For Quick Alerts
  ALLOW NOTIFICATIONS  
  For Daily Alerts

  'ಕಾರ್ಗಿಲ್ ವಿಜಯೋತ್ಸವ'ವನ್ನ ಸ್ಮರಿಸಿದ ಚಾಲೆಂಜಿಂಗ್ ಸ್ಟಾರ್

  By Bharath Kumar
  |

  ದೇಶಾದ್ಯಂತ ಇಂದು (ಜುಲೈ 26) ಕಾರ್ಗಿಲ್ ವಿಜಯೋತ್ಸವ ಆಚರಿಸಲಾಗುತ್ತಿದ್ದು, ಕಾರ್ಗಿಲ್ ಯುದ್ಧದಲ್ಲಿ ಮಡಿದ ಸೈನಿಕರಿಗೆ ಭಾರತೀಯರು ಗೌರವ ಸಲ್ಲಿಸುತ್ತಿದ್ದಾರೆ. ಈ ವಿಶೇಷ ಸಂಭ್ರಮಕ್ಕೆ ಕಾರಣವಾದ ಎಲ್ಲ ಸೈನಿಕರಿಗೂ ಕನ್ನಡ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಧನ್ಯವಾದ ತಿಳಿಸಿದ್ದಾರೆ.

  ''1999 ರಲ್ಲಿ ನಡೆದ ಕಾರ್ಗಿಲ್ ಮಹಾಯುದ್ಧದಲ್ಲಿ ದೇಶದ ಸಂರಕ್ಷಣೆಗಾಗಿ ಪಣ ತೊಟ್ಟು ಪ್ರಚಂಡ ಜಯಭೇರಿ ಬಾರಿಸಿದ ಭಾರತೀಯ ಸೇನೆಪಡೆಯ ಕಾರ್ಯ ಶ್ರದ್ಧೆಯನ್ನು ಸ್ಮರಿಸಲು ಈ ವಿಜಯ್ ದಿವಸ್ ಆಚರಿಸಲಾಗುತ್ತದೆ. ನಮ್ಮೆಲ್ಲರ ಒಳಿತಿಗಾಗಿ ತಮ್ಮ ಪ್ರಾಣವನ್ನು ಲೆಕ್ಕಿಸದೆ ಹೋರಾಡುವ ಪ್ರತಿಯೊಬ್ಬ ಸೈನಿಕನಿಗೂ ಹಾಟ್ಸ್ ಆಫ್'' ಎಂದು ದರ್ಶನ್ ಟ್ವೀಟ್ ಮಾಡಿದ್ದಾರೆ.

  ವಿಜಯ್ ದಿವಸ್: ಕಾರ್ಗಿಲ್ ಯುದ್ಧದ ಆ ರೋಚಕ ಕ್ಷಣಕ್ಕೆ 19 ವರ್ಷ

  ಕೇವಲ ದರ್ಶನ್ ಮಾತ್ರವಲ್ಲದೇ ಮಲಯಾಳಂ ನಟ ಮೋಹನ್ ಲಾಲ್, ಬಾಲಿವುಡ್ ನಟ ಸಿದ್ಧಾರ್ಥ ಮಲ್ಹೋತ್ರ, ಅನುಪಮ್ ಖೇರ್ ಸೇರಿದಂತೆ ಹಲವು ಸಿನಿಮಾ ತಾರೆಯರು 'ಕಾರ್ಗಿಲ್ ವಿಜಯ ದಿವಸ್'ವನ್ನ ಸ್ಮರಿಸಿದ್ದಾರೆ.

  1999 ಜುಲೈ 26 ರಂದು ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ಭಾರತೀಯ ಸೈನಿಕರು ವಿಜಯಪತಾಕೆಯನ್ನು ಹಾರಿಸಿದ ದಿನವಾಗಿದೆ. ಪಾಕ್ ಮೇಲೆ ಭಾರತೀಯ ಯೋಧರು ವಿಜಯ ಸಾಧಿಸಿದ ಸ್ಮರಣಾರ್ಥ ಇಂದು ದೇಶದೆಲ್ಲೆಡೆ ಕಾರ್ಗಿಲ್ ವಿಜಯ್ ದಿವಸ್' ಆಚರಣೆ ಮಾಡಲಾಗುತ್ತಿದೆ.

  ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ, ರಕ್ಷಣ ಸಚಿವ ಸೇರಿದಂತೆ ರಾಷ್ಟ್ರದ ಎಲ್ಲ ರಾಜ್ಯಗಳಲ್ಲೂ 'ಕಾರ್ಗಿಲ್ ವಿಜಯ ದಿವಸ' ಆಚರಿಸಲಾಗುತ್ತಿದೆ.

  English summary
  Kannada actor, challenging star Darshan has pays tributes to kargil vijay diwas.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X