ಕಿಚ್ಚ ಸುದೀಪ್ ತಾಯಿ ಸರೋಜಾ ಸಂಜೀವ್ ಇನ್ನಿಲ್ಲ: ಕಿಚ್ಚನಿಗೆ ಮಾತೃ ವಿಯೋಗ
ಬಿಗ್‌ಬಾಸ್ ಕನ್ನಡ ವೇದಿಕೆ ಮೇಲೆ ಕಿಚ್ಚ ಸುದೀಪ್ ಅದ್ಭುತ ಮಾತುಗಳನ್ನು ಕೇಳಿದ್ದ ಅಭಿಮಾನಿಗಳು ಖುಷಿ ಪಟ್ಟಿದ್ದರು. ಆದರೆ, ಈ ಖುಷಿಯಲ್ಲಿಯೇ ನೋವಿನ ಸುದ್ದಿ ಕೇಳಬೇಕಾಗಿದೆ. ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಸಂಜೀವ್ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಕಳೆದ ಕೆಲವು ದಿನಗಳಿಂದ ಸುದೀಪ್ ತಾಯಿ ಸರೋಜಾ ಸುದೀಪ್ ಅನಾರೋಗ್ಯದಿಂದ ಬಳಲುತ್ತಿದ್ದರು. ಇವರನ್ನು ಚಿಕಿತ್ಸೆಗಾಗಿ ಅಪೋಲೊ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾದಗೆ ಇಂದು (ಅಕ್ಟೋಬರ್ 20) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು.

ಇಂದು (ಅಕ್ಟೋಬರ್ 20) ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಸಂಜೀವ್ ಅವರ ಪಾರ್ಥೀವ ಶರೀರವನ್ನು ಜೆಪಿ ನಗರದ ಮನೆಗೆ ತೆಗೆದುಕೊಂಡು ಬರಲಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ.
ಕಿಚ್ಚ ಸುದೀಪ್‌ಗೆ ತಾಯಿ ಅಂದರೆ ಬಲು ಪ್ರೀತಿ. ತಾಯಿಯ ಬಗ್ಗೆ ಆಗಾಗ ವೇದಿಕೆ ಮೇಲೆ ಹೇಳಿಕೊಂಡಿದ್ದು ಇದೆ. ಕಿಚ್ಚನಿಗೆ ಸದಾ ಬೆಂಬಲವಾಗಿ ನಿಂತಿದ್ದ ತಾಯಿ ಸರೋಜಾ ಸಂಜೀವ್ ಅವರನ್ನು ಕಳೆದುಕೊಂಡಿದ್ದಾರೆ. ಕಿಚ್ಚ ಸುದೀಪ್ ಕುಟುಂಬದಲ್ಲಿ ಶೋಕ ಮನೆ ಮಾಡಿದೆ. ಮೂಲಗಳ ಪ್ರಕಾರ, ಕಿಚ್ಚ ಸುದೀಪ್ ಅವರ ತಾಯಿ ಬೆಳಗ್ಗೆ 7.04ಕ್ಕೆ ಆಸ್ಪತ್ರೆಯಲ್ಲಿ ಕೊನೆಯುಸಿರು ಎಳೆದಿದ್ದಾರೆ ಎನ್ನಲಾಗಿದೆ.
ಕಳೆದ ಕೆಲವು ದಿನಗಳಿಂದ ಕಿಚ್ಚ ಸುದೀಪ್ ತಾಯಿ ಸರೋಜಾ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಜಯನಗರದ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸರೋಜಾ ಸಂಜೀವ್ ಅವರು ಕೊನೆಯುಸಿರೆಳೆದಿದ್ದಾರೆ. ವಯೋ ಸಹಜ ಆರೋಗ್ಯ ಸಮಸ್ಯೆ ಎಂದು ಹೇಳಲಾಗುತ್ತಿದ್ದು, ಇನ್ನೂ ಹೆಚ್ಚಿನ ಮಾಹಿತಿ ಹೊರಬೀಳಬೇಕಿದೆ.
ಕಿಚ್ಚ ಸುದೀಪ್ ತಾಯಿ ಸರೋಜಾ ಸಂಜೀವ್ ಅವರು ಉಡುಪಿ ಮೂಲದವರಾಗಿದ್ದರು. ತಾಯಿಯ ಮಾತೃಭಾಷೆ ತುಳು. ಅವರು ತುಳು ಮಾತಾಡುತ್ತಾಡುತ್ತಾರೆ. ನನಗೆ ಒಂದೆರಡು ಪದಗಳನ್ನು ಹೇಳಿಕೊಟ್ಟಿದ್ದಾರೆ. ಆದರೆ, ನನಗೆ ಆ ಭಾಷೆ ಮಾತಾಡುವುದಕ್ಕೆ ಬರುವುದಿಲ್ಲ ಎಂದು ಕಿಚ್ಚ ಸುದೀಪ್ ಖಾಸಗಿ ಕಾರ್ಯಕ್ರಮದ ವೇದಿಕೆ ಮೇಲೆ ಹೇಳಿಕೊಂಡಿದ್ದರು.
ಸರೋಜಾ ಸಂಜೀವ್ ಅವರು ಮಗನ ಸಿನಿಮಾ ಕಾರ್ಯಕ್ರಮಗಳಲ್ಲಿ ಆಗಾಗ ಕಾಣಿಸಿಕೊಳ್ಳುತ್ತಿದ್ದರು. ಮಗನ ಯಶಸ್ಸನ್ನು ನೋಡಿ ಖುಷಿ ಪಡುತ್ತಿದ್ದರು. ಕಿಚ್ಚ ಸುದೀಪ್ ಯಶಸ್ಸಿನ ಹಿಂದೆ ತಾಯಿಯ ಪಾತ್ರ ದೊಡ್ಡದಿದೆ. ಹೀಗಾಗಿ ಸುದೀಪ್ ಕೂಡ ಅಮ್ಮನ ಬಗ್ಗೆ ವೇದಿಕೆ ಮೇಲೆ ಆಗಾಗ ಹೇಳಿಕೊಳ್ಳುತ್ತಿದ್ದರು. ಇತ್ತೀಚೆಗೆ ಬಿಗ್ ಬಾಸ್ ವೇದಿಕೆ ಮೇಲೂ ತಾಯಿ ಬಗ್ಗೆ ಮಾತಾಡಿದ್ದರು. "ಅಮ್ಮ ಬರಿಗಾಲಲ್ಲಿ ಬಂದು ನಿಂತಿದ್ದೇನೆ. ನವರಾತ್ರಿ ಹಬ್ಬಕ್ಕೆ ತಕ್ಕಂತೆ ಡ್ರೆಸ್ ಮಾಡಿಕೊಂಡಿದ್ದೇನೆ ನೋಡಿ" ಎಂದು ಹೇಳಿದ್ದರು. ತಾಯಿ ಅನಾರೋಗ್ಯ ಹಿನ್ನೆಲೆಯಲ್ಲಿ ಸುದೀಪ್ ನಡೆಸಿಕೊಡುತ್ತಿದ್ದ ಬಿಗ್‌ಬಾಸ್ ಕಾರ್ಯಕ್ರಮವನ್ನು ಬೇಗನೇ ಮುಗಿಸಿದ್ದಾರೆಂದು ಹೇಳಲಾಗಿದೆ.


Click it and Unblock the Notifications











