ಕ್ಷಮೆ ಕೇಳುವ ಬದಲು ಕನ್ನಡಿಗರಿಗೆ ಸೆಡ್ಡು ಹೊಡೆಯಲು ಮುಂದಾದ ಕಮಲ್ ಹಾಸನ್, ಹೈಕೋರ್ಟ್‌ ಮೆಟ್ಟಿಲೇರಿದ ನಟ.!

ಕಮಲ್ ಹಾಸನ್ ಕನ್ನಡಿಗರನ್ನು ಕೆಣಕಿದ್ದಾರೆ. ಕೆರಳಿಸಿದ್ದಾರೆ. ಭಾಷಾ ಜ್ಞಾನದ ಕೊರತೆಯಿಂದ ಹ್ಯಾಟ್ರಿಕ್ ಹೀರೋ ಡಾ.ಶಿವರಾಜ್ ಕುಮಾರ್ ಅವರ ಸಮ್ಮುಖದಲ್ಲಿಯೇ ಕನ್ನಡದ ಜನ್ಮಕ್ಕೆ ತಮಿಳು ಭಾಷೆ ಕಾರಣವೆಂದಿದ್ದಾರೆ. ಕಮಲ್ ಅವರಾಡಿದ ಈ ಮಾತು ಇದೀಗ ಆಕ್ರೋಶದ ಜ್ವಾಲೆಯ ಸ್ವರೂಪ ಪಡೆದು ಧಗಧಗಿಸುತ್ತಿದೆ. ಕರುನಾಡಿನೆಲ್ಲೆಡೆ ಕಮಲ್ ಹಾಸನ್ ಅವರ ಚಿತ್ರಕ್ಕೆ ಬಿಡುಗಡೆಗೆ ಅವಕಾಶ ನೀಡಬಾರದು ಎನ್ನುವ ಅಭಿಪ್ರಾಯ ವ್ಯಕ್ತವಾಗುತ್ತಿದೆ.

ಇನ್ನು ಕಮಲ್ ಹಠಮಾರಿ. ಮಾಡಿದ ತಪ್ಪಿನ ಅರಿವಾದ ಮೇಲಾದರೂ ಕೂಡ ಕಮಲ್ ಹಾಸನ್ ಕ್ಷಮೆ ಕೇಳಬೇಕಿತ್ತು. ಆದರೆ, ಕಮಲ್ ಹಾಸನ್ ಕ್ಷಮೆ ಕೇಳಿಲ್ಲ. ಇದರಿಂದ ಕರುನಾಡಿನೆಲ್ಲೆಡೆ ಆಕ್ರೋಶ ಇನ್ನೂ ಹೆಚ್ಚಾಗಿದೆ. ಥಗ್ ಲೈಫ್ ಚಿತ್ರದ ಬಿಡುಗಡೆಯ ಮೇಲೆ ತೂಗು ಕತ್ತಿ ನೇತಾಡುತ್ತಿದೆ.

Kamal Haasan Seeks HC Nod for Thug Life Release Amid Kannada-Tamil Row

ಹೀಗಿರುವಾಗ ಇದೀಗ ಕಮಲ್ ಹಾಸನ್ ಕನ್ನಡಿಗರಿಗೆ ಸೆಡ್ಡು ಹೊಡೆಯಲು ಮುಂದಾಗಿದ್ದಾರೆ. ಕ್ಷಮೆ ಕೇಳಲು ಒಪ್ಪದೇ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಥಗ್ ಲೈಫ್ ಚಿತ್ರದ ಬಿಡುಗಡೆಗೆ ಕರ್ನಾಟಕದಲ್ಲಿ ಎದುರಾದ ಸಮಸ್ಯೆಗಳನ್ನು ಬಗೆಹರಿಸುವಂತೆ ಹೈಕೋರ್ಟ್‌ನಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಕ್ರಮ ಪ್ರಶ್ನಿಸಿ ತನ್ನ ನಿರ್ಮಾಣ ಸಂಸ್ಥೆಯಾದ 'ರಾಜ್ ಕಮಲ್ ಫಿಲ್ಮ್ ಇಂಟರ್‌ನ್ಯಾಷನಲ್' ಸಂಸ್ಥೆಯಿಂದ ಅರ್ಜಿ ಸಲ್ಲಿಸಿರುವ ಕಮಲ್ ಹಾಸನ್, ಚಿತ್ರಕ್ಕೂ ಮತ್ತು ಭಾಷೆಯ ಬಗ್ಗೆ ನೀಡಿದ ಹೇಳಿಕೆಗೂ ಸಂಬಂಧ ಇಲ್ಲ ಸಿಬಿಎಫ್‌ಸಿನಿಂದ ಚಿತ್ರಕ್ಕೆ ಪ್ರಮಾಣ ಪತ್ರವನ್ನು ನೀಡಲಾಗಿದೆ, ಚಿತ್ರದ ಬಿಡುಗಡೆಗೆ ಕರ್ನಾಟಕ ವಾಣಿಜ್ಯ ಮಂಡಳಿ ನಿರ್ಬಂಧ ಹೇರುತ್ತಿರುವುದು ಸರಿಯಲ್ಲ, ಚಿತ್ರದ ಬಿಡುಗಡೆಗೆ ಅವಕಾಶ ಕಲ್ಪಿಸಬೇಕೆಂದು ಅರ್ಜಿಯ ಮೂಲಕ ಕಮಲ್ ಹಾಸನ್ ಹೈಕೋರ್ಟ್‌ಗೆ ಮನವಿಯನ್ನು ಮಾಡಿಕೊಂಡಿದ್ದಾರೆ.

ಇದಲ್ಲದೇ ಕರ್ನಾಟಕದಲ್ಲಿ ತಮ್ಮ ಥಗ್ ಲೈಫ್ ಚಿತ್ರದ ಬಿಡುಗಡೆಗೆ ವಿರೋಧ ವ್ಯಕ್ತವಾಗುತ್ತಿದೆ ಹೀಗಾಗಿ ಚಿತ್ರ ಪ್ರದರ್ಶನವನ್ನು ತಡೆಯದಂತೆ ನ್ಯಾಯಾಲಯ ಸರ್ಕಾರ ಮತ್ತು ಪೊಲೀಸ್ ಇಲಾಖೆ ಹಾಗೂ ಚಲನಚಿತ್ರ ವಾಣಿಜ್ಯ ಮಂಡಳಿಗೆ ಸೂಚಿಸಬೇಕು ಎಂದು ಕಮಲ್ ಹಾಸನ್ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ಥಗ್‌ ಲೈಫ್ ಚಿತ್ರದ ಪ್ರದರ್ಶನಕ್ಕೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕರು ಮತ್ತು ನಗರ ಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡಬೇಕೆಂದು ಕೂಡ ಕಮಲ್ ಹಾಸನ್ ಹೈಕೋರ್ಟ್‌ಗೆ ಮನವಿಯನ್ನು ಮಾಡಿಕೊಂಡಿದ್ದಾರೆ.

More from Filmibeat

English summary
Actor Kamal Haasan has filed a petition in the High Court seeking the release of his upcoming film Thug Life, which is facing delays due to a controversy involving Kannada and Tamil language disputes.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X