ಕೊರೊನಾ ಸಂಕಷ್ಟದಲ್ಲಿ ಆಂಬುಲೆನ್ಸ್ ಚಾಲಕನಾದ ಕನ್ನಡದ ನಟ ಅರ್ಜುನ್ ಗೌಡ
ದೇಶದಲ್ಲಿ ಕೊರೊನಾ ಭೀಕರ ಸ್ಥಿತಿ ತಲುಪಿದೆ. ಸಾವಿರಾರು ಸಂಖ್ಯೆಯ ಜನರನ್ನು ಕೊರೊನಾ ಬಲಿ ಪಡೆಯುತ್ತಿದೆ. ಆಸ್ಪತ್ರೆ, ಬೆಡ್, ಆಕ್ಸಿಜನ್ ಸಿಗದೆ ಜನ ಪರದಾಡುತ್ತಿದ್ದಾರೆ. ಇಂಥ ಸಂಕಷ್ಟದ ಸಮಯದಲ್ಲಿ ಅನೇಕರು ಮುಂದೆ ಬಂದು ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ.
Recommended Video
ಅನೇಕ ಸಿನಿಮಾ ಸೆಲೆಬ್ರಿಟಿಗಳು ಸಹ ಕಷ್ಟದಲ್ಲಿರುವವರ ನೆರವಿಗೆ ಧಾವಿಸಿದ್ದಾರೆ. ಬಾಲಿವುಡ್ ನಲ್ಲಿ ಸಾಕಷ್ಟು ಮಂದಿ ಸೋಂಕಿತರಿಗೆ ಆಕ್ಸಿಜನ್, ಆಸ್ಪತ್ರೆ, ಬೆಡ್ ವ್ಯವಸ್ಥೆ ಮಾಡಿಕೊಡುತ್ತಿದ್ದಾರೆ. ಕನ್ನಡದ ನಟನೊಬ್ಬ ಇಂಥ ಸಂಕಷ್ಟದ ಸ್ಥಿತಿಯಲ್ಲಿ ಆಂಬುಲೆನ್ಸ್ ಚಾಲಕನಾಗಿ ಬದಲಾಗಿದ್ದಾರೆ.
ನಟ ಅರ್ಜುನ್ ಗೌಡ ಕೊರೊನಾ ಸೋಂಕಿತರಿಗೆ ಸಹಾಯ ಮಾಡಲು ಆಂಬುಲೆನ್ಸ್ ಚಾಲಕರಾಗಿ ಕೆಲಸ ಮಾಡುತ್ತಿದ್ದಾರೆ. ತೀವ್ರ ಸಂಕಷ್ಟದಲ್ಲಿರುವ ಜನರಿಗೆ ಅರ್ಜುನ್ ಗೌಡ ಸಹಾಯ ಮಾಡುತ್ತಿದ್ದಾರೆ. ಸೋಂಕಿತರನ್ನು ಆಸ್ಪತ್ರೆಗೆ ಕರೆದೊಯ್ಯಲು ಸಹಾಯ ಮಾಡುತ್ತಾರೆ ಮತ್ತು ಅಂತಿಮ ವಿಧಿವಿಧಾನಗಳನ್ನು ನೆರವೇರಿಸಲು ಮೃತದೇಹಗಳನ್ನು ಸಾಗಿಸಲು ಆಂಬುಲೆನ್ಸ್ ಸೇವೆಯನ್ನು ಮಾಡುತ್ತಿದ್ದಾರೆ.

ಈಗಾಗಲೇ ಸಾಕಷ್ಟು ಮಂದಿಗೆ ಅರ್ಜುನ್ ಸಹಾಯ ಮಾಡಿದ್ದಾರೆ. ಇಂಥ ಕೆಟ್ಟ ಪರಿಸ್ಥಿತಿಯಲ್ಲಿ ಮಾನವೀಯ ಕೆಲಸಕ್ಕೆ ಮುಂದಾಗಿರುವ ಅರ್ಜುನ್ ಇನ್ನು ಎರಡು ತಿಂಗಳು ಈ ಕೆಲಸವನ್ನು ಮುಂದುವರೆಸುವುದಾಗಿ ಹೇಳಿದ್ದಾರೆ. ಕೇವಲ ರೋಗಿಗಳನ್ನು ಕರೆದೊಯ್ಯುವುದು ಮತ್ತು ಮೃತದೇಹಗಳನ್ನು ಸಾಗಿಸುವುದು ಮಾತ್ರವಲ್ಲದೆ ಆಕ್ಸಿಜನ್ ವ್ಯವಸ್ಥೆಯನ್ನು ಮಾಡಿಸುತ್ತಿದ್ದಾರೆ.
ಅರ್ಜುನ್ ಗೌಡ ಕೆಲಸಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ನಟಿ ರಕ್ಷಿತಾ, ಪನ್ನಗಾಭರಣ ಸೇರಿದಂತೆ ಅನೇಕರು ಅರ್ಜುನ್ ಗೌಡಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಶಿವರಾಜ್ ಕುಮಾರ್ ನಟನೆಯ ರುಸ್ತುಂ, ಯುವರತ್ನ ಚಿತ್ರಗಳಲ್ಲಿ ವಿಲನ್ ಆಗಿ ನಟಿಸಿದ್ದಾರೆ.


Click it and Unblock the Notifications











