'ಬಾ ಬಾ ನಾ ರೆಡಿ' ಎಂದು 2020ಕ್ಕೆ ಚಾಲೆಂಜ್ ಹಾಕಿದ ಚಾಲೆಂಜಿಂಗ್ ಸ್ಟಾರ್
ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೊಸ ವರ್ಷಕ್ಕೆ ಚಾಲೆಂಜ್ ಹಾಕಿದ್ದಾರೆ. ಬಾ ಬಾ ನಾ ರೆಡಿ ಎಂದು 2020ಕ್ಕೆ ಸವಾಲ್ ಎಸೆದಿದ್ದಾರೆ. ಜೊತೆಗೆ ರಾಬರ್ಟ್ ಚಿತ್ರದ ಜಭರ್ದಸ್ತ್ ಲುಕ್ ಶೇರ್ ಮಾಡಿದ್ದಾರೆ. ಅಂದ್ಹಾಗೆ ದರ್ಶನ್ ಯಾಕೆ ಸವಾಲ್ ಎಸೆದಿದ್ದಾರೆ ಎಂದು ಅಂದುಕೊಳ್ಳುತ್ತಿದ್ದೀರಾ. ಹೊಸ ವರ್ಷಕ್ಕೆ ಡಿ ಬಾಸ್ ವಿಭಿನ್ನವಾಗಿ ವಿಶ್ ಮಾಡಿದ್ದಾರೆ.
ಹೌದು, 2020 ಹೊಸ ವರ್ಷಕ್ಕೆ ದರ್ಶನ್ ಸಾಮಾಜಿಕ ಜಾಲತಾಣದಲ್ಲಿ ಶುಭಹಾರೈಸಿದ್ದಾರೆ. ಎರಡು ದೋಣಿ ಮೇಲೆ ಯಾವತ್ತೂ ಪಯಣ ಮಾಡಬೇಡಿ, ಕನಸುಗಳು ಸಾಕಾರಗೊಳ್ಳಲಿ ಎಂದು ಅಭಿಮಾನಿಗಳಿಗೆ ಕಿವಿಮಾತು ಹೇಳಿದ್ದಾರೆ. ದರ್ಶನ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದು ಹೀಗೆ,
"ಕಳೆದು ಹೋದ ಸಮಯ ಮತ್ತೆ ಹಿಂದಿರುಗಿ ಬರಲು ಸಾಧ್ಯವಿಲ್ಲ. ಎರಡು ದೋಣಿ ಮೇಲೆ ಯಾವತ್ತೂ ಪಯಣ ಮಾಡಬೇಡಿ. ನಿಮ್ಮ ಗುರಿ, ಅದಕ್ಕೆ ಬೇಕಾದ ಕಾರ್ಯ ನಿಷ್ಠೆ ಮೇಲೆ ನಂಬಿಕೆ ಇರಲಿ. ಈ ವರ್ಷ ನಿಮ್ಮ ಎಲ್ಲಾ ಕನಸುಗಳು ಸಾಕಾರಗೊಳ್ಳಲಿ. ನಿಮಗೂ ನಿಮ್ಮ ಕುಟುಂಬಕ್ಕೂ ಹೊಸ ವರ್ಷದ ಹಾರ್ಧಿಕ ಶುಭಾಶಯಗಳು" ಎಂದು ಹೇಳಿದ್ದಾರೆ.

ದರ್ಶನ್ ಸದ್ಯ ರಾಬರ್ಟ್ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಇನ್ನೇನು ಕೊನೆಯ ಹಂತದ ಚಿತ್ರೀಕರಣದಲ್ಲಿರುವ ರಾಬರ್ಟ್ ಮುಗಿಸಿ, ದರ್ಶನ್ ಮದಕರಿ ನಾಯಕನಾಗಿ ಆಳ್ವಿಕೆ ಮಾಡಲು ಸಜ್ಜಾಗುತ್ತಿದ್ದಾರೆ. ಈಗಾಗಲೆ ಚಿತ್ರದ ಮುಹೂರ್ತ ನೆರವೇರಿದ್ದು ಕೆಲವ ದಿನಗಳಲ್ಲಿ ಚಿತ್ರೀಕರಣಕ್ಕೆ ಹೊರಡಲಿದೆ ಚಿತ್ರತಂಡ.


Click it and Unblock the Notifications











