದಿನ ನನ್ನ ಆಡಿಯೋ ಒಂದು ದುರುದೇಶಪೂರ್ವಕವಾಗಿ ವೈರಲ್ ಆಗಿ ಇಡೀ ವಿವಾದಕ್ಕೆ ಕಾರಣವಾಗಿತ್ತು. ಅದು ಯಾವುದೋ ವಿಷಮ ಘಳಿಗೆಯಲ್ಲಿ ಒಬ್ಬ ವ್ಯಕ್ತಿಯ ಮಾತಿಗೆ ಪ್ರತಿಕ್ರಿಯೆಯಾಗಿತ್ತು. ಅದು ಮಾಧ್ಯಮದ ಇತರ ವ್ಯಕ್ತಿಗಳನ್ನು ಕುರಿತು ಆಡಿದ ಮಾತಾಗಿರಲಿಲ್ಲ. ಆ ವ್ಯಕ್ತಿ ಯಾವ ದುರುದ್ದೇಶದಿಂದ ಮಾಡಿದರು ಗೊತ್ತಿಲ್ಲ, ಆದರೂ ಆ ವ್ಯಕ್ತಿಗೆ ಒಳ್ಳೆಯದಾಗಲಿ ಮುಂದೆ ಆ ವ್ಯಕ್ತಿ ಈ ರೀತಿಯ ದುರುದ್ದೇಶವನ್ನು ಮರುಕಳಿಸದಿರಲಿ"

"ಆದರೂ ಅಂತಹ ಮಾತಿನಿಂದ ನೋವುಂಟಾಗಿದ್ದರೆ ಮಾಧ್ಯಮದ ಹಿರಿಯರಿಗೆ ಕ್ಷಮೆ ಕೋರುವುದರಲ್ಲಿ ತಪ್ಪಿಲ್ಲ. ಈ ಅಯಾಟಿತ ಘಟನೆಗೆ ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಮಾಧ್ಯಮ ರಂಗದ ಕ್ಷಮೆ ಇರಲಿ. ಒಂದು ಉತ್ತಮವಾದ ಸಮಾಜಕ್ಕೆ ಒಳ್ಳೆಯ ಮಾಧ್ಯಮಗಳ ಅಗತ್ಯವಿದೆ. ನನಗೂ ಮಾಧ್ಯಮಗಳ ಬಗ್ಗೆ ಗೌರವವಿದೆ. ಚಿತ್ರರಂಗದ ನನ್ನ ಬೆಳವಣಿಗೆಯಲ್ಲಿ ಮಾಧ್ಯಮಗಳು ಪ್ರೀತಿಯಿಂದ ನೀಡಿದ ಪ್ರಚಾರದ ಪಾಲೂ ಸಾಕಷ್ಟಿದೆ. ಈ ಹಿಂದೆ ಆಗಿರುವ ಕಹಿ ಘಟನೆಯನ್ನು ಮರೆತು ನಾವೆಲ್ಲ ಮುಂದೆ ಸಾಗೋಣ"

"ಕನ್ನಡ, ಕನ್ನಡಿಗರು, ಕನ್ನಡ ನೆಲ, ಜಲ, ಕನ್ನಡ ಚಿತ್ರರಂಗದ ಪ್ರಗತಿಗೆ ಜೊತೆಯಾಗಿ ಕೆಲಸ ಮಾಡೋಣ. ಪ್ರೀತಿಯಿರಲಿ, ನನ್ನ ಪ್ರೀತಿಯ ಸೆಲೆಬ್ರಿಟಿಗಳು ನನ್ನ ಭಾವನೆಯನ್ನು ಗೌರವಿಸುತ್ತಾರೆ ಎಂದು ಭಾವಿಸುತ್ತೇವೆ.

- ಪ್ರೀತಿಯಿಂದ ದರ್ಶನ್ ತೂಗೂದೀಪ

ಈ ಹಿಂದೆ ಕೂಡ ದರ್ಶನ್ ಬರೆದಿದ್ದಾರೆ ಎನ್ನಲಾಗಿದ್ದ ಪತ್ರವೊಂದು ಸುದ್ದಿವಾಹಿನಿಗಳ ಕಚೇರಿ ತಲುಪಿತ್ತು. ಆದರೆ ಅದನ್ನು ಸ್ವತಃ ದರ್ಶನ್ ಬರೆದಿದ್ದರಾ? ಎನ್ನುವ ಬಗ್ಗೆ ಅಧಿಕೃತ ಮಾಹಿತಿ ಸಿಕ್ಕಿರಲಿಲ್ಲ. ಇದೀಗ ಸ್ವತಃ ದರ್ಶನ್ ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ಬಹಿರಂಗವಾಗಿ ಪತ್ರ ಬರೆದಿದ್ದಾರೆ.

More from Filmibeat

English summary
kaatera Actor Darshan wrote Open Letter To Kannada news channels. know more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X