ಆಗಸ್ಟ್ 14ರವರೆಗೆ ಅಭಿಮಾನಿಗಳಿಗಿಲ್ಲ ''ದರ್ಶನ'', ಜೈಲುವಾಸ ಮುಂದುವರಿಯಲು ಕಾರಣವೇನು..?

By ಫಿಲ್ಮಿಬೀಟ್ ಡೆಸ್ಕ್

ಈ ಹನ್ನೊಂದನೇ ತಾರೀಖಿಗೆ ದರ್ಶನ್ ಪರಪ್ಪನ ಅಗ್ರಹಾರದ ಪಾಲಾಗಿ ಎರಡು ತಿಂಗ್ಳಾಗಲಿವೆ. ಇಲ್ಲಿಯವರೆಗೆ ದರ್ಶನ್ ಅವರನ್ನು ಹೊರತರುವ ಪ್ರಯತ್ನಗಳು ನಡೆದಿವೆ. ಆದರೆ.. ಫಲಪ್ರದವಾಗಿಲ್ಲ. ಹೀಗಾಗಿಯೇ ಚಿಂತಾಕ್ರಾಂತವಾಗಿರುವ ದರ್ಶನ್ ಅವರ ಅಸಂಖ್ಯಾತ.. ಅಗಣಿತ ಅಭಿಮಾನಿಗಳಿಗೆ ಇವತ್ತಾದರೂ ಸಿಹಿ ಸುದ್ದಿ ಸಿಗುತ್ತೆ ಎನ್ನುವ ನಿರೀಕ್ಷೆ ಇತ್ತು. ಆದರೆ.. ಇವತ್ತು ಕೂಡ ನಿರೀಕ್ಷೆ ಹುಸಿಯಾಗಿದೆ. ದರ್ಶನ್ ಮತ್ತು ಅವರ ಸಹಚರರ ನ್ಯಾಯಾಂಗ ಬಂಧನದ ಅವಧಿ ಇನ್ನೂ ಹದಿನಾಲ್ಕು ದಿನಗಳ ಕಾಲ ವಿಸ್ತರಣೆಯಾಗಿದೆ.

ಹೌದು, ನ್ಯಾಯಾಂಗ ಬಂಧನದ ಅವಧಿ ಇಂದು ಅಂತ್ಯವಾದ ಹಿನ್ನೆಲೆ, ಇಂದು ದರ್ಶನ್.. ಪವಿತ್ರಾ ಗೌಡ ಮತ್ತು ಉಳಿದ ಆರೋಪಿಗಳನ್ನು ವಿಡಿಯೋ ಕಾನ್ಪರೆನ್ಸ್ ಮೂಲಕ ಬೆಂಗಳೂರಿನ
ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಯಿತು. ಆ ಪೈಕಿ 13 ಜನ ಪರಪ್ಪನ ಅಗ್ರಹಾರದಿಂದ, 04 ಜನ ತುಮಕೂರಿನ ಜೈಲಿಂದ ಈ ವಿಡಿಯೋ ಕಾನ್ಫರೆನ್ಸ್ ನಲ್ಲಿ ಹಾಜರಾಗಿದ್ದರು. ಮೊದಲಿಗೆ ಆರೋಪಿಗಳ ಹೆಸರು ಹೇಳಿ ಹಾಜರಾತಿ ಪಡೆದ ನ್ಯಾಯಾಧೀಶರಾದ 24 ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರಾದ ವಿಶ್ವನಾಥ್ ಸಿ. ಗೌಡರ್, ಆ ನಂತರ ಆಗಸ್ಟ್ 14ರವರೆಗೆ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿ ಆದೇಶವನ್ನು ನೀಡಿದರು.

kannada-actor-darshan-and-his-gang-s-judicial-custody-has-been-extended-next-hearing-august-14

ಇನ್ನೂ.. ತೀರ್ಪು ನೀಡುವ ಮುನ್ನ, ಮೃತ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ತನಿಖೆ ನಡೆಸುತ್ತಿರುವ ಪೊಲೀಸರು, ದರ್ಶನ್ ಮತ್ತು ಅವರ ಸಹಚರರ ವಿರುದ್ಧ ಮತ್ತೊಂದು ಜೆಸಿ ರಿಮ್ಯಾಂಡ್ ಅರ್ಜಿ ಸಲ್ಲಿಸಿದರು.

