'ಒಂದು ಧರ್ಮದ ಅಸಹಿಷ್ಣುತೆ ಇತರ ಧರ್ಮಗಳನ್ನು ಪ್ರಚೋದಿಸುತ್ತದೆ': ಚೇತನ್
ಕಾವಲಭೈರಸಂದ್ರದಲ್ಲಿ ನಡೆದ ಗಲಭೆಗೆ ಸಂಬಂಧಪಟ್ಟಂತೆ ಕನ್ನಡ ನಟ ಚೇತನ್ ಪ್ರತಿಕ್ರಿಯೆ ನೀಡಿದ್ದು, ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ.
Recommended Video
'ಒಂದು ಧರ್ಮದ ಅಸಹಿಷ್ಣುತೆ ಇತರ ಧರ್ಮಗಳನ್ನು ಪ್ರಚೋದಿಸುತ್ತದೆ, ಕೋಮು ಸೌಹಾರ್ದತೆಯನ್ನು ಅಡ್ಡಿಪಡಿಸುತ್ತದೆ' ಎಂದು ಡಿಜೆ ಹಳ್ಳಿ ಮತ್ತು ಕೆಜೆ ಹಳ್ಳಿಯಲ್ಲಿ ನಡೆದ ಹಿಂಸಾಚಾರವನ್ನು ಖಂಡಿಸಿದ್ದಾರೆ.
ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಾಟೆ: ಪೊಲೀಸರ ಗುಂಡಿಗೆ ಮೂವರು ಬಲಿ
ಈ ಕುರಿತು ಟ್ವಿಟ್ಟರ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಚೇತನ್ ''ಅವಹೇಳನಕಾರಿ ಫೇಸ್‌ಬುಕ್ ಪೋಸ್ಟ್ ಕುರಿತು ಮುಸ್ಲಿಂ ಜನ ಸಮೂಹ ನಡೆಸಿದ ಹಿಂಸಾಚಾರವೂ ಸಮರ್ಥನೀಯವಲ್ಲ'' ಎಂದು ಅಭಿಪ್ರಾಯ ಪಟ್ಟಿದ್ದಾರೆ.

'ವಾಕ್ ಸ್ವಾತಂತ್ರ್ಯವನ್ನು ಗರಿಷ್ಠ ಮಟ್ಟಿಗೆ ಎತ್ತಿ ಹಿಡಿಯಬೇಕು ಮತ್ತು ಸರಿಯಾದ ಪ್ರಕ್ರಿಯೆಯ ಮೂಲಕ ವಿರೋಧಿಸಬೇಕು. ಎಲ್ಲಾ ಧರ್ಮಗಳು ಇಸ್ಲಾಂ ಸೇರಿದಂತೆ ವಿಮರ್ಶೆಗೆ ಮುಕ್ತವಾಗಿವೆ' ಎಂದು ಹೇಳಿದ್ದಾರೆ.
ಘಟನೆಯ ವಿವರ:
ಮಂಗಳವಾರ ರಾತ್ರಿ ಡಿಜೆಹಳ್ಳಿ ಪೊಲೀಸ್ ಠಾಣೆ ಮೇಲೆ ಸಾವಿರಾರು ಮಂದಿ ದಾಳಿ ನಡೆಸಿ, ಠಾಣೆಗೆ ಹಾಗೂ ವಾಹನಗಳಿಗೆ ಬೆಂಕಿ ಇಟ್ಟಿದ್ದಾರೆ. ಈ ಗಲಭೆಯನ್ನು ನಿಯಂತ್ರಿಸಲು ಪೊಲೀಸರು ಗುಂಡಿನ ದಾಳಿ ನಡೆಸಿದ್ದು, ಮೂವರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಿದೆ. ಹತ್ತಕ್ಕೂ ಹೆಚ್ಚು ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಗೂ, ಘಟನೆಗೆ ಸಂಬಂಧಿಸಿದಂತೆ 100ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.


Click it and Unblock the Notifications











