ನಟ ದರ್ಶನ್ ಹೊಸ ದಾಖಲೆ; ಅಭಿಮಾನಿಗಳ ಸಂಭ್ರಮಾಚರಣೆ
ನಟ ದರ್ಶನ್ ಇತ್ತೀಚೆಗೆ ಆಪ್ತರ ಜೊತೆ ಸಂಕ್ರಾಂತಿ ಹಬ್ಬ ಆಚರಿಸಿದ್ದರು. ತಮ್ಮ ಫಾರ್ಮ್‌ಹೌಸ್‌ನಲ್ಲಿ ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೀಶ್ ಹಾಗೂ ಸಹೋದರದಿನಕರ್ ಫ್ಯಾಮಿಲಿ ಜೊತೆ ಹಬ್ಬ ಮಾಡಿ ಕಿಚ್ಚು ಹಾಯಿಸಿ ಸಂಭ್ರಮಿಸಿದ್ದರು. ನಿನ್ನೆ ಚಿಕಿತ್ಸೆಗಾಗಿ ಮೈಸೂರಿನ ಮಣಿಪಾಲ್ ಆಸ್ಪತ್ರೆಗೆ ಹೋಗಿ ಬಂದಿದ್ದರು. ಬಳಿಕ ಆರತಿ ಉಕ್ಕಡ ಮಾರಮ್ಮ ಆಲಯಕ್ಕೂ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು.
ಬರೋಬ್ಬರಿ 7 ತಿಂಗಳ ಬಳಿಕ ನಟ ದರ್ಶನ್ ಸೋಶಿಯಲ್ ಮೀಡಿಯಾ ಅಕೌಂಟ್‌ಗಳು ಆಕ್ಟೀವ್ ಆಗಿದೆ. ಬಹಳ ದಿನಗಳ ಬಳಿಕ ಫೇಸ್‌ಬುಕ್ ಹಾಗೂ ಇನ್‌ಸ್ಟಾಗ್ರಾಮ್‌ನಲ್ಲಿ ಸಂಕ್ರಾಂತಿ ಶುಭಾಶಯ ಕೋರಿ ದರ್ಶನ್ ಪೋಸ್ಟ್ ಮಾಡಿದ್ದರು. "ನಿಮ್ಮ ಜೀವನದಲ್ಲಿ ಸಂತೋಷವೆಂಬ ಗಾಳಿಪಟಗಳು ಎತ್ತರಕ್ಕೆ ಹಾರಲಿ, ಸಮೃದ್ಧಿ ಮತ್ತು ಸಂತೋಷವನ್ನು ತರಲಿ. ಎಳ್ಳು ಬೆಲ್ಲ ಹಂಚಿ ಹೊಸ ಭರವಸೆಯೊಂದಿಗೆ ಮಕರ ಸಂಕ್ರಾಂತಿಯನ್ನು ಬರಮಾಡಿಕೊಳ್ಳೋಣ" ಎಂದು ಬರೆದುಕೊಂಡಿದ್ದರು.

ಬಹಳ ದಿನಗಳ ಬಳಿಕ ನೆಚ್ಚಿನ ನಟನ ಪೋಸ್ಟ್ ನೋಡಿ ಅಭಿಮಾನಿಗಳು ಖುಷಿಯಾಗಿದ್ದಾರೆ. ಲೈಕ್ಸ್, ಕಾಮೆಂಟ್ಸ್, ಶೇರ್ ಮಾಡಿ ವೈರಲ್ ಮಾಡಿದ್ದಾರೆ. ಸದ್ಯ ಎರಡು ದಿನಗಳಿಂದ ದರ್ಶನ್ ಪೋಸ್ಟ್ ಟ್ರೆಂಡಿಂಗ್‌ನಲ್ಲಿದೆ. ತಮ್ಮ ಇಷ್ಟದ ಕುದುರೆ ಜೊತೆ ದರ್ಶನ್ ಫೋಟೊ ಕ್ಲಿಕ್ಕಿಸಿ ಹಂಚಿಕೊಂಡಿರುವುದನ್ನು ನೋಡಬಹುದು. ಬಾಸ್ ಈಸ್ ಬ್ಯಾಕ್ ಎಂದು ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ.
ದರ್ಶನ್ ಹಂಚಿಕೊಂಡಿದ್ದ ಸಂಕ್ರಾಂತಿ ಪೋಸ್ಟ್ 24 ಗಂಟೆಗಳಲ್ಲಿ 34 ಸಾವಿರದ 700 ಕಾಮೆಂಟ್ಸ್ ಪಡೆದುಕೊಂಡಿದೆ. 70 ಸಾವಿರಕ್ಕೂ ಅಧಿಕ ಲೈಕ್ಸ್, 60 ಸಾವಿರ ಶೇರ್ ಸಿಕ್ಕಿದೆ. ಇದು ಕನ್ನಡ ನಟನೊಬ್ಬನ ಇನ್‌ಸ್ಟಾಗ್ರಾಮ್ ಪೋಸ್ಟ್‌ಗೆ 24 ಗಂಟೆಗಳಲ್ಲಿ ಸಿಕ್ಕ ಅತಿ ಹೆಚ್ಚು ಲೈಕ್ಸ್, ಕಾಮೆಂಟ್ಸ್, ಶೇರ್ಸ್ ಎಂದು ದರ್ಶನ್ ಅಭಿಮಾನಿಗಳು ಟ್ರೆಂಡ್ ಮಾಡುತ್ತಿದ್ದಾರೆ.
ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ದರ್ಶನ್ 131 ದಿನಗಳ ಕಾಲ ಜೈಲಿನಲ್ಲಿ ವಿಚಾರಣಾಧೀನ ಖೈದಿಯಾಗಿ ಇರುವಂತಾಗಿತ್ತು. ಜೂನ್ 11 ರಂದು ಬಂಧನವಾಗಿದ್ದ ದರ್ಶನ್ ಅಕ್ಟೋಬರ್ 30ರಂದು ಬಿಡುಗಡೆ ಆಗಿದ್ದರು. 'ಡೆವಿಲ್' ಸಿನಿಮಾ ಚಿತ್ರೀಕರಣದ ನಡುವೆಯೇ ದರ್ಶನ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.
ಮೊದಲಿಗೆ ಚಿಕಿತ್ಸೆ ನಿಮಿತ್ತ 6 ವಾರಗಳ ಕಾಲ ದರ್ಶನ್ ಮಧ್ಯಂತರ ಜಾಮೀನು ಪಡೆದು ಹೊರ ಬಂದಿದ್ದರು. ಬಳಿಕ ಜಾಮೀನು ಸಿಕ್ಕಿತ್ತು. ಮೈಸೂರಿನಲ್ಲಿ ಉಳಿದುಕೊಳ್ಳಲು ಅಲ್ಲೇ ಚಿಕಿತ್ಸೆ ಪಡೆಯಲು ದರ್ಶನ್ ನ್ಯಾಯಾಲಯದಿಂದ ಅನುಮತಿ ಪಡೆದಿದ್ದಾರೆ. ಎರಡು ದಿನಗಳ ಹಿಂದೆ ಬೆಂಗಳೂರಿನಿಂದ ಮೈಸೂರಿಗೆ ತೆರಳಿದ್ದರು. ತಮ್ಮ ಫಾರ್ಮ್‌ಹೌಸ್‌ನಲ್ಲಿ ಸಂಕ್ರಾಂತಿ ಹಬ್ಬ ಆಚರಿಸಿದ್ದರು. ಅದಕ್ಕೂ ಮುನ್ನ ಚಾಮುಂಡಿ ಬೆಟ್ಟಕ್ಕೆ ತೆರಳಿ ಪೂಜೆ ಸಲ್ಲಿಸಿದ್ದರು.
ನಟ ದರ್ಶನ್ ಮೂರ್ನಾಲ್ಕು ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ಇನ್ನು ಕೆಲ ಸಿನಿಮಾಗಳಿಗೆ ಅಡ್ವಾನ್ಸ್ ಪಡೆದಿದ್ದಾರೆ. ಮಿಲನಾ ಪ್ರಕಾಶ್ ನಿರ್ದೇಶನದ 'ಡೆವಿಲ್' ಚಿತ್ರದಲ್ಲಿ ಕೂಡಲೇ ನಟಿಸಬೇಕಿದೆ. ಇನ್ನೆರಡು ತಿಂಗಳಲ್ಲಿ ಚಿತ್ರೀಕರಣದಲ್ಲಿ ಭಾಗಿ ಆಗುತ್ತಾರೆ ಎನ್ನಲಾಗ್ತಿದೆ. ಬೆನ್ನು ನೋವಿನ ಸಮಸ್ಯೆಯಿಂದ ದರ್ಶನ್ ಬಳಲುತ್ತಿದ್ದಾರೆ. ನಡೆದಾಡಲು ಕಷ್ಟಪಡುವಂತಾಗಿದೆ. ಶೀಘ್ರದಲ್ಲೇ ಶಸ್ತ್ರ ಚಿಕಿತ್ಸೆ ನಡೆಸುವ ಸಾಧ್ಯತೆಯಿದೆ.
ನೆಚ್ಚಿನ ನಟನನ್ನು ಮತ್ತೆ ತೆರೆಮೇಲೆ ನೋಡಲು ಅಭಿಮಾನಿಗಳು ಕಾಯುತ್ತಿದ್ದಾರೆ. ದರ್ಶನ್ ಸಂಕ್ರಾಂತಿ ಸಂಭ್ರಮ ಅಭಿಮಾನಿಗಳಿಗೂ ಖುಷಿ ತಂದಿದೆ. ಪ್ರತಿವರ್ಷ ದರ್ಶನ್ ಫಾರ್ಮ್‌ಹೌಸ್‌ನಲ್ಲಿ ಸುಗ್ಗಿ ಹಬ್ಬವನ್ನು ಜೋರಾಗಿ ಆಚರಿಸುತ್ತಾರೆ. ಈ ಬಾರಿ ಕುಟುಂಬ ಸದಸ್ಯರ ಸಾಥ್ ಸಿಕ್ಕಿದೆ. ಸಾಕಷ್ಟು ಪ್ರಾಣಿ ಪಕ್ಷಿಗಳನ್ನು ನಟ ದರ್ಶನ್ ತಮ್ಮ ಫಾರ್ಮ್‌ಹೌಸ್‌ನಲ್ಲಿ ಸಾಕುತ್ತಿದ್ದಾರೆ. ಹಬ್ಬದ ವೇಳೆ ಹಸು, ಎತ್ತು, ಕುದುರೆಗಳನ್ನು ಕಿಚ್ಚು ಹಾಯಿಸಲಾಗಿದೆ.


Click it and Unblock the Notifications