ಅರ್ಜಿಯಲ್ಲಿ ಆರೋಪಿಗಳ ಪರ ಕೆಲವು ವ್ಯಕ್ತಿಗಳು ಮೃತನ ಕುಟುಂಬದವರನ್ನು ಭೇಟಿ ಮಾಡಿದ್ದಾರೆ. ಇದು ತನಿಖೆಯಲ್ಲಿ ತಿಳಿದು ಬಂದಿರುತ್ತದೆ ಎಂದು ಉಲ್ಲೇಖಿಸಿರುವ ಪೊಲೀಸರು, ಕೊಲೆ ಪ್ರಕರಣದ ಆರೋಪಿಗಳು ಪ್ರಭಾವಿಗಳು. ಹಣಬಲ ಮತ್ತು ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಆರೋಪಿ ಪರ ಕೆಲವರು ಮೃತ ರೇಣುಕಾಸ್ವಾಮಿ ಕುಟುಂಬಕ್ಕೆ ಬೆದರಿಕೆ, ಹಣದ ಆಮಿಷ ನೀಡುವ ಸಾಧ್ಯತೆ ಇದೆ. ಅಲ್ಲದೇ ತಮ್ಮ ಅಭಿಮಾನಿ ಬಳಗದ ಮೂಲಕ ಸಾಕ್ಷಿದಾರರಿಗೆ ಸಾಕ್ಷಿ ನುಡಿಯದಂತೆ ಬೆದರಿಕೆ ಹಾಕುವ, ಮೃತನ ಕುಟುಂಬದವರಿಗೆ ಹೆದರಿಸುವ ಮತ್ತು ಆಮಿಷ ತೋರಿಸಿ ಸಾಕ್ಷಿ ಹೇಳದಂತೆ ಮಾಡುವ ಸಂಭವವೂ ಇದೆ. ಹೀಗಾಗಿ ಆರೋಪಿಗಳಿಗೆ ಜಾಮೀನು ನೀಡಿದ್ದಲ್ಲಿ ಸಾಕ್ಷಿ‌ನಾಶ ಮಾಡುವ ಸಾಧ್ಯತೆಯೂ ಇದೆ ಎಂದು ಕೂಡ ಉಲ್ಲೇಖಿಸಿದ್ದಾರೆ ಎನ್ನುವುದು ಸದ್ಯದ ಮಾಹಿತಿ.

kannada-actor-darshan-and-his-gang-s-judicial-custody-has-been-extended-next-hearing-august-14

ಅಂದ್ಹಾಗೇ ದರ್ಶನ್ ಬಂಧನವಾಗಿ 50 ದಿನಗಳಾಗಿವೆ. ಆದರೆ.. ಇಲ್ಲಿಯವರೆಗೆ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್‌ ಶೀಟ್ ಸಲ್ಲಿಸಿಲ್ಲ. ಪೊಲೀಸರಿಂದ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಆಗಲಿ ಎಂದು ದರ್ಶನ್ ಪರ ವಕೀಲರು ಕಾಯುತ್ತಿದ್ದಾರೆ. ಚಾರ್ಜ್ ಶೀಟ್ ನಂತರ ಜಾಮೀನು ಅರ್ಜಿ ಸಲ್ಲಿಸಲಿದ್ದಾರೆ. ಇನ್ನೂ.. ಕೊಲೆ ಪ್ರಕರಣ ಸಂಬಂಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಲು ಪೊಲೀಸರಿಗೆ 90 ದಿನಗಳ ಕಾಲಾವಕಾಶ ಇರುತ್ತೆ. ಒಂದು ವೇಳೆ ದರ್ಶನ್ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದಲ್ಲಿ, ಚಾರ್ಜ್ ಶೀಟ್​ ಸಲ್ಲಿಕೆಗೂ ಮುನ್ನ ಕೊಲೆ ಕೇಸ್​ನಲ್ಲಿ ಬೇಲ್ ಸಿಗೋದಿಲ್ಲ. ಹೀಗಾಗಿ ಚಾರ್ಜ್ ಶೀಟ್ ಸಲ್ಲಿಕೆ ಆಗುವವರೆಗೂ ದರ್ಶನ್ & ಗ್ಯಾಂಗ್​ಗೆ ನ್ಯಾಯಾಂಗ ಬಂಧನವೇ ಗಟ್ಟಿ.

More from Filmibeat

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X