Don't Miss!
- Lifestyle
ಫೆಬ್ರವರಿಯಲ್ಲಿದೆ ಈ 3 ಗ್ರಹಗಳ ಸಂಚಾರ: ಈ 4 ರಾಶಿಯವರಿಗೆ ಮಂಗಳಕರ
- Sports
IND vs NZ 2nd T20: ಭಾರತಕ್ಕೆ ಸಾಧಾರಣ ಗುರಿ ನೀಡಿದ ನ್ಯೂಜಿಲೆಂಡ್
- News
Breaking: ಸಹಾಯಕ ಸಬ್ ಇನ್ಸ್ಪೆಕ್ಟರ್ ಗುಂಡಿನ ದಾಳಿ: ಆಸ್ಪತ್ರೆಯಲ್ಲಿ ಓಡಿಶಾ ಆರೋಗ್ಯ ಸಚಿವ ಸಾವು
- Finance
ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಮುಂದೂಡಿದ ಬ್ಯಾಂಕ್ ಯೂನಿಯನ್ಸ್: ಜ.31ಕ್ಕೆ ಮಹತ್ವದ ಸಭೆ
- Technology
ಬಜೆಟ್ ಬೆಲೆಯಲ್ಲಿ ಈ ಸ್ಮಾರ್ಟ್ಫೋನ್ಗಳು ಬೆಸ್ಟ್ ಎನಿಸಿಲಿವೆ! ಜಬರ್ದಸ್ತ್ ಫೀಚರ್ಸ್!
- Automobiles
ಬೆಲೆ ಏರಿಕೆ ಪಡೆದುಕೊಂಡ ಪರ್ಫಾಮೆನ್ಸ್ ಕಾರು ಪ್ರಿಯರ ಮೆಚ್ಚಿನ ಹ್ಯುಂಡೈ ಐ20 ಎನ್ ಲೈನ್
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಖ್ಯಾತ ನಟ ಜಗಪತಿ ಬಾಬು ಹುಟ್ಟುಹಬ್ಬಕ್ಕೆ ಶುಭ ಕೋರಿ 'ರಾಬರ್ಟ್' ಲುಕ್ ಹಂಚಿಕೊಂಡ ನಟ ದರ್ಶನ್
ದಕ್ಷಿಣ ಭಾರತದ ಖ್ಯಾತ ನಟ ಜಗಪತಿ ಬಾಬು ಅವರಿಗೆ ಇಂದು (ಫೆಬ್ರವರಿ 12) ಹುಟ್ಟುಹಬ್ಬದ ಸಂಭ್ರಮ. ಖಳ ನಟನಾಗಿ ದಕ್ಷಿಣ ಭಾರತೀಯ ಸಿನಿ ಪ್ರೇಕ್ಷಕರನ್ನು ಕಾಡುವ ಭಯನಾಕ ನಟನಿಗೆ ಅಭಿಮಾನಿಗಳು ಮತ್ತು ಚಿತ್ರರಂಗದ ಗಣ್ಯರು ಸಾಮಾಜಿಕ ಜಾಲತಾಣದ ಮೂಲಕ ಹುಟ್ಟುಹಬ್ಬದ ಶುಭಾಶಯ ಕೋರುತ್ತಿದ್ದಾರೆ.
Recommended Video
ತಮಿಳು, ತೆಲುಗು, ಮಲಯಾಳಂ ಮತ್ತು ಕನ್ನಡ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಜಗಪತಿ ಬಾಬು ಕೈಯಲ್ಲಿ ಸದ್ಯ ಸಾಲು ಸಾಲು ಸಿನಿಮಾಗಳಿವೆ. ಕನ್ನಡದಲ್ಲಿ ಸದ್ಯ ಜಗಪತಿ ಬಾಬು ಬಹುನಿರೀಕ್ಷೆಯ ರಾಬರ್ಟ್ ಸಿನಿಮಾ ರಿಲೀಸ್ ಗೆ ಎದುರು ನೋಡುತ್ತಿದ್ದಾರೆ. ಬಚ್ಚನ್ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಕಾಲಿಟ್ಟ ಜಗಪತಿ ಬಾಬು ಬಳಿಕ ಜಾಗ್ವರ್ ಸಿನಿಮಾದಲ್ಲೂ ನಟಿಸಿದ್ದಾರೆ. ಕನ್ನಡಿಗರನ್ನು ರಂಜಿಸಿ ಕನ್ನಡ ಪ್ರೇಕ್ಷಕರ ಹೃದಯ ಗೆದ್ದಿರುವ ಜಗಪತಿ ಬಾಬುಗೆ ಕನ್ನಡಿಗರು ಸಹ ಪ್ರೀತಯ ಶುಭಾಶಯ ತಿಳಿಸುತ್ತಿದ್ದಾರೆ. ಇಂದು ಅವರ ಹುಟ್ಟುಹಬ್ಬದ ವಿಶೇಷವಾಗಿ ರಾಬರ್ಟ್ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಮಾಡಲಾಗಿದೆ.
ದರ್ಶನ್
ಹುಟ್ಟುಹಬ್ಬಕ್ಕೆ
ರಾಬರ್ಟ್
ಟ್ರೈಲರ್,
ಇನ್ನೊಂದು
ಪ್ರಕಟಣೆ
ಏನು?

ಜಗಪತಿ ಬಾಬು ಅವರಿಗೆ ದರ್ಶನ್ ವಿಶ್
ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ ಅಬ್ಬರಿಸಿರುವ ಜಗಪತಿ ಬಾಬು ಅವರನ್ನು ತೆರೆ ಮೇಲೆ ನೋಡಲು ಅಭಿಮಾನಿಗಳು ಕಾತರರಾಗಿದ್ದಾರೆ. ಇಂದು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಖ್ಯಾತ ನಟ ಜಗಪತಿ ಬಾಬು ಅವರಿಗೆ ಡಿ ಬಾಸ್ ದರ್ಶನ್ ವಿಶ್ ಮಾಡಿ, ರಾಬರ್ಟ್ ಸಿನಿಮಾದ ಪೋಸ್ಟರ್ ಹಂಚಿಕೊಂಡಿದ್ದಾರೆ.

ಜಗಪತಿ ಬಾಬು ಜೊತೆ ಕೆಲಸ ಮಾಡಿದ್ದು ಸಂತಸ ತಂದಿದೆ
'ದಕ್ಷಿಣ ಭಾರತದ ಖ್ಯಾತ ನಟ ಜಗಪತಿ ಬಾಬು ಸರ್ ಅವರಿಗೆ ಜನ್ಮದಿನದ ಶುಭಾಶಯಗಳು. ರಾಬರ್ಟ್‌ಗಾಗಿ ಅವರೊಂದಿಗೆ ಕೆಲಸ ಮಾಡಿದ್ದು ಸಂತೋಷವಾಗಿದೆ. ನಮ್ಮ ಚಿತ್ರತಂಡದಿಂದ ಅವರ ಫಸ್ಟ್ ಲುಕ್ ಪೋಸ್ಟರ್' ಎಂದು ಟ್ವೀಟ್ ಮಾಡಿದ್ದಾರೆ. ವಿಶೇಷ ಎಂದರೆ ಕನ್ನಡ ಮತ್ತು ತೆಲುಗು ಎರಡು ಪೋಸ್ಟರ್ ಗಳನ್ನು ರಿಲೀಸ್ ಮಾಡಿದ್ದಾರೆ.
ರಾಬರ್ಟ್
ಗೆ
ಧ್ವನಿ
ನೀಡಿದ
ಜಗಪತಿ
ಬಾಬು,
ಖುಷಿ
ಹಂಚಿಕೊಂಡ
ನಿರ್ದೇಶಕ

ರಾಬರ್ಟ್ ನೋಡಲು ಅಭಿಮಾನಿಗಳ ಕಾತರ
ಜಗಪತಿ ಬಾಬು ಗಂಭೀರ ಲುಕ್ ಅಭಿಮಾನಿಗಳ ನಿದ್ದೆ ಗೆಡಿಸಿದೆ. ಚಿತ್ರದಲ್ಲಿ ದರ್ಶನ್ ಮತ್ತ ಜಗಪತಿ ಬಾಬು ಇಬ್ಬರು ಘಟಾನುಘಟಿಗಳ ನಡುವಿನ ಕಾಳಗ ನೋಡಲು ಅಭಿಮಾನಿಗಳು ಉತ್ಸುಕರಾಗಿದ್ದಾರೆ. ಈಗಾಗಲೇ ಕೆಲವು ಕನ್ನಡ ಸಿನಿಮಾಗಳಲ್ಲಿ ಜಗಪತಿ ಬಾಬು ನಟಿಸಿದ್ದಾರೆ. ಮತ್ತೊಮ್ಮೆ ಕನ್ನಡ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದಾರೆ.

ದರ್ಶನ್ ಹುಟ್ಟುಹಬ್ಬಕ್ಕೆ ರಾಬರ್ಟ್ ಟ್ರೈಲರ್
ಫೆಬ್ರವರಿ 16 ರಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಹುಟ್ಟುಹಬ್ಬವಿದ್ದು, ಆ ವಿಶೇಷವಾಗಿ ರಾಬರ್ಟ್ ಟ್ರೈಲರ್ ಉಡುಗೊರೆಯಾಗಿ ನೀಡಲಾಗುತ್ತಿದೆ. ಕನ್ನಡ ಮತ್ತು ತೆಲುಗಿನಲ್ಲಿ ರಾಬರ್ಟ್ ಟ್ರೈಲರ್ ರಿಲೀಸ್ ಆಗಲಿದೆ. ಇನ್ನು ಮಾರ್ಚ್ 11ರಂದು ರಾಬರ್ಟ್ ಸಿನಿಮಾ ರಿಲೀಸ್ ಆಗುತ್ತಿದೆ. ಕನ್ನಡ ಮತ್ತು ತೆಲುಗು ಎರಡು ಭಾಷೆಯಲ್ಲಿ ಏಕಕಾಲಕ್ಕೆ ಸಿನಿಮಾ ತೆರೆಗೆ ಬರುತ್ತಿದೆ.